Homeಮುಖಪುಟಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿದ್ದ ಪ್ರಾಧ್ಯಾಪಕಿಗೆ ಎನ್‌ಐಟಿ ಡೀನ್‌ ಆಗಿ ಭಡ್ತಿ : ತೀವ್ರ ವಿರೋಧ

ಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿದ್ದ ಪ್ರಾಧ್ಯಾಪಕಿಗೆ ಎನ್‌ಐಟಿ ಡೀನ್‌ ಆಗಿ ಭಡ್ತಿ : ತೀವ್ರ ವಿರೋಧ

- Advertisement -
- Advertisement -

ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿ, ಕಳೆದ ವರ್ಷ ಪೊಲೀಸ್ ಪ್ರಕರಣದಲ್ಲಿ ಸಿಲುಕಿದ್ದ ವಿವಾದಿತ ಪ್ರೊಫೆಸರ್ ಶೈಜಾ ಆಂಡವನ್ ಅವರನ್ನು ಯೋಜನೆ ಮತ್ತು ಅಭಿವೃದ್ಧಿ ವಿಭಾಗದ ಡೀನ್ ಆಗಿ ಕ್ಯಾಲಿಕಟ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) ಭಡ್ತಿ ನೀಡಿದೆ. ಇದು ಭಾರೀ ವಿರೋಧಕ್ಕೆ ಕಾರಣವಾಗಿದೆ.

ಪ್ರೊ. ಶೈಜಾ ಡೀನ್ ಆಗಿ ನೇಮಿಸಿ ಫೆಬ್ರವರಿ 24 ರಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತು ಮಾತನಾಡಿರುವ ಅವರು, “ನನ್ನ ನೇಮಕ ಎನ್‌ಐಟಿ ಕ್ಯಾಲಿಕಟ್‌ನ ನಿರ್ದೇಶಕರು ತೆಗೆದುಕೊಂಡ ನಿರ್ಧಾರ” ಎಂದು ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕಳೆದ ವರ್ಷದ ಜನವರಿ 30ರ ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆಯಂದು ಹಿಂದುತ್ವ ರಾಜಕೀಯಕ್ಕೆ ಹೆಸರುವಾಸಿಯಾದ ವಕೀಲ ಕೃಷ್ಣ ರಾಜ್ ಹಾಕಿದ್ದ ಪೋಸ್ಟ್‌ ಒಂದಕ್ಕೆ “ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆಯ ಬಗ್ಗೆ ಹೆಮ್ಮೆಯಿದೆ” ಎಂದು ಪ್ರೊ. ಶೈಜಾ ಕಾಮೆಂಟ್ ಮಾಡಿದ್ದರು. ಆಗ ಅವರು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿದ್ದರು.

ವ್ಯಾಪಕ ವಿರೋಧ ವ್ಯಕ್ತವಾದ ನಂತರ ಶೈಜಾ ಅವರು ಆ ಕಾಮೆಂಟ್ ಅನ್ನು ಡಿಲಿಟ್ ಮಾಡಿದ್ದರು. ಆದರೆ, ಕುನ್ನಮಂಗಲಂ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಶೈಜಾ ನಂತರ ಜಾಮೀನು ಪಡೆದರು. ವಿವಾದಿತ ಕಾಮೆಂಟ್ ಕುರಿತು ತನಿಖೆ ನಡೆಸಲು ಎನ್‌ಐಟಿ ಒಂದು ಸಮಿತಿಯನ್ನು ರಚಿಸಿತ್ತು ಮತ್ತು ಆ ಸಮಿತಿಯ ವರದಿಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.

ಫೆಬ್ರವರಿ 2024 ರಂದು ದಿ ನ್ಯೂಸ್ ಮಿನಿಟ್‌ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ್ದ ಪ್ರೊ. ಶೈಜಾ “ನಾನು ಮೊದಲು ಕಾಮೆಂಟ್ ಮಾಡಿದಾಗ ಅದರ ಬಗ್ಗೆ ಹೆಚ್ಚು ಯೋಚಿಸಿರಲಿಲ್ಲ. ನಾನು ‘ವೈ ಐ ಕಿಲ್ಡ್ ಗಾಂಧಿ’ ಪುಸ್ತಕವನ್ನು ಓದಿದ್ದೆ ಮತ್ತು ಅದರಲ್ಲಿ ಉಲ್ಲೇಖಿಸಲಾದ ಕೆಲವು ಅಂಶಗಳು ನಿಜವೆಂದು ಭಾವಿಸಿದ್ದೆ. ಆದ್ದರಿಂದ ನಾನು ಕಾಮೆಂಟ್ ಮಾಡಿದ್ದೆ. ಆದರೆ, ಈಗ, ನಾನು ಆ ಕಾಮೆಂಟ್ ಮಾಡಬಾರದಿತ್ತು ಎಂದು ಅನಿಸಿತು. ಹಾಗಾಗಿ, ಅದನ್ನು ಡಿಲಿಟ್ ಮಾಡಿದೆ” ಎಂದು ಹೇಳಿದ್ದರು.

ಶೈಜಾ ಅವರನ್ನು ಡೀನ್ ಆಗಿ ಭಡ್ತಿ ನೀಡಿ ನೇಮಕ ಮಾಡಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿ ಎನ್‌ಐಟಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ. “ಕೇಂದ್ರ ಸರ್ಕಾರದ ಅಡಿಯಲ್ಲಿರುವ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಕಾರ್ಯಸೂಚಿಯನ್ನು ಜಾರಿಗೊಳಿಸಲಾಗುತ್ತಿದೆ ಎಂಬುವುದನ್ನು ಶೈಜಾ ಅವರ ನೇಮಕಾತಿ ತೋರಿಸುತ್ತದೆ. ಗಾಂಧೀಜಿಯನ್ನು ಅವಮಾನಿಸಿದ ಪ್ರಾಧ್ಯಾಪಕಿಗೆ ಬಡ್ತಿ ನೀಡಲಾಗಿದೆ. ಅವರ ನೇಮಕಾತಿ ಹಿಂಪಡೆಯುವವರೆಗೆ ನಾವು ಹೋರಾಟ ನಡೆಸುತ್ತೇವೆ” ಎಂದು ಕಾಂಗ್ರೆಸ್ ಕೋಝಿಕ್ಕೋಡ್ ಜಿಲ್ಲಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೇಳಿದ್ದಾರೆ.

ಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...