Homeರಾಷ್ಟ್ರೀಯಪ್ರವಾದಿ ಅವಹೇಳನಕ್ಕೆ ವಿರೋಧ: ರಾಜಸ್ಥಾನದ ಬಿಜೆಪಿ ಕೌನ್ಸಿಲರ್ ರಾಜೀನಾಮೆ

ಪ್ರವಾದಿ ಅವಹೇಳನಕ್ಕೆ ವಿರೋಧ: ರಾಜಸ್ಥಾನದ ಬಿಜೆಪಿ ಕೌನ್ಸಿಲರ್ ರಾಜೀನಾಮೆ

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ವಿರೋಧಿಸಿ ರಾಜಸ್ಥಾನದ ಬಿಜೆಪಿ ಪುರಸಭೆ ಸದಸ್ಯರೊಬ್ಬರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ದಕ್ಷಿಣದ ಕೋಟಾ ಮುನ್ಸಿಪಲ್ ಕಾರ್ಪೋರೇಶನ್‌ನ ವಾರ್ಡ್ ಸಂಖ್ಯೆ 14 ರ ಬಿಜೆಪಿಯ ಕೌನ್ಸಿಲರ್ ತಬಸ್ಸುಮ್ ಮಿರ್ಜಾ ಅವರು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸತೀಶ್ ಪೂನಿಯಾ ಮತ್ತು ಕೋಟಾ ಜಿಲ್ಲಾ ಅಧ್ಯಕ್ಷ ಕ್ರಿಶನ್ ಕುಮಾರ್ ಸೋನಿ ಅವರಿಗೆ ಕಳುಹಿಸಿ, ತಮ್ಮ ರಾಜೀನಾಮೆ ಹಿಂದಿನ ಕಾರಣವನ್ನು ಉಲ್ಲೇಖಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಿರ್ಜಾ ಅವರು ಸುಮಾರು 10 ವರ್ಷಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅವರು ಸೋನಿ ಅವರಿಗೆ ಬರೆದ ಪತ್ರದಲ್ಲಿ, ನಡೆಯುತ್ತಿರುವ ಸಂದರ್ಭಗಳಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದು, , ಮುಂದಕ್ಕೆ ಪಕ್ಷದೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ ಅವರಿಗೆ ಬರೆದಿರುವ ಪ್ರತ್ಯೇಕ ಪತ್ರದಲ್ಲಿ, ಪ್ರವಾದಿಯನ್ನು ಅವಹೇಳನ ಮಾಡುತ್ತಿರುವ ಕಾರ್ಯಕರ್ತರನ್ನು ನಿಯಂತ್ರಿಸಲು ಪಕ್ಷವು ವಿಫಲಾಗಿದ್ದು, ಹಾಗಾಗಿ ಪಕ್ಷದ ಸದಸ್ಯರಾಗಿರುವ ಬಗ್ಗೆ ವಿಷಾದವಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ಬಿಜೆಪಿಯ ಸದಸ್ಯೆಯಾಗಿ ಮುಂದುವರಿದರೆ ಮತ್ತು ಪ್ರವಾದಿ ವಿರುದ್ಧದ ಹೇಳಿಕೆಯನ್ನು ಬೆಂಬಲಿಸಿದರೆ, ನನಗಿಂತ ದೊಡ್ಡ ಅಪರಾಧಿ ಮತ್ತೊಬ್ಬರಿಲ್ಲ. ನನ್ನ ಪ್ರಜ್ಞೆ ಜಾಗೃತಗೊಂಡಿದ್ದು, ನಾನು ಇನ್ನು ಮುಂದೆ ಪಕ್ಷದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ಅವರು ಪಕ್ಷದ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಮಿರ್ಜಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಇಮೇಲ್ ಮತ್ತು ಪೋಸ್ಟ್ ಮೂಲಕ ಪೂನಿಯಾ ಮತ್ತು ಸೋನಿ ಅವರಿಗೆ ಕಳುಹಿಸಿದ್ದಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...