Homeಮುಖಪುಟಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

"ರೈತ ವಿರೋಧಿ‌ ಕಾನೂನುಗಳನ್ನು ವಾಪಸು‌ ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ"

- Advertisement -
- Advertisement -

ಕೆಂಪುಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿದ ದೀಪ್ ಸಿಧು ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಧ್ವಜ ಹಾರಿಸಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆ ಸಮೇತ ಸಾಬೀತಾಗಿದೆ” ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ‌ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ದೊಡ್ಡರಂಗೇಗೌಡ

“ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರೂ ರೈತ ವಿರೋಧಿ‌ ಕಾನೂನುಗಳನ್ನು ವಾಪಸು‌ ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದ ಗುಂಪನ್ನು ಕೆಂಪುಕೋಟೆಯವರೆಗೆ ಹೋಗಲು ಪೊಲೀಸರು ಬಿಟ್ಟಿದ್ದೇಕೆ? – ರೈತ ಮುಖಂಡರ…

“ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಅಂತ ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ, ಹೀಗಾಗಿ ರೈತರು ಎಷ್ಟೇ ಪ್ರತಿಭಟನೆ ನಡೆಸಿದರೂ ಅವುಗಳನ್ನು ವಾಪಾಸು ಪಡೆಯುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿರುವ ರೈತರು, ದೆಹಲಿಯ ಗಡಿಗಳಲ್ಲಿ ಕಳೆದ 2 ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ 11 ಸುತ್ತಿನ ಮಾತುಕತೆಗಳು ನಡೆದು, ಅವುಗಳೆಲ್ಲಾ ವಿಫಲವಾಗಿವೆ.

ಇದನ್ನೂ ಓದಿ: ಆಘಾತಕಾರಿ ಸುದ್ದಿ: ಕೆಂಪುಕೋಟೆಯ ಮುತ್ತಿಗೆ, ಸಿಖ್ ಧ್ವಜಾರೋಹಣಕ್ಕೆ ಕಾರಣ ಬಿಜೆಪಿ ಕಾರ್ಯಕರ್ತ ದೀಪ್ ಸಿಧು

ಹಾಗಾಗಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವ ಭಾಗವಾಗಿ ಗಣರಾಜ್ಯೋತ್ಸವದಂದು ರೈತರು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ಹಮ್ಮಿಕೊಂಡಿದ್ದರು.

ಆದರೆ ಇದರಲ್ಲಿ ನಟ ಮತ್ತು ಬಿಜೆಪಿ ಬೆಂಬಲಿಗ ದೀಪ್ ಸಿಧು ಪ್ರಚೋದಿತ ಗುಂಪೊಂದು ರ್ಯಾಲಿಯ ಉದ್ದೇಶಿತ ದಾರಿಯನ್ನು ಬಿಟ್ಟು, ಕೆಂಪು ಕೋಟೆಗೆ ಮುತ್ತಿಗೆ ಹಾಕಿ, ಅಲ್ಲಿ ಸಿಖ್ ಧ್ವಜವನ್ನು ಹಾರಿಸಿತ್ತು. ಇದರ ವಿರುದ್ಧ ರಾಷ್ಟ್ರದಾದ್ಯಂತ ಪರ-ವಿರೋಧದ ಚರ್ಚೆಗಳು ನಡೆದಿದ್ದವು.

ಆದರೆ ಈತ 2 ತಿಂಗಳ ಹಿಂದೆ ಪ್ರಧಾನಿ ಮೋದಿಯವರ ಜೊತೆ ತೆಗೆಸಿಕೊಂಡಿದ್ದ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈತ ಬಿಜೆಪಿ ಸಂಸದ ಸನ್ನಿ ಡಿಯೋಲ್ ಚುನಾವಣೆಗಾಗಿ ಪ್ರಚಾರ ಮಾಡಿರುವುದು ಸಾಬೀತಾಗಿದೆ. ಇದರ ಬೆನ್ನಲ್ಲೇ ರೈತ ಮುಖಂಡರು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.


ಇದನ್ನೂ ಓದಿ: ಗಣರಾಜ್ಯೋತ್ಸವ ಆಚರಣೆ: ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...