Homeಮುಖಪುಟಕಾವೇರಿದ TSRTC ಪ್ರೊಟೆಸ್ಟ್: ಪ್ರತಿಭಟನಾನಿರತ ಮಹಿಳೆ ಆತ್ಮಹತ್ಯೆ, ಇದು ನಾಲ್ಕನೇ ಪ್ರಕರಣ

ಕಾವೇರಿದ TSRTC ಪ್ರೊಟೆಸ್ಟ್: ಪ್ರತಿಭಟನಾನಿರತ ಮಹಿಳೆ ಆತ್ಮಹತ್ಯೆ, ಇದು ನಾಲ್ಕನೇ ಪ್ರಕರಣ

- Advertisement -
- Advertisement -

ತೆಲಂಗಾಣದಲ್ಲಿ ಟಿಎಸ್‌ಆರ್‌ಟಿಸಿ (ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ) ನೌಕರರ ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದ್ದು, ಮಹಿಳಾ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಮೂವರು ಟಿಎಸ್‌ಆರ್‌ಟಿಸಿ ನೌಕರರು ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಇಂದು ಮಹಿಳೆಯೊಬ್ಬರು ಸಾವಿಗೆ ಶರಣಾಗಿದ್ದು, ನಾಲ್ಕನೇ ಪ್ರಕರಣ ಇದಾಗಿದೆ.

ಅಕ್ಟೋಬರ್‌ ೧೪ರಂದು ಟಿಎಸ್‌ಆರ್‌ಟಿಸಿ ಚಾಲಕ ಶ್ರೀನಿವಾಸ್ ರೆಡ್ಡಿ ಬೆಂಕಿ ಹಚ್ಚಿಕೊಂಡು ಸೂಸೈಡ್ ಮಾಡಿಕೊಂಡರೆ, ದೊಡ್ಡಮೊಯಿನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರನ್ನು ಹೊರತುಪಡಿಸಿ ಇನ್ನೊಬ್ಬ ಬಸ್ ಕಂಡಕ್ಟರ್‌ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಈಗ ಮಹಿಳಾ ನೌಕರರು ಸೂಸೈಡ್ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ತಿಕ್ಕಾಟ ಮತ್ತಷ್ಟು ಹೆಚ್ಚಿದೆ.

ಇದನ್ನೂ ಓದಿ: ೪೮ ಸಾವಿರ ಸಾರಿಗೆ ನೌಕರರ ನೋವನ್ನು ಅಪಹಾಸ್ಯ ಮಾಡಿದ ತೆಲಂಗಾಣ ಸಿಎಂ ಕೆಸಿಆರ್‌

ಕಳೆದ ಕೆಲ ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟಿಎಸ್‌ಆರ್‌ಟಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ೪೮ ಸಾವಿರ ಟಿಎಸ್‌ಆರ್‌ಟಿಸಿ ನೌಕರರನ್ನು ಕೆಲಸದಿಂದ ತೆಗೆದು ಹಾಕಿತ್ತು. ಇದರಿಂದ ರೊಚ್ಚಿಗೆದ್ದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಆರ್‌ಟಿಸಿಯನ್ನು ಸರ್ಕಾರದಲ್ಲಿ ವಿಲೀನ ಮಾಡಬೇಕು ಮತ್ತು ನೌಕರರಿಗೆ ಭದ್ರತೆ ನೀಡಬೇಕು ಎಂಬುದು ಪ್ರತಿಭಟನಾನಿರತರ ಪ್ರಮುಖ ಬೇಡಿಕೆ.

ಇನ್ನು ಟಿಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆಗೆ ಕಾಂಗ್ರೆಸ್, ಸಿಪಿಐ, ಸಿಪಿಎಂ, ಸೇರಿದಂತೆ ಅನೇಕ ಪಕ್ಷಗಳು, ಸಂಘಟನೆಗಳು ಬೆಂಬಲ ಸೂಚಿಸಿವೆ. ನೌಕರರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಆದರೆ ತೆಲಂಗಾಣ ಸಿಎಂ ಚಂದ್ರಶೇಖರ್‌ ರಾವ್‌ ಮಾತ್ರ ನೌಕರರ ಪ್ರತಿಭಟನೆಗೆ ಸೊಪ್ಪು ಹಾಕುತ್ತಿಲ್ಲ. ಪ್ರತಿಭಟನಾಕಾರರನ್ನು ಸಂತೈಸುವ ಗೋಜಿಗೆ ಹೋಗಿಲ್ಲ. ಮೊನ್ನೆಯಷ್ಟೇ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ರಾವ್, ಟಿಎಸ್‌ಆರ್‌ಟಿಸಿ ಮುಚ್ಚಿ ಹೋಗಲಿದೆ. ಪ್ರತಿಭಟನೆ ಮೂಲಕವೇ ಬಂದ್ ಆಗಲಿದೆ ಎಂದು ದುರಹಂಕಾರದ ಮಾತುಗಳನ್ನಾಡಿದ್ದರು.

ತೆಲಂಗಾಣದಲ್ಲಿ ಪ್ರತಿಭಟನಾ ನಿರತ ನೌಕರರು ರಸ್ತೆ ಬದಿಯಲ್ಲೇ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಸಿಎಂ ಚಂದ್ರಶೇಖರ್‌ ರಾವ್‌ ಅವರ ನಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಬೇಡಿಕೆ ಈಡೇರದ ಹೊರತು ಕದಲುವುದಿಲ್ಲ. ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...