Homeಮುಖಪುಟಪ್ರವಾದಿ ನಿಂದನೆ: ಮುಂಬೈ ಪೊಲೀಸರ ಕೈಗೆ ಸಿಗದ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ

ಪ್ರವಾದಿ ನಿಂದನೆ: ಮುಂಬೈ ಪೊಲೀಸರ ಕೈಗೆ ಸಿಗದ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ

- Advertisement -
- Advertisement -

ಸುದ್ದಿ ವಾಹಿನಿಯೊಂದರಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾರನ್ನು ಮುಂಬೈ ಪೊಲೀಸ್ ತಂಡ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ನೂಪುರ್‌ ಶರ್ಮಾ ಹೇಳಿಕೆ ವಿರುದ್ಧ ಹಲವಾರು ರಾಜ್ಯಗಳಲ್ಲಿ ಅವರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಶರ್ಮಾರನ್ನು ವಿಚಾರಣೆಗೆ ಒಳಪಡಿಸಲು ದೆಹಲಿಯಲ್ಲಿರುವ ಮುಂಬೈ ಪೊಲೀಸ್ ತಂಡವು ಅವರನ್ನು ಹುಡುಕಿದ್ದು, ಅವರನ್ನು ಪತ್ತೆಹಚ್ಚಲಾಗುತ್ತಿಲ್ಲ ಎಂದು ತಿಳಿದು ಬಂದಿದೆ.

ಅವರ ಹೇಳಿಕೆ ಭಾರತ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ಆಕ್ರೋಶಕ್ಕೆ ಕಾರಣವಾದ ಬಳಿಕ ಮುಸ್ಲಿಮ್ ಸಂಘಟನೆಯಾದ ರಾಝಾ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಇರ್ಫಾನ್ ಶೇಖ್ ಅವರ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಮೇ 28 ರಂದು ದೆಹಲಿ ನಿವಾಸಿ ನೂಪುರ್ ಶರ್ಮಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ನೂಪುರ್‌ ಶರ್ಮಾರನ್ನು ಬಂಧಿಸಲು ಮುಂಬೈ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ಮಹಾರಾಷ್ಟ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಮುಂಬೈ ಪೊಲೀಸ್ ತಂಡ ಕಳೆದ ಐದು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ತಂಗಿದ್ದು, ನೂಪುರ್ ಶರ್ಮಾ ಅವರನ್ನು ಹುಡುಕುತ್ತಿದೆ.

ಇದನ್ನೂ ಓದಿ: ‘ಬಿಜೆಪಿ ಪದಾಧಿಕಾರಿಗಳ ಆಕ್ಷೇಪಾರ್ಹ ಹೇಳಿಕೆಗೆ ವಿರೋಧವಿದೆ’: ಪ್ರವಾದಿ ನಿಂದನೆಯನ್ನು ಖಂಡಿಸಿದ ಅಮೆರಿಕ

ತೃಣಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬುಲ್ ಸೊಹೈಲ್ ಅವರ ದೂರಿನ ಆಧಾರದ ಮೇಲೆ ಕೋಲ್ಕತ್ತಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಜೂನ್ 20 ರಂದು ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಕೋಲ್ಕತ್ತಾ ಪೊಲೀಸರು ಆಕೆಗೆ ಸಮನ್ಸ್ ನೀಡಿದ್ದಾರೆ.

ಇತ್ತ ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿರುವ ನೂಪುರ್‌ ಶರ್ಮಾ ವಿರುದ್ಧ ದೆಹಲಿ ಪೊಲೀಸರು ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ.

ಟಿವಿಯಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಮಾಡಿದ ಹೇಳಿಕೆಗಳಿಗಾಗಿ ಇರಾನ್, ಇರಾಕ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾ ಸೇರಿದಂತೆ 15ಕ್ಕಿಂತ ಹೆಚ್ಚು ರಾಷ್ಟ್ರಗಳಿಂದ ತೀವ್ರ ಪ್ರತಿಕ್ರಿಯೆಗಳು ಮತ್ತು ಅಧಿಕೃತ ಪ್ರತಿಭಟನೆಗಳು ಬಂದ ನಂತರ ನೂಪುರ್‌ ಶರ್ಮಾ ಅವರನ್ನು ಬಿಜೆಪಿ ಅಮಾನತುಗೊಳಿಸಿದೆ. ಹಲವಾರು ಗಲ್ಫ್ ರಾಷ್ಟ್ರಗಳು ಭಾರತೀಯ ರಾಯಭಾರಿಗಳನ್ನು ಕರೆಸಿ ಬಿಜೆಪಿ ವಕ್ತಾರರ “ಇಸ್ಲಾಂ ವಿರೋಧಿ ಹೇಳಿಕೆಗಳು” ಎಂದು ಖಂಡನೆ ವ್ಯಕ್ತಪಡಿಸಿದ್ದವು. ಇದೀಗ ಅಮೆರಿಕಾ ಕೂಡಾ ಧಾರ್ಮಿಕ ವ್ಯಕ್ತಿಗೆ ಮಾಡಿರುವ ಅವಮಾನವನ್ನು ಗುರುವಾರ ಖಂಡಿಸಿದೆ.

“ಇಬ್ಬರು ಬಿಜೆಪಿ ಪದಾಧಿಕಾರಿಗಳು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ. ಪಕ್ಷವು ಆ ಹೇಳಿಕೆಗಳನ್ನು ಸಾರ್ವಜನಿಕವಾಗಿ ಖಂಡಿಸುವುದನ್ನು ನೋಡಿ ನಮಗೆ ಸಂತೋಷವಾಯಿತು” ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...