Homeಮುಖಪುಟಪ್ರವಾದಿ ನಿಂದನೆ: ಉತ್ತರ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, 200ಕ್ಕೂ ಹೆಚ್ಚು ಜನರ ಬಂಧನ

ಪ್ರವಾದಿ ನಿಂದನೆ: ಉತ್ತರ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, 200ಕ್ಕೂ ಹೆಚ್ಚು ಜನರ ಬಂಧನ

- Advertisement -
- Advertisement -

ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಾಕರಿ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ಪಕ್ಷದ ನಾಯಕ ನವೀನ್ ಜಿಂದಾಲ್ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿವೆ. ಘಟನೆಗೆ ಸಂಬಂಧಿಸಿದಂತೆ ಆರು ಜಿಲ್ಲೆಗಳಲ್ಲಿ 200 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಪ್ರಯಾಗ್‌ರಾಜ್‌ನಿಂದ 68 ಜನರನ್ನು ಬಂಧಿಸಲಾಗಿದ್ದು, 50 ಜನರನ್ನು ಹತ್ರಾಸ್‌ನಲ್ಲಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಸಹರಾನ್‌ಪುರದಿಂದ ನಲವತ್ತೆಂಟು ಜನರನ್ನು, ಅಂಬೇಡ್ಕರ್‌ನಗರದಲ್ಲಿ 28 ಜನ, ಮೊರಾದಾಬಾದ್‌ನಲ್ಲಿ 25 ಜನರನ್ನು ಮತ್ತು  ಫಿರೋಜಾಬಾದ್‌ನಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿದೆ. ಒಟ್ಟಾರೆಯಾಗಿ 227 ಜನರನ್ನು ಬಂಧಿಸಲಾಗಿದೆ.

ಇದರ ಜೊತೆಗೆ ಜಾರ್ಖಂಡ್‌ನ ರಾಂಚಿ, ಸಹರಾನ್‌ಪುರ ಮತ್ತು ಯುಪಿಯ ಪ್ರಯಾಗ್‌ರಾಜ್‌ನಲ್ಲೂ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಿದ ಘಟನೆಗಳು ವರದಿಯಾಗಿವೆ. ಪ್ರತಿಭಟನಾ ಸ್ಥಳಗಳಲ್ಲಿ ದೊರಕಿದ ವಿಡಿಯೋ ದೃಶ್ಯಾವಳಿಗಳನ್ನು ಆಧರಿಸಿ ಪ್ರತಿಭಟನಾಕಾರರನ್ನು ಬಂಧಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್: ಗರಿಷ್ಠ ಶಿಕ್ಷೆಗಾಗಿ ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ಪೊಲೀಸರ ಮನವಿ

“ನಾವು ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿರುವ ಜನರನ್ನು ಗುರುತಿಸಿ ಬಂಧಿಸಿದ್ದೇವೆ. ಪ್ರತಿಭಟನಾಕಾರರಿಗೆ ಶಾಂತವಾಗಿರುವಂತೆ ಮನವಿ ಮಾಡಿದರೂ ಈ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಯಿತು” ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಜೊತೆಗೆ “ಸಮಾಜ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸ್ವಾತಂತ್ರ್ಯ ಮತ್ತು ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ. ಕಾನೂನನ್ನು ಕೈಗೆತ್ತಿಕೊಳ್ಳುವವರಿಗೆ ಕಠಿಣ ಪಾಠ ಕಲಿಸಲಾಗುವುದು” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಿಎಂ ಕಚೇರಿ ತಿಳಿಸಿದೆ.

ಶುಕ್ರವಾರದ ಪ್ರಾರ್ಥನೆಯ ನಂತರ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಪ್ರಯಾಗರಾಜ್‌ನ ಕೆಲವು ಭಾಗಗಳಲ್ಲಿ ಘರ್ಷಣೆ ಸಂಭವಿಸಿದೆ. ಪ್ರಯಾಗರಾಜ್‌ನ ಅಟಾಲ ಪ್ರದೇಶದಲ್ಲಿ ಘರ್ಷಣೆ ವೇಳೆ ಕಲ್ಲು ತೂರಾಟ ನಡೆದಿದೆ.

ಇತ್ತ ರಾಜ್ಯದಲ್ಲಿ ಪರಿಸ್ಥಿತಿ ಶಾಂತವಗಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಜಾಗ್ರತೆಯಿಂದ ಇರಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ಮಾಧ್ಯಮದವರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...