Homeಕರ್ನಾಟಕಪ್ರಜ್ವಲ್‌ ರೇವಣ್ಣ ವಿರುದ್ಧ UAPAಯಡಿ ಪ್ರಕರಣ ದಾಖಲಿಸುವಂತೆ ಸಿಎಂಗೆ ಪತ್ರ ಬರೆದ ಪ್ರಗತಿಪರ ಚಿಂತಕರು

ಪ್ರಜ್ವಲ್‌ ರೇವಣ್ಣ ವಿರುದ್ಧ UAPAಯಡಿ ಪ್ರಕರಣ ದಾಖಲಿಸುವಂತೆ ಸಿಎಂಗೆ ಪತ್ರ ಬರೆದ ಪ್ರಗತಿಪರ ಚಿಂತಕರು

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅವರ ವಿರುದ್ಧ ಯುಎ‍ಪಿಎಯಡಿ ಪ್ರಕರಣ ದಾಖಲಿಸಬೇಕು, ಶಾಸಕ ಎಚ್.ಡಿ.ರೇವಣ್ಣ ಅವರನ್ನು ತನಿಖೆ ಪೂರ್ಣಗೊಳ್ಳುವವರೆಗೂ ವಿಧಾನಸಭಾ ಸದಸ್ಯತ್ವದಿಂದ ಅಮಾನತು ಮಾಡಬೇಕೆಂದು    100ಕ್ಕೂ ಹೆಚ್ಚು ಮಂದಿ ಪ್ರಗತಿಪರ ಚಿಂತಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಕುಂ.ವೀರಭದ್ರಪ್ಪ, ಜಿ. ರಾಮಕೃಷ್ಣ, ವಸುಂಧರ ಭೂಪತಿ, ಕೆ. ಶರೀಫಾ, ಮೀನಾಕ್ಷಿ ಬಾಳಿ, ಎಂ.ಆರ್. ಕಮಲಾ, ಕೆ. ಫಣಿರಾಜ್‌, ನಾಗೇಶ ಹೆಗಡೆ, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ರತಿರಾವ್ ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಪ್ರಗತಿಪರ ಚಿಂತಕರು ಸಿಎಂ ಸಿದ್ದರಾಮಯ್ಯಗೆ ಈ ಕುರಿತು ಪತ್ರವನ್ನು ಬರೆದಿದ್ದಾರೆ.

ಪ್ರಜ್ವಲ್‌ ವಿರುದ್ಧ ಆರೋಪ ಕೇಳಿ ಬಂದ ತಕ್ಷಣ ಅವರ ಚಲನವಲನಗಳ ಮೇಲೆ ನಿಗಾ ವಹಿಸದೆ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ. ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ವಿದೇಶಕ್ಕೆ ಪಲಾಯನ ಮಾಡಲು ಅವಕಾಶ ನೀಡಬಾರದಿತ್ತು. ಇದರಿಂದ ಮಹಿಳೆಯರು ಸರ್ಕಾರದ ಮೇಲೆ ಇಟ್ಟ ವಿಶ್ವಾಸಕ್ಕೆ ಧಕ್ಕೆಯಾಗಿದೆ. ಹಾಸನ ಕ್ಷೇತ್ರದ ಚುನಾವಣೆಯನ್ನು ಸ್ಥಗಿತಗೊಳಿಸದೆ ಆರೋಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಒದಗಿಸಿದ್ದು ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಮಾಡಿದ ಅಪಚಾರವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇಂತಹ ಪ್ರಕರಣದಲ್ಲಿ ರಾಜಕೀಯ ನಾಯಕರು ಜಾತಿ ಆಧಾರಿತ, ಲಿಂಗತ್ವ ಸೂಕ್ಷ್ಮತೆ ಇಲ್ಲದ ಹೇಳಿಕೆ ನೀಡುತ್ತಿದ್ದಾರೆ. ಸಮೂಹ ಮಾಧ್ಯಮಗಳು ಸಂತ್ರಸ್ತರನ್ನು ಅಪರಾಧಿಗಳಂತೆ ಬಿಂಬಿಸುತ್ತಿವೆ. ಅವರ ಮಾನಸಿಕ ನೆಮ್ಮದಿ ಹಾಳುಮಾಡಿವೆ. ಸಂತ್ರಸ್ತೆಯರ ಘನತೆಯನ್ನು ಕುಂದಿಸುತ್ತಿವೆ. ಗುರುತು ಬಯಲಾದ ಕುಟುಂಬಗಳು ತೀವ್ರ ಸಮಸ್ಯ ಎದುರಿಸಿದೆ. ಇಂತಹ ಕುಟುಂಬಗಳ ಸದಸ್ಯರು ಮತ್ತು ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಕೆಲವರು ಆತ್ಮಹತ್ಯೆಗೂ ಪ್ರಯತ್ನಿಸಿದ್ದಾರೆ. ದೂರು ಕೊಡುವುದಕ್ಕೆ ಹಿಂಜರಿಯುತ್ತಿದ್ದಾರೆ. ಇಂತಹ ಸಮಯದಲ್ಲಿ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಈಗಾಗಲೇ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಾಹಿತಿಗಳು ಪತ್ರ ಬರೆದಿರುವುದರಿಂದ ಎಚ್ಚರಿಸಿದಂತಾಗುತ್ತದೆ. ಸಾಹಿತಿಗಳು ಪತ್ರದ ಮೂಲಕ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಸರ್ಕಾರ ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಆಗಿತ್ತು. ವಿಡಿಯೋ ವೈರಲ್‌ ಬೆನ್ನಲ್ಲಿ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ. ಪ್ರಜ್ವಲ್‌ ತನಿಖೆಗೆ ಎಸ್‌ಐಟಿ ಅಧಿಕಾರಿಗಳು ಬ್ಲೂ ಕಾರ್ನರ್‌ ನೊಟೀಸ್ ಜಾರಿಗೊಳಿಸಿದ್ದಾರೆ.

ಇದನ್ನು ಓದಿ: ಕೇಂದ್ರದಲ್ಲಿ ಸರ್ಕಾರ ರಚನೆಗೆ ‘ಇಂಡಿಯಾ ಮೈತ್ರಿಕೂಟ’ಕ್ಕೆ ಟಿಎಂಸಿಯಿಂದ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...