Homeಮುಖಪುಟ’ಬಿಜೆಪಿ ಮಾಡುವ ಪಾಪಗಳಿಗೆ ಜನರು ಏಕೆ ನರಳಬೇಕು?’: ಮಮತಾ ಬ್ಯಾನರ್ಜಿ ಆಕ್ರೋಶ

’ಬಿಜೆಪಿ ಮಾಡುವ ಪಾಪಗಳಿಗೆ ಜನರು ಏಕೆ ನರಳಬೇಕು?’: ಮಮತಾ ಬ್ಯಾನರ್ಜಿ ಆಕ್ರೋಶ

- Advertisement -
- Advertisement -

ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ನಾಯಕರ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಎರಡನೇ ದಿನವೂ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಮಾಡುವ ಪಾಪಗಳಿಗೆ ಜನರು ಏಕೆ ನರಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ’ಕೆಲವು ರಾಜಕೀಯ ಪಕ್ಷಗಳು ಗಲಭೆಗಳನ್ನು ರೂಪಿಸಲು ಬಯಸುತ್ತವೆ. ಬಿಜೆಪಿಯ “ಪಾಪಗಳಿಗೆ” ಜನರು ಏಕೆ ನರಳಬೇಕು’ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಕೋಲ್ಕತ್ತಾ ಸಮೀಪದ ಹೌರಾದಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಹೇಳಿಕೆಯನ್ನು ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಇಂದು ಬೆಳಿಗ್ಗೆ ಕೂಡ ಅದೇ ಪ್ರದೇಶದಲ್ಲಿ ಮತ್ತೊಂದು ಘರ್ಷಣೆ ವರದಿಯಾಗಿದೆ.

“ನಾನು ಇದನ್ನು ಮೊದಲೇ ಹೇಳಿದ್ದೇನೆ. ಎರಡು ದಿನಗಳಿಂದ ಹೌರಾದಲ್ಲಿ ಸಾಮಾನ್ಯ ಜೀವನ ಅಸ್ತವ್ಯಸ್ತವಾಗಿದೆ. ಹಿಂಸಾಚಾರದ ಘಟನೆಗಳು ನಡೆಯುತ್ತಲೇ ಇವೆ. ಕೆಲವು ರಾಜಕೀಯ ಪಕ್ಷಗಳು ಇದರ ಹಿಂದೆಯಿವೆ. ಅವರು ಗಲಭೆಗಳನ್ನು ಪ್ರಚೋದಿಸಲು ಬಯಸುತ್ತಾರೆ. ಆದರೆ ಇದನ್ನು ನಾವು ಸಹಿಸುವುದಿಲ್ಲ. ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: ನೂಪುರ್ ಮತ್ತು ನವೀನ್‌ರನ್ನು ಉಚ್ಚಾಟಿಸಿದ್ದು ಬಿಜೆಪಿಯ ನಿಜವಾದ ಮುಖವೇ?

 

ಜೊತೆಗೆ ಬಿಜೆಪಿ ವಿರುದ್ಧ ಕಿಡಿ ಕಾರಿರುವ ಅವರು, “ಬಿಜೆಪಿ ಮಾಡಿರುವ ಪಾಪಗಳಿಗೆ, ಜನರು ತೊಂದರೆ ಅನುಭವಿಸಬೇಕೆ?” ಎಂದು ಪ್ರಶ್ನಿಸಿದ್ದಾರೆ.

ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ, ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಗೂಡಂಗಡಿಗಳು, ಹಲವಾರು ದ್ವಿಚಕ್ರ ವಾಹನಗಳು ಮತ್ತು ಇತರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪಾರ್ಕ್ ಸರ್ಕಸ್ ಸೆವೆನ್-ಪಾಯಿಂಟ್ ಕ್ರಾಸಿಂಗ್ ಅನ್ನು ಪ್ರತಿಭಟನಾಕಾರರು ಎರಡು ಗಂಟೆಗಳ ಕಾಲ ತಡೆ ಹಿಡಿದಿದ್ದರು.

ಬುಧವಾರದವರೆಗೆ ಈ ಪ್ರದೇಶದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಸೋಮವಾರದವರೆಗೆ ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರದ ಪ್ರಾರ್ಥನೆಯ ನಂತರ ಒಂಬತ್ತು ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ವರದಿಯಾಗಿವೆ. ಜಾರ್ಖಂಡ್‌ನ ರಾಂಚಿಯಲ್ಲಿ, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಿಂದ ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಪ್ರತಿಭಟನಾಕಾರು ಮತ್ತು ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಘರ್ಷಣೆಗಳು ನಡೆದಿದ್ದು, ಈ ಸಂಬಂಧ 200 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

0
ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು...