Homeಕರ್ನಾಟಕಸೋಮಶೇಖರ್‌ ರೆಡ್ಡಿ ಹೇಳಿಕೆ ಖಂಡಿಸಿ ಬಳ್ಳಾರಿಯಲ್ಲಿ ಭಾರೀ ಪ್ರತಿಭಟನೆ... ದೂರು ದಾಖಲಿಸಲು ಆಗ್ರಹ

ಸೋಮಶೇಖರ್‌ ರೆಡ್ಡಿ ಹೇಳಿಕೆ ಖಂಡಿಸಿ ಬಳ್ಳಾರಿಯಲ್ಲಿ ಭಾರೀ ಪ್ರತಿಭಟನೆ… ದೂರು ದಾಖಲಿಸಲು ಆಗ್ರಹ

- Advertisement -
- Advertisement -

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಿನ್ನೆ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ಪ್ರಚೋದನಾಕಾರಿ ಭಾಷನ ಮಾಡಿದ್ದನ್ನು ಖಂಡಿಸಿ ಇಂದು ಬಳ್ಳಾರಿಯಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು, ಕೂಡಲೇ ಪೊಲೀಸರು ದೂರು ದಾಖಲಿಸುವಂತೆ ಆಗ್ರಹಿಸಿದ್ದಾರೆ.

ನಗರದ ಶಾದಿಮಹಲ್‌ ಬಳಿ ಜಮಾವಣೆಗೊಂಡ ಸಹಸ್ರಾರು ಜನರು ಸೋಮಶೇಖರ್‌ ರೆಡ್ಡಿಯ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಅಲ್ಲಿಂದ ನಿನ್ನೆ ಸೋಮಶೇಖರ್‌ ರೆಡ್ಡಿ ಭಾಷಣ ಮಾಡಿದ್ದ ಗಡಗಿ ಚೆನ್ನಪ್ಪ ವೃತ್ತಕ್ಕೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ರಸ್ತೆಗಳನ್ನು ಬಂದ್‌ ಮಾಡಿದ್ದಾರೆ.

ದಿಢೀರ್‌ ಪ್ರತಿಭಟನೆಯಿಂದ ಗೊಂದಲಗೊಂಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸಪಡುತ್ತಿದ್ದಾರೆ. ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಹೆಚ್ಚುವರಿ ಎಸ್ಪಿ ಬಿ.ಎನ್‌ ಲಾವಣ್ಯ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದಾರೆ.

ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ಪಾಲ್ಗೊಂಡಿದ್ದು ಎಫ್‌ಐಆರ್‌ ದಾಖಲಾಗುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಿನ್ನೆ ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ತಮ್ಮ ನಾಲಿಗೆ ಹರಿಯಬಿಟ್ಟಿದ್ದರು. ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ, ನಾವು 80% ಇರೋರು. ನೀವು ಬರೀ 17% ಇರೋದು. ನಾವು ತಿರುಗಿಬಿದ್ರೆ ನಿಮ್‌ ಪರಿಸ್ಥಿತಿ ಎನಾಗುತ್ತೆ ಗೊತ್ತಾ? ಎಚ್ಚರವಿರಲಿ, ಮೈಮೇಲೆ ಎಚ್ಚರವಿಟ್ಟುಕೊಂಡು ನಮ್‌ ದೇಶದಲ್ಲಿರಿ… ಎಂದಿದ್ದರು.

ಶಾಸಕರ ಹೇಳಿಕೆಗೆ ಸಾಮಾಜಿಕ ತಾಲತಾಣದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ನಮ್ಮ ಸರ್ವಜನಾಂಗದ ಶಾಂತಿಯ ತೋಟ ಇಲ್ಲಿ ದ್ವೇಷಕ್ಕೆ ಅವಕಾಶವಿಲ್ಲ ಎಂದು ಹಲವರು ಬುದ್ದಿಮಾತು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...