Homeಮುಖಪುಟ'ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ' : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

- Advertisement -
- Advertisement -

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು ಹೇಡಿತನಕ್ಕೆ ಸಾಕ್ಷಿ” ಎಂದು ಹೇಳಿದ್ದಾರೆ.

ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಅರೆನಗ್ನ ಪ್ರತಿಭಟನೆಗೆ ಸಂಬಂಧಿಸಿದಂತೆ ಉದಯ್ ಭಾನು ಚಿಬ್ ಅವರನ್ನು ಇಂದು (ಫೆ.24) ಮುಂಜಾನೆ ಪೊಲೀಸರು ಬಂಧಿಸಿದ್ದಾರೆ.

ಇದಕ್ಕೂ ಮುನ್ನ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತನ್ನು ಪೊಲೀಸರು ಬಂಧಿಸಿದ್ದು, ಅವರನ್ನು ನ್ಯಾಯಾಲಯ ಐದು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಚಿಬ್ ಅವರ ಬಂಧನದ ಬಳಿಕ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ರಾಜಿಯಾದ ಪ್ರಧಾನಿಯ ವಿರುದ್ಧ ದೇಶದ ಹಿತಾಸಕ್ತಿಗಾಗಿ ನಿರ್ಭಯವಾಗಿ ಧ್ವನಿ ಎತ್ತಿರುವ ಯುವ ಕಾಂಗ್ರೆಸ್‌ನ ನಮ್ಮ ಸಹ ಸದಸ್ಯರ ಬಗ್ಗೆ ಹೆಮ್ಮೆಪಡುತ್ತೇನೆ” ಎಂದು ಹೇಳಿದ್ದಾರೆ.

“ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದವು ದೇಶದ ಹಿತಾಸಕ್ತಿಗಳಿಗೆ ಧಕ್ಕೆ ತಂದಿದೆ. ಈ ಒಪ್ಪಂದವು ನಮ್ಮ ರೈತರು ಮತ್ತು ಜವಳಿ ಉದ್ಯಮಕ್ಕೆ ಹಾನಿ ಮಾಡುತ್ತದೆ ಮತ್ತು ನಮ್ಮ ಡೇಟಾವನ್ನು ಅಮೆರಿಕಕ್ಕೆ ಹಸ್ತಾಂತರಿಸುತ್ತದೆ” ಎಂದಿದ್ದಾರೆ.

“ಸತ್ಯವನ್ನು ದೇಶದ ಮುಂದೆ ತೆರೆದಿಟ್ಟಿದ್ದಕ್ಕಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಇತರ ಐವೈಸಿ ಒಡನಾಡಿಗಳ ಬಂಧನವು ಸರ್ವಾಧಿಕಾರಿ ಪ್ರವೃತ್ತಿ ಮತ್ತು ಹೇಡಿತನಕ್ಕೆ ಪುರಾವೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಶಾಂತಿಯುತ ಪ್ರತಿಭಟನೆ ಕಾಂಗ್ರೆಸ್ಸಿನ ‘ಐತಿಹಾಸಿಕ ಪರಂಪರೆ’. ಅದು ನಮ್ಮ ರಕ್ತದಲ್ಲಿದೆ ಮತ್ತು ಪ್ರತಿಯೊಬ್ಬ ಭಾರತೀಯನ ಪ್ರಜಾಸತ್ತಾತ್ಮಕ ಹಕ್ಕು” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಮತ್ತು ನಾನು ನಮ್ಮ ಸಹ ಸದಸ್ಯರೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಅಧಿಕಾರಕ್ಕೆ ಸತ್ಯದ ಕನ್ನಡಿಯನ್ನು ತೋರಿಸುವುದು ಅಪರಾಧವಲ್ಲ, ಅದು ದೇಶಭಕ್ತಿ. ಭಯಪಡಬೇಡಿ – ಸತ್ಯ ಮತ್ತು ಸಂವಿಧಾನ ನಮ್ಮೊಂದಿಗಿದೆ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ. ‘ಐ ಸ್ಟ್ಯಾಂಡ್ ವಿತ್ ಯೂತ್ ಕಾಂಗ್ರೆಸ್’ ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...