Homeಮುಖಪುಟಚುನಾವಣೆಯಲ್ಲಿ ಮಹಿಳೆಯರಿಗೆ ಭರವಸೆ ನೀಡಿದ್ದಷ್ಟೆ ಹಣ ಪಾವತಿ ಅಸಾಧ್ಯ: ಒಪ್ಪಿಕೊಂಡ ಮಹಾರಾಷ್ಟ್ರ ಸರ್ಕಾರ

ಚುನಾವಣೆಯಲ್ಲಿ ಮಹಿಳೆಯರಿಗೆ ಭರವಸೆ ನೀಡಿದ್ದಷ್ಟೆ ಹಣ ಪಾವತಿ ಅಸಾಧ್ಯ: ಒಪ್ಪಿಕೊಂಡ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಆಡಳಿತರೂಢ ಮೈತ್ರಿಕೂಟವು ಕಳೆದ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ಭರವಸೆ ನೀಡಿದಂತೆ, ಲಡ್ಕಿ ಬಹಿನ್ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ಆರ್ಥಿಕ ಸಹಾಯವನ್ನು 2,100 ರೂ.ಗಳಿಗೆ ಹೆಚ್ಚಿಸಲು ಸಾಧ್ಯವಿಲ್ಲ ಎಂದು ರಾಜ್ಯದ ಸಚಿವ ಸಂಜಯ್ ಶಿರ್ಸಾತ್ ಸೋಮವಾರ, ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಚುನಾವಣೆಯಲ್ಲಿ ಮಹಿಳೆಯರಿಗೆ

ಆದಾಗ್ಯೂ, ಪ್ರಸ್ತುತ ತಿಂಗಳಿಗೆ 1,500 ರೂ.ಗಳ ಮೊತ್ತವನ್ನು ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ. ಯೋಜನೆಗೆ ಸಂಬಂಧಿಸಿದ ಚುನಾವಣಾ ಭರವಸೆಯನ್ನು ಸರ್ಕಾರವು ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಸಚಿವರು ಸಾರ್ವಜನಿಕವಾಗಿ ಒಪ್ಪಿಕೊಂಡಿರುವುದು ಇದೇ ಮೊದಲು.

“ಮಾಸಿಕ 1,500 ರೂ.ಗಳನ್ನು 2,100 ರೂ.ಗಳಿಗೆ ಹೆಚ್ಚಿಸಲಾಗುವುದಿಲ್ಲ ಎಂಬುದು ವಾಸ್ತವ” ಎಂದು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಗುಂಪಿನ ಸದಸ್ಯ ಶಿರ್ಸಾತ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. “ಈ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಅಥವಾ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ ಎಂದು ಹೇಳುತ್ತಾ ಸಮಸ್ಯೆ ಸೃಷ್ಟಿಸಲಾಗುತ್ತದೆ. ಅದರೆ, ಲಡ್ಕಿ ಬಹಿನ್ ಯೋಜನೆಯಡಿಯಲ್ಲಿನ ಬದ್ಧತೆಯನ್ನು ಈಡೇರಿಸಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ತಮ್ಮ ಸಚಿವಾಲಯವು ಸುಮಾರು 3,000 ಕೋಟಿ ರೂಪಾಯಿಗಳ ಬಾಕಿ ಉಳಿಸಿಕೊಂಡಿದೆ ಎಂದು ಸಚಿವ ಶಿರ್ಸತ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನನ್ನ ಇಲಾಖೆಯ ಅಗತ್ಯಗಳನ್ನು ಸಹಾನುಭೂತಿಯಿಂದ ಪರಿಗಣಿಸಲು ಮತ್ತು ನಿಯಮಗಳ ಪ್ರಕಾರ ಸರಿಯಾದ ಹಣವನ್ನು ಬಿಡುಗಡೆ ಮಾಡುವುದನ್ನು ಖಚಿತಪಡಿಸಿಕೊಳ್ಳಲು ನಾನು ಸುಮಾರು ಒಂದು ತಿಂಗಳ ಹಿಂದೆ ಮುಖ್ಯಮಂತ್ರಿ [ದೇವೇಂದ್ರ ಫಡ್ನವಿಸ್] ಅವರನ್ನು ವಿನಂತಿಸಿದ್ದೆ” ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.

“ನಾನು ಇದನ್ನು ಲಿಖಿತವಾಗಿ ತಿಳಿಸಿದ್ದೇನೆ ಮತ್ತು [ರಾಜ್ಯ ಹಣಕಾಸು ಸಚಿವ ಅಜಿತ್ ಪವಾರ್] ಅವರೊಂದಿಗೆ ಮಾತನಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಮೇ 3 ರಂದು, ಅಜಿತ್ ಪವಾರ್ ನೇತೃತ್ವದ ಹಣಕಾಸು ಇಲಾಖೆಯು ಅವರಿಗೆ ತಿಳಿಸದೆ ತಮ್ಮ ಸಚಿವಾಲಯದಿಂದ ಹಣವನ್ನು ಅಕ್ರಮವಾಗಿ ತಿರುಗಿಸಿದೆ ಎಂದು ಶಿರ್ಸತ್ ಆರೋಪಿಸಿದ್ದರು. “ಅವರು [ಬಜೆಟ್ ಸಮಯದಲ್ಲಿ] ನನನಗೆ ತಿಳಿಸದೆ ನನ್ನ ಇಲಾಖೆಯಿಂದ 7,000 ಕೋಟಿ ರೂಪಾಯಿಗಳನ್ನು ತಿರುಗಿಸಿದ್ದಾರೆ” ಎಂದು ಅವರು ಹೇಳಿದ್ದರು.

“ಸರ್ಕಾರವು ಸಾಮಾಜಿಕ ನ್ಯಾಯ ಇಲಾಖೆ ಕಾರ್ಯನಿರ್ವಹಿಸಲು ಬಯಸದಿದ್ದರೆ ಅಥವಾ ಅವರು ಹಣವನ್ನು ಖರ್ಚು ಮಾಡಲು ಬಯಸದಿದ್ದರೆ, ಅವರು ಈ ಇಲಾಖೆಯನ್ನು ಮುಚ್ಚಬೇಕು.” ಎಂದು ಅವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗೆ ಹಣವನ್ನು ತಿರುಗಿಸುವುದು ಮುಂದುವರಿದರೆ, ಹಲವಾರು ಯೋಜನೆಗಳು ಸ್ಥಗಿತಗೊಳ್ಳಬಹುದು ಎಂದು ಶಿರ್ಸತ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಲಡ್ಕಿ ಬಹಿನ್ ಯೋಜನೆಯನ್ನು ತಾನು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಚುನಾವಣೆಯಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಇದು ಸಹಾಯ ಮಾಡಿದೆ ಎಂದು ಹೇಳಿದ್ದಾರೆ.

ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ, ವಾರ್ಷಿಕ ಕುಟುಂಬ ಆದಾಯ 2.5 ಲಕ್ಷ ರೂ.ಗಿಂತ ಕಡಿಮೆ ಇರುವ 21 ರಿಂದ 65 ವರ್ಷದೊಳಗಿನ ಮಹಿಳೆಯರು ನೇರ ಬ್ಯಾಂಕ್ ವರ್ಗಾವಣೆಯ ರೂಪದಲ್ಲಿ ತಿಂಗಳಿಗೆ 1,500 ರೂ.ಗಳನ್ನು ಪಡೆಯುತ್ತಾರೆ.

ನವೆಂಬರ್‌ನಲ್ಲಿ ನಡೆದ 288 ಸದಸ್ಯರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಮಹಾಯುತಿ ಮೈತ್ರಿಕೂಟ 230 ಸ್ಥಾನಗಳನ್ನು ಗೆಲ್ಲುವಲ್ಲಿ ಈ ನಗದು ವರ್ಗಾವಣೆ ಯೋಜನೆ ನಿರ್ಣಾಯಕ ಪಾತ್ರ ವಹಿಸಿದೆ ಎಂದು ಹೇಳಲಾಗುತ್ತದೆ. ಮೈತ್ರಿಯಲ್ಲಿ ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಬಣ ಇವೆ. ಚುನಾವಣೆಯಲ್ಲಿ ಮಹಿಳೆಯರಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...