Homeಕರ್ನಾಟಕJNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಿಂದ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ..

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಿಂದ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ..

- Advertisement -
- Advertisement -

ಹಾಸ್ಟೆಲ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳ ವಿರೋಧಿಸಿ ಹೋರಾಡುತ್ತಿದ್ದ JNU ವಿದ್ಯಾರ್ಥಿಗಳ ಮೇಲಿನ ಪೊಲೀಸ್‌ ದಾಳಿ ಖಂಡಿಸಿ ಕರ್ನಾಟಕದ ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ.

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ SFI, AISF, AIDSO ಮತ್ತು KVS ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಲಿದ್ದು ಜೆಎನ್‌ಯು ವಿದ್ಯಾಥಿ೯ಗಳ ಪರ ದನಿ ಎತ್ತಲಿದ್ದಾರೆ.

ಹಾಸ್ಟಲ್ ಶುಲ್ಕವೂ ಸೇರಿದಂತೆ ವಿದ್ಯಾರ್ಥಿಗಳ ಮೇಲೆ ಶುಲ್ಕದ ಹೊರೆಯನ್ನು ಹೇರುವ ಮೂಲಕ ಬಹುಸಂಖ್ಯಾತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ಹೊರಗಿಡುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ವಿರೋಧಿಸಿ, ಶುಲ್ಕ ಹೆಚ್ಚಳದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ಕ್ರೂರ ದಾಳಿಯನ್ನು ಖಂಡಿಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳು ಹೇಳಿವೆ.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ತರಲೊರಟಿರುವ ಹೊಸ ಶಿಕ್ಷಣ ನೀತಿ 2019ನ್ನು ಸಹ ಕರ್ನಾಟಕದ ವಿದ್ಯಾರ್ಥಿ ಒಕ್ಕೂಟಗಳು ವಿರೋಧಿಸಿವೆ. ಸಮರ್ಪಕ ಚರ್ಚೆಯ ನಂತರವೇ ಅಂಗೀಕರಿಸಬೇಕೆಂದು ಒತ್ತಾಯಿಸಿವೆ.

ಜೆಎನ್‌ಯು ಮೇಲಿನ ದಾಳಿ ಕ್ರೂರ ಮನಸ್ಥಿತಿಯದ್ದಾಗಿದೆ. ಮೋದಿ ಮತ್ತು ಆರ್‌ಎಸ್‌ಎಸ್‌ ಎಲ್ಲಾ ಕಡೆ ದೇಶವನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ. ಆದರೆ ಫ್ಯಾಸಿಸಂನ ಮತಾಂಧತೆಗೆ ಜೆಎನ್‌ಯು ತಡೆಯಾಗಿದೆ. ಪ್ರಜಾಪ್ರಭುತ್ವವನ್ನು, ಕ್ಯಾಂಪಸ್‌ ಡೆಮಾಕ್ರಸಿಯನ್ನು ಉಳಿಸುತ್ತಿರುವುದು ಜೆಎನ್‌ಯು ಆಗಿದೆ. ಬನಾರಸ್‌ ವಿ.ವಿಯಲ್ಲಿ ಫಿರೋಜ್‌ ಖಾನ್‌ ಎಂಬ ಸಂಸ್ಕೃತ ಶಿಕ್ಷಕ ಪಾಠ ಮಾಡಬಾರದೆಂದು ಪ್ರತಿಭಟನೆ ನಡೆದರೆ ಅದಕ್ಕೆ ಪೊಲೀಸರ ಸರ್ಕಾರದ ಬೆಂಬಲವಿದೆ. ಜೆಎನ್‌ಯುನಲ್ಲಿ ಶುಲ್ಕ ಹೆಚ್ಚಳದ ವಿರುದ್ಧ ನ್ಯಾಯಯುತ ಹೋರಾಟವನ್ನು ಹತ್ತಿಕ್ಕಲಾಗಿದೆ. ಇದು ಯಾವ ನ್ಯಾಯ? ಎಂದು ಚಿಂತಕರಾದ ಬಿ.ಶ್ರೀಪಾದ್‌ ಭಟ್‌ ಪ್ರಶ್ನಿಸಿದ್ದಾರೆ.

ಕರ್ನಾಟಕದ ಹಂಪಿ ವಿಶ್ವವಿದ್ಯಾಲಯ ಎರಡು ವರ್ಷಗಳಿಂದ ದಲಿತ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ಸಿಕ್ಕಿಲ್ಲ ಅದಕ್ಕಾಗಿಯೂ ಹೋರಾಟ ನಡೆಯುತ್ತಿದೆ. ಉಚಿತ, ಗುಣಮಟ್ಟದ ಕಡ್ಡಾಯ ಶಿಕ್ಷಣಕ್ಕಾಗಿ ದೇಶದ ಎಲ್ಲಾ ಕಡೆ ಹೋರಾಟಗಳಾಗಬೇಕಿದ್ದು ಅದಕ್ಕಾಗಿ ಬೆಂಗಳೂರಿನಲ್ಲಿ ನಾಳೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ, ಪ್ರಜ್ಞಾವಂತರೆಲ್ಲರೂ ಜೊತೆಗೂಡಬೇಕೆಂದು ಮನವಿ ಮಾಡಿದ್ದಾರೆ.

ಕೇಂದ್ರದ ಅನೈತಿಕ ನಡೆಗಳಿಗೆ ಜೆಎನ್‌ಯು ಮಗ್ಗುಲು ಮುಳ್ಳಾಗಿ ಕಾಡುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ಜೆಎನ್‌ಯುವನ್ನೇ ಇಲ್ಲವಾಗಿಸಲು ಹೊರಟಿದೆ. ದಲಿತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಬಾರದೆಂಬುದು ಕೇಂದ್ರದ ನಿಲುವಾಗಿದೆ. ಅದಕ್ಕಾಗಿ ಶಾಂತಿಯುತವಾಗಿ ಹೋರಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಎಫ್‌ಐಆರ್ ಹಾಕಿ ಹಿಂಸಿಸಲಾಗುತ್ತಿದೆ. ಇದನ್ನು ಕೂಡಲೇ ವಾಪಸ್  ಪಡೆಯಬೇಕು ಮತ್ತು ಶುಲ್ಕ ಹೆಚ್ಚಳವನ್ನು ಹಿಂತೆಗೆದುಕೊಳ್ಳಬೇಕು. ಅವರೆತ್ತಿರುವ ಪ್ರಶ್ನೆ ಉಚಿತ ಶಿಕ್ಷಣದ ಕುರಿತು ಚರ್ಚೆ ನಡೆಯಬೇಕಿದೆ. ಅದು ಕೇವಲ ಎಡಪಂಥಿಯರ ಹೋರಾಟ ಮಾತ್ರ ಎಂದು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ದೇಶದ ಎಲ್ಲಾ ಬಡವರ ಪರವಾಗಿನ ಹೋರಾಟ ಅದಾಗಿದ್ದು ಅದನ್ನು ನಾವು ಬೆಂಬಲಿಸಬೇಕಾಗಿದೆ ಎಂದು SFI ನ ಅಧ್ಯಕ್ಷರಾದ ಅಂಬರೀಶ್‌ ವಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...