Homeಮುಖಪುಟಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

ಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜೋಯಾ ಹಸನ್ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ನಡೆಸಬೇಕಿದ್ದ ಭಾಷಣವನ್ನು ಗುರುಗ್ರಾಮ್ ವಿಶ್ವವಿದ್ಯಾಲಯವು ಇತ್ತೀಚೆಗೆ ರದ್ದುಗೊಳಿಸಿದೆ ಎಂದು ದಿ ವೈರ್ ಬುಧವಾರ ವರದಿ ಮಾಡಿದೆ. “ಸಮಾನ ಹಕ್ಕುಗಳಿಗಾಗಿ ಪ್ಯಾಲೆಸ್ಟೀನಿಯನ್ ಹೋರಾಟ: ಭಾರತ ಮತ್ತು ಜಾಗತಿಕ ಪ್ರತಿಕ್ರಿಯೆ” ಎಂಬ ಶೀರ್ಷಿಕೆಯಡಿಯಲ್ಲಿ, ನವೆಂಬರ್ 12 ರಂದು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗವು ಈ ಭಾಷಣವನ್ನು ಆಯೋಜಿಸಿತ್ತು.

ನವೆಂಬರ್ 10 ರಂದು ಸಂಘಟಕರು ಜೋಯಾ ಅವರಿಗೆ ಕರೆ ಮಾಡಿದ್ದು, ಕಾರ್ಯಕ್ರಮ ರದ್ದು ಮಾಡಲಾಗಿರುವ ಬಗ್ಗೆ ತಿಳಿಸಲಾಗಿತ್ತು. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ದಿನೇಶ್ ಕುಮಾರ್, ಆಹ್ವಾನ ಪತ್ರಿಕೆಯಲ್ಲಿ ತನ್ನನ್ನು “ಮುಖ್ಯ ಪೋಷಕ” ಎಂದು ವಿವರಿಸಲಾಗಿತ್ತಾದರೂ, ಈ ಕಾರ್ಯಕ್ರಮಕ್ಕೆ ಅವರ ಅನುಮೋದನೆಯನ್ನು ಕೋರಲಾಗಿರಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿಶ್ವವಿದ್ಯಾನಿಲಯದ ಶಿಕ್ಷಕರೊಬ್ಬರು ಚರ್ಚೆಯನ್ನು ಏರ್ಪಡಿಸಿದ್ದರು. ಅಂದು ನಾನು ಕ್ಯಾಂಪಸ್‌ನಲ್ಲಿ ಇರಲಿಲ್ಲವಾದ್ದರಿಂದ ಇದು ನನಗೆ ತಿಳಿದಿರಲಿಲ್ಲ. ಆದರೆ ಭಾಷಣದ ವಿಷಯವು ವಿವಾದಾಸ್ಪದವಾಗಿರುವುದರಿಂದ ನಾವು ಅದನ್ನು ನಂತರ ರದ್ದುಗೊಳಿಸಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಆಗಿರುವ ಜೋಯಾ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಪತ್ರಿಕೆಯಲ್ಲಿ ಬರೆದ ಬರಹದ ನಂತರ ಗುರುಗ್ರಾಲ್‌ ಯುನಿವರ್ಸಿಟಿಯ ರಾಜ್ಯಶಾಸ್ತ್ರ ವಿಭಾಗವು ತನ್ನನ್ನು ಸಂಪರ್ಕಿಸಿತ್ತು ಎಂದು ಹೇಳಿದ್ದಾರೆ.

“ಪ್ಯಾಲೆಸ್ತೀನ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆಯ ಕುರಿತು ಸರ್ಕಾರ ಮತ್ತು ಸರ್ಕಾರೇತರ ಮಟ್ಟದಲ್ಲಿ ಈ ಚರ್ಚೆಯನ್ನು ನಡೆಸುವುದು ಬಹಳ ಮುಖ್ಯ ಎಂದು ಅವರು ನನಗೆ ಹೇಳಿದ್ದರು. ಹಾಗಾಗಿ ನಾನು ಅದಕ್ಕೆ ತಕ್ಷಣ ಒಪ್ಪಿಕೊಂಡೆ” ಎಂದು ಜೋಯಾ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಉಪನ್ಯಾಸ ಶೀರ್ಷಿಕೆಯ ಬಗ್ಗೆ ವಿಚಾರಿಸಲು ನವೆಂಬರ್ 5 ರಂದು ಸಂಘಟಕರು ಮತ್ತೆ ನನಗೆ ಕರೆ ಮಾಡಿದ್ದರು. ಅಂದು ಅವರು ನವೆಂಬರ್ 12 ರಂದು ನಿಗದಿಯಾಗಿದ್ದ ಕಾರ್ಯಕ್ರಮದ ಸಾರಿಗೆ ಸೇರಿದಂತೆ ಭಾಷಣದ ವ್ಯವಸ್ಥೆಯನ್ನು ಖಚಿತಪಡಿಸಿದ್ದರು” ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅದೇ ವೇಳೆ ಅವರು ಕಾರ್ಯಕ್ರಮಕ್ಕೆ ಅನುಮೋದನೆ ಪಡೆದಿದ್ದಾರೆ ಎಂದು ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ.

ಅದಾಗ್ಯೂ, ನವೆಂಬರ್ 10 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಯೋಜಕರಿಗೆ ಆರೋಗ್ಯ ಸರಿಯಾಗಿಲ್ಲ ಎಂದು ತಿಳಿಸಲಾಯಿತು. “ಆರೋಗ್ಯದ ಸಮಸ್ಯೆಯಾಗಿದ್ದರೆ, ನೀವು ಮೊದಲೇ ಏರ್ಪಡಿಸಿದ ಈವೆಂಟ್ ಅನ್ನು ರದ್ದುಗೊಳಿಸುವುದು ಯಾಕೆ? ಅವರು ಪ್ಯಾಲೆಸ್ಟೈನ್ ಕುರಿತು ಭಾಷಣವನ್ನು ನಡೆಸಲು ಆಸಕ್ತಿ ಹೊಂದಿದ್ದರು ಎಂಬುದು ಅಧ್ಯಾಪಕರ ಹೇಳಿಕೆಯಾಗಿದೆ, ಆದರೂ ಅಂತಿಮವಾಗಿ ಅದು ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪಶ್ಚಿಮ ಏಷ್ಯಾದ ಅಧ್ಯಯನಗಳ ಕೇಂದ್ರದಲ್ಲಿ ಭಾರತ, ಇರಾನ್, ಪ್ಯಾಲೇಸ್ಟಿನಿಯನ್ ಮತ್ತು ಲೆಬನಾನಿನ ರಾಯಭಾರಿಗಳನ್ನು ಒಳಗೊಂಡ ಮೂರು ಸೆಮಿನಾರ್‌ಗಳನ್ನು ರದ್ದುಗೊಳಿಸಲಾಗಿತ್ತು.

ಅಕ್ಟೋಬರ್ 7, 2023 ರಂದು ಪ್ರಾರಂಭವಾದ ಗಾಜಾ ವಿರುದ್ಧದ ಇಸ್ರೇಲ್‌ನ ಮಿಲಿಟರಿ ಆಕ್ರಮಣದ ಹಿನ್ನೆಲೆಯಲ್ಲಿ ಇದು ನಡೆದಿದೆ. 2023ರ ಅಕ್ಟೋಬರ್‌ನಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳಿಂದ 16,500 ಮಕ್ಕಳು ಸೇರಿದಂತೆ 40,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....