Homeಮುಖಪುಟ‘ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ': ವಿಡಿಯೋ ಸಂದೇಶದಲ್ಲಿ ಮೋದಿ, ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ...

‘ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ’: ವಿಡಿಯೋ ಸಂದೇಶದಲ್ಲಿ ಮೋದಿ, ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗರು ದೇಶದಲ್ಲಿ ಸಂಕಷ್ಟದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ, ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಜ್ವಲ ಭವಿಷ್ಯಕ್ಕಾಗಿ ನಾಗರಿಕರು ಕಾಂಗ್ರೆಸ್ ಪಕ್ಷದ ಜೊತೆ ಕೈಜೋಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ಹಂಚಿಕೊಂಡ ಅಪರೂಪದ ವೀಡಿಯೊ ಸಂದೇಶದಲ್ಲಿ ಸೋನಿಯಾ ಗಾಂಧಿ, ರಾಷ್ಟ್ರದಲ್ಲಿನ ವ್ಯಾಪಕ ಸವಾಲುಗಳನ್ನು ಉಲ್ಲೇಖಿಸಿದ್ದಾರೆ. ಇಂದು ದೇಶದ ಮೂಲೆ ಮೂಲೆಯಲ್ಲಿ ಯುವಕರು ನಿರುದ್ಯೋಗವನ್ನು ಎದುರಿಸುತ್ತಿದ್ದಾರೆ, ಮಹಿಳೆಯರು ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು ಭೀಕರ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಉದ್ದೇಶದಿಂದ ಈ ವಾತಾವರಣ ನಿರ್ಮಾಣವಾಗಿದೆ, ಅವರು ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ಎಲ್ಲರ ಪ್ರಗತಿ, ವಂಚಿತರಿಗೆ ನ್ಯಾಯಕ್ಕಾಗಿ ಮತ್ತು ದೇಶವನ್ನು ಬಲಪಡಿಸಲು ಯಾವಾಗಲೂ ಹೋರಾಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಬಡವರನ್ನು ಮೇಲಕ್ಕೆತ್ತಲು, ಯುವಕರ ಮತ್ತು ಮಹಿಳೆಯರ ಸಬಲೀಕರಣ, ರೈತರು ಮತ್ತು ಕಾರ್ಮಿಕರನ್ನು ಬೆಂಬಲಿಸಲು ಮತ್ತು ಅಂಚಿನಲ್ಲಿರುವ ಸಮುದಾಯಗಳನ್ನು ಬಲಪಡಿಸಲು ಪ್ರತಿಜ್ಞೆ ಮಾಡುವ ಪಕ್ಷದ ಪ್ರಣಾಳಿಕೆ ‘ನ್ಯಾಯ ಪತ್ರ’ವನ್ನು ಹೈಲೈಟ್ ಮಾಡುವಾಗ ಮತ್ತೊಮ್ಮೆ ತಮ್ಮ ಬೆಂಬಲವನ್ನು ನೀಡುವಂತೆ ಸೋನಿಯಾ ಗಾಂಧಿ ಮತದಾರರನ್ನು ಕೋರಿದ್ದಾರೆ.

ಇಂದು ನಾನು ಮತ್ತೊಮ್ಮೆ ನಿಮ್ಮ ಬೆಂಬಲವನ್ನು ಕೇಳುತ್ತಿದ್ದೇನೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಯು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಸಮರ್ಪಿತವಾಗಿದೆ. ಎಲ್ಲರಿಗೂ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ ಮತ್ತು ನಾವು ಒಟ್ಟಾಗಿ ಬಲಿಷ್ಠ ಮತ್ತು ಅಖಂಡ ಭಾರತವನ್ನು ನಿರ್ಮಿಸೋಣ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 93 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಈ ಮಧ್ಯೆ ಸೋನಿಯಾ ಗಾಂಧಿ ಮಹತ್ವದ ವಿಡಿಯೋ ಸಂದೇಶವನ್ನು ಕಳುಹಿಸಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆ ಸಂವಿಧಾನ ಮತ್ತು ಆದಿವಾಸಿಗಳು, ಬಡವರು ಮತ್ತು ಹಿಂದುಳಿದವರ ಹಕ್ಕುಗಳನ್ನು ಉಳಿಸುವುದಕ್ಕಾಗಿ ಎಂದು ಕಾಂಗ್ರೆಸ್ ಪಕ್ಷ ಪ್ರತಿಪಾದಿಸುತ್ತಾ ಬಂದಿದೆ.

ಈ ಮೊದಲು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಾ, ಅವರು ಆದಿವಾಸಿಗಳಿಗೆ ಸೇರಿದ ಜಲ, ಅರಣ್ಯ ಮತ್ತು ಜಮೀನುಗಳನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಲು ಬಯಸಿದ್ದಾರೆ. ನರೇಂದ್ರ ಮೋದಿ ಅವರು ಅದಾನಿ, ಅಂಬಾನಿಗಾಗಿ ಕೆಲಸ ಮಾಡುತ್ತಾರೆ. ತನ್ನ 10 ವರ್ಷಗಳ ಅಧಿಕಾರಾವಧಿಯಲ್ಲಿ 22 ಜನರನ್ನು ಬಿಲಿಯನರ್‌ಗಳನ್ನಾಗಿ ಮಾಡಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ನೀಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ದ್ವೇಷ’ ಬಿತ್ತುವ ಮೂರನೇ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡ ಬಿಜೆಪಿ: ಮೌನವಹಿಸಿರುವ ಚು. ಆಯೋಗ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪೂಂಚ್‌ನ ನ್ಯಾಷನಲ್ ಕಾನ್ಫರೆನ್ಸ್‌ ರ‍್ಯಾಲಿಯಲ್ಲಿ ಚಾಕುವಿನಿಂದ ದಾಳಿ; 3 ಮಂದಿಗೆ ಗಾಯ

0
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ನ್ಯಾಚನಲ್ ಕಾನ್ಫರೆನ್ಸ್‌ ಪಕ್ಷದ ರೋಡ್ ಶೋ ವೇಳೆ ಅಪರಿಚಿತ ದುಷ್ಕರ್ಮಿಗಳ ಚಾಕು ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೆಂಧರ್ ಪ್ರದೇಶದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ...