Homeಮುಖಪುಟವೈಯಕ್ತಿಕ ಕಾನೂನುಗಳಿಂದ ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ತಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ವೈಯಕ್ತಿಕ ಕಾನೂನುಗಳಿಂದ ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ತಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

- Advertisement -
- Advertisement -

“ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಯಾವುದೇ ವೈಯಕ್ತಿಕ ಕಾನೂನಿನಡಿ ಸಂಪ್ರದಾಯಗಳ ಹೆಸರಿನಲ್ಲಿ ದುರ್ಬಲಗೊಳಿಸಲು ಸಾಧ್ಯವಿಲ್ಲ. ಬಾಲ್ಯ ವಿವಾಹಗಳು ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ವ್ಯಕ್ತಿಯ ಸ್ವಾತಂತ್ರ್ಯವನ್ನು ಹರಣ ಮಾಡುತ್ತವೆ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಅ.18) ಹೇಳಿದೆ.

ಭಾರತದಲ್ಲಿನ ವೈಯಕ್ತಿಕ ಕಾನೂನುಗಳು ಮದುವೆ, ವಿಚ್ಛೇದನ, ಉತ್ತರಾಧಿಕಾರ, ದತ್ತು ಮತ್ತು ಪಾಲಕತ್ವದಂತಹ ವಿಷಯಗಳಲ್ಲಿ ವ್ಯಕ್ತಿಗಳನ್ನು ನಿಯಂತ್ರಿಸುವ ಕಾನೂನುಗಳ ಗುಂಪಾಗಿದೆ. ಅವು ಧಾರ್ಮಿಕ ಗ್ರಂಥಗಳನ್ನು ಆಧರಿಸಿವೆ. ಗೋವಾ ಮತ್ತು ಉತ್ತರಾಖಂಡಗಳು ಮಾತ್ರ ಇಂತಹ ವಿಷಯಗಳಿಗೆ ವೈಯಕ್ತಿಕ ಕಾನೂನುಗಳನ್ನು ಅನುಸರಿಸುವುದಿಲ್ಲ, ಬದಲಿಗೆ ಏಕರೂಪ ನಾಗರಿಕ ಸಂಹಿತೆಯನ್ನು ಅವಲಂಬಿಸಿವೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯ ಪೀಠವು ದೇಶದಲ್ಲಿ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಕಾನೂನಿನ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಬಾಲ್ಯ ವಿವಾಹ ತಡೆಗಟ್ಟುವ ತಂತ್ರವು ವಿವಿಧ ಸಮುದಾಯಗಳಿಗೆ ಅನುಗುಣವಾಗಿರಬೇಕು. ಬಹು-ವಲಯಗಳ ಸಮನ್ವಯತೆ ಇದ್ದಾಗ ಮಾತ್ರ ಕಾನೂನು ಯಶಸ್ವಿಯಾಗುತ್ತದೆ. ಕಾನೂನು ಜಾರಿ ಅಧಿಕಾರಿಗಳ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ಆಗಬೇಕು. ಸಮುದಾಯ-ಚಾಲಿತ ವಿಧಾನದ ಅಗತ್ಯವಿದೆ ಇತ್ಯಾದಿ ಮಾರ್ಗಸೂಚಿಗಳನ್ನು ಸುಪ್ರಿಂ ಕೋರ್ಟ್ ನೀಡಿದೆ.

ವೈಯಕ್ತಿಕ ಕಾನೂನುಗಳ ಮೇಲೆ ಬಾಲ್ಯ ವಿವಾಹ ನಿಷೇಧ ಕಾಯ್ದೆ (ಪಿಸಿಎಂಎ) ಮೇಲುಗೈ ಸಾಧಿಸುತ್ತದೆಯೇ? ಎಂಬ ವಿಷಯವು ಸಂಸತ್ತಿನಲ್ಲಿ ಪರಿಗಣನೆಗಾಗಿ ಬಾಕಿ ಇದೆ ಎಂಬುವುದನ್ನು ನ್ಯಾಯಪೀಠ ಉಲ್ಲೇಖಿಸಿದೆ. ವೈಯಕ್ತಿಕ ಕಾನೂನುಗಳಿಗಿಂತ ಬಾಲ್ಯ ವಿವಾಹ ನಿಷೇಧ ಕಾಯ್ದೆಯೇ ಮೇಲ್ಮಟ್ಟದ್ದು ಎಂದು ಪರಿಗಣಿಸುವಂತೆ ಕೇಂದ್ರವು ಸುಪ್ರೀಂ ಕೋರ್ಟ್​ಗೆ ಒತ್ತಾಯಿಸಿದೆ ಎಂಬುವುದು ಇಲ್ಲಿ ಗಮನಾರ್ಹ.

ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಕಾನೂನು, ಮಕ್ಕಳ ಮೇಲೆ ವಿವಾಹದ ದೊಡ್ಡ ಸಾಮಾಜಿಕ ಹೊರೆಯನ್ನು ಹೊರಿಸುವುದನ್ನು ತಡೆಗಟ್ಟುವುದು ಮಾತ್ರವಲ್ಲದೆ, ಇದು ಆಯ್ಕೆಯ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟುವ ಉದ್ದೇಶಗಳನ್ನು ಕೂಡ ಹೊಂದಿದೆ. ಬಾಲ್ಯ ವಿವಾಹಗಳು ಮಗು ಪ್ರಬುದ್ಧ ಆಗುವ ಮೊದಲು ಸಂಗಾತಿಯ ಆಯ್ಕೆ ಮತ್ತು ಜೀವನ ಮಾರ್ಗಗಳನ್ನು ಕಸಿದುಕೊಳ್ಳುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕೆಂದು ಕೋರಿ ಸೊಸೈಟಿ ಫಾರ್ ಎನ್‌ಲೈಟೆನ್​ಮೆಂಟ್ ಅಂಡ್ ವಾಲೆಂಟರಿ ಆಕ್ಷನ್ ಸಲ್ಲಿಸಿದ ಪಿಐಎಲ್ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್​ ಮೇಲಿನಂತೆ ಹೇಳಿದೆ.

ಇದನ್ನೂ ಓದಿ : ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...