Homeಅಂತರಾಷ್ಟ್ರೀಯಕದನ ವಿರಾಮದ ನಡುವೆ ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತನ ಗುಂಡಿಕ್ಕಿ ಹತ್ಯೆ

ಕದನ ವಿರಾಮದ ನಡುವೆ ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತನ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗುತ್ತಿರುವ ನಡುವೆ, ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತ ಸಾಲೇಹ್ ಅಲ್‌-ಜಾಫರಾವಿ ಅವರನ್ನು ಶಸ್ತ್ರದಾರಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಯುದ್ಧದ ವರದಿ ಮಾಡುವ ವಿಡಿಯೋಗಳಿಂದ ಖ್ಯಾತಿ ಗಳಿಸಿದ್ದ 28 ವರ್ಷದ ಜಾಫರಾವಿ ಅವರನ್ನು, ಗಾಝಾ ನಗರದ ಸಬ್ರಾ ಸಮೀಪ ನಡೆದ ಘರ್ಷಣೆಗಳ ವರದಿ ಮಾಡುವಾಗ ಸಶಸ್ತ್ರ ಗುಂಪಿನ ಸದಸ್ಯ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ತನ್ನ ಸನದ್ ಏಜೆನ್ಸಿಯು ಕೆಲವು ವರದಿಗಾರರು ಮತ್ತು ಹೋರಾಟಗಾರರು ಹಂಚಿಕೊಂಡಿರುವ ವಿಡಿಯೋಗಳನ್ನು ಪರಿಶೀಲಿಸಿದೆ. ಆ ವಿಡಿಯೋದಲ್ಲಿ ‘ಪ್ರೆಸ್’ ಎಂದು ಬರೆದ ಜಾಕೆಟ್ ಧರಿಸಿರುವ ಒಬ್ಬರು ವ್ಯಕ್ತಿಯ ದೇಹ ಟ್ರಕ್ ಒಂದರ ಹಿಂದೆ ಬಿದ್ದಿರುವುದು ಕಾಣಿಸಿದೆ. ಸಾಲೇಹ್ ಅಲ್‌-ಜಾಫರಾವಿ ಭಾನುವಾರ ಬೆಳಿಗ್ಗೆಯಿಂದ ಕಾಣಿಯಾಗಿದ್ದಾರೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ವಿವರಿಸಿದೆ.

ಭಾನುವಾರ ಸಬ್ರಾದಲ್ಲಿ ಹಮಾಸ್, ಭದ್ರತಾ ಪಡೆಗಳು ಮತ್ತು ಡೋಗ್ಮುಶ್ ಕುಟುಂಬದ ಹೋರಾಟಗಾರರ ನಡುವೆ ಘರ್ಷಣೆಗಳು ನಡೆದಿವೆ ಎಂದು ಪ್ಯಾಲೆಸ್ತೀನ್ ಮೂಲಗಳು ತಿಳಿಸಿವೆ. ಆದರೆ, ಸ್ಥಳೀಯ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ ಎಂದು ಅಲ್‌-ಜಝೀರಾ ಹೇಳಿದೆ.

ಸಬ್ರಾದಲ್ಲಿ ನಡೆದ ಘರ್ಷಣೆ ಇಸ್ರೇಲ್ ಬೆಂಬಲಿತ ಶಸಸ್ತ್ರ ಗುಂಪೊಂದಕ್ಕೆ ಸಂಬಂಧಿಸಿದೆ ಎಂದು ಗಾಝಾದ ಒಳಾಡಳಿತ ಸಚಿವಾಲಯದ ಮೂಲವೊಂದು ಹೇಳಿರುವುದಾಗಿ ಆಲ್- ಜಝೀರಾ ತಿಳಿಸಿದೆ.

ದಕ್ಷಿಣ ಗಾಝಾದಿಂದ ಗಾಝಾ ನಗರಕ್ಕೆ ಹಿಂತಿರುಗುತ್ತಿರುವ ಸ್ಥಳಾಂತರಗೊಂಡ ಜನರನ್ನು ಶಸಸ್ತ್ರ ಗುಂಪಿನ ಸದಸ್ಯರು ಹತ್ಯೆಗೈದಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಆ ಗುಂಪಿನ ಮೇಲೆ ಮುತ್ತಿಗೆ ಹಾಕಿದವು ಎಂದು ಮೂಲಗಳನ್ನು ಉಲ್ಲೇಖಿಸಿ ಅಲ್‌-ಜಝೀರಾ ಹೇಳಿದೆ.

“ನಾನು ಪ್ರತಿ ಕ್ಷಣವೂ ಭಯದಲ್ಲಿ ಬದುಕುತ್ತಿದ್ದೇನೆ”

ಕಳೆದ ಜನವರಿಯಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಿಸಿದ್ದಾಗ ಅಲ್‌-ಜಝೀರಾ ಜೊತೆ ಮಾತನಾಡಿದ್ದ ಅಲ್‌-ಜಾಫರಾವಿ, ಉತ್ತರ ಗಾಝಾದಿಂದ ಸ್ಥಳಾಂತರಗೊಂಡ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.

ತನ್ನ ಕೆಲಸದ ಕಾರಣದಿಂದಾಗಿ ಇಸ್ರೇಲ್‌ನಿಂದ ಹಲವಾರು ಬೆದರಿಕೆಗಳು ಬಂದಿವೆ ಎಂದು ಹೇಳಿಕೊಂಡಿದ್ದರು.

“ನಿಜ ಹೇಳಬೇಕೆಂದರೆ, ನಾನು ಪ್ರತಿ ಸೆಕೆಂಡ್ ಭಯದಲ್ಲಿ ಬದುಕುತ್ತಿದ್ದೇನೆ. ವಿಶೇಷವಾಗಿ ಇಸ್ರೇಲಿ ಪಡೆಗಳು ನನ್ನ ಬಗ್ಗೆ ಏನು ಹೇಳುತ್ತಿದೆ ಎಂದು ಕೇಳಿದ ನಂತರ. ಮುಂದಿನ ಸೆಕೆಂಡ್ ಏನಾಗುತ್ತದೆ ಎಂದು ತಿಳಿಯದೆ ನಾನು ಎರಡನೇ ದರ್ಜೆಯ ಜೀವನ ನಡೆಸುತ್ತಿದ್ದೇನೆ” ಎಂದಿದ್ದರು.

ಅಕ್ಟೋಬರ್ 2023ರಲ್ಲಿ ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಪ್ರಾರಂಭಿಸಿದಾಗಿನಿಂದ ಗಾಝಾದಲ್ಲಿ 270ಕ್ಕೂ ಹೆಚ್ಚು ಮಾಧ್ಯಮ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಕದನ ವಿರಾಮ: ಮೊದಲ ಹಂತದಲ್ಲಿ 7 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...