Homeಕರ್ನಾಟಕಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

ಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

- Advertisement -
- Advertisement -

ಭೂಸುಧಾರಣಾ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ತುಮಕೂರಿನಲ್ಲಿ ವರದಿಯಾಗಿದೆ. ನಿಮ್ಮದೇ ಸರ್ಕಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ರೈತ ಮುಖಂಡರ ಪ್ರಶ್ನೆ ಸಚಿವರು ಕೆರಳಿದರು. ರೈತ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಲಾರದೆ ಸಚಿವರು ಬೇಸರಗೊಂಡು ಕಾರಿನಲ್ಲಿ ಹೋಗಿ ಕುಳಿತ ಘಟನೆ ಜರುಗಿದೆ.

ರೈತ ಮುಖಂಡರು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದಾಗ ಸಚಿವರು ಸಿಡಿಮಿಡಿ ವ್ಯಕ್ತಪಡಿಸಿದರು. ಆಗ ಮಾತಿಗೆ ಮಾತು ಬೆಳೆಯಿತು. ಪ್ರತಿಭಟನಾನಿರತ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ಒಂದು ಹಂತದಲ್ಲಿ ಪ್ರತಿಭಟನಾರರು ದಿಕ್ಕಾರ ಕೂಗುತ್ತಿದ್ದಂತೆಯೇ ಸಚಿವರು ಹೊರಟು ಹೋದರು. ಮತ್ತೆ ಸಚಿವರನ್ನು ಸಮಾಧಾನಪಡಿ ಅಧಿಕಾರಿಗಳು ಕರೆತಂದರು. ಸಚಿವರು ಹಠಕ್ಕೆ ಬಿದ್ದಂತೆ ತನ್ನ ಪಟ್ಟನ್ನು ಸಡಿಸಲೇ ಇಲ್ಲ. ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಬಳಿ ಬಂದಾಗ ಈ ಘಟನೆ ಜರುಗಿದೆ.

ಭೂಸುಧಾರಣೆ ಕಾಯ್ದೆ 1961ಕ್ಕೆ ತಿದ್ದುಪಡಿ ತಂದು ಕಾಯ್ದೆ ಕಲಂ 79 ಎ,ಬಿ,ಸಿ ಮತ್ತು 63 ಹಾಗೂ 80ನ್ನು ತೆಗೆದಹಾಕುವ ಕರಡು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವುದನ್ನು ವಿರೋಧಿಸಿ ಹಲವು ರೈತ ಸಂಘಟನೆಗಳು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದವು.

ಯಾವುದೇ ತಿದ್ದುಪಡಿ ಅಥವಾ ಕಾಯ್ದೆ ರೂಪಿಸಲು ಸಾರ್ವಜನಿಕರ ಒಳಿತು ಅದರಲ್ಲಿ ಅಡಕವಾಗಿರಬೇಕು. ಅದನ್ನು ಜನಸಮುದಾಯ ಒಪ್ಪುವಂತಿರಬೇಕು, ಅದು ಸಮರ್ಥನೀಯವಾಗಿರಬೇಕು. ಅಂತಹ ಕಾಯ್ದೆ ಅಥವಾ ತಿದ್ದುಪಡಿ ಅಧಿವೇಶನದಲ್ಲಿ ಚರ್ಚೆಯಾಗಬೇಕು. ಇಂತಹ ಚರ್ಚೆಗೆ ಅವಕಾಶ ನೀಡದೆ ಸರ್ಕಾರ ತರಲು ಉದ್ದೇಶಿಸಿರುವ ಭೂಸುಧಾರಣಾ ಕಾಯ್ದೆ ಬಾಲಿಶವಾಗಿರುತ್ತವೆ ಎಂದು ಪ್ರತಿಭಟನಾಕಾರರು ದೂರಿದರು.
ಕಲಂಗಳನ್ನು ರದ್ದುಪಡಿಸಿದರೆ ಭೂಸುಧಾರಣಾ ಕಾಯ್ದೆಯ ಅಸ್ತಿತ್ವವೇ ಇರುವುದಿಲ್ಲ. ಕಾಯ್ದೆಯ ಮೂಲ ಉದ್ದೇಶ ಉಳುವವನೇ ಭೂಮಿಯ ಒಡೆಯ ಎಂಬ ಪರಿಕಲ್ಪನೆಗೆ ಈ ತಿದ್ದುಪಡಿ ತಿಲಾಂಜಲಿ ಇಡಲಿದೆ. ಉಳ್ಳವರು ಮಾತ್ರ ಭೂಮಿ ಹೊಂದಲು ಸಾಧ್ಯವಾಗುತ್ತದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಸಣ್ಣ ಹಿಡುವಳಿ ರೈತರೇ ಜಾಸ್ತಿ ಇದ್ದು ಅವರ ಸಂಪೂರ್ಣ ಬದುಕು ಬೀದಿಗೆ ಬೀಳಲಿದೆ. ರೈತರ ಅಸ್ತಿತ್ವವೇ ಇಲ್ಲವಾಗಲಿದೆ.. ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ದಲಿತರು ಅತ್ಯಂತ ಸಂಕಷ್ಟಕ್ಕೆ ಈಡಾಗುತ್ತಾರೆ. ರೈತಾಪಿ ಕೃಷಿ ಸಂಸ್ಕೃತಿ ಮಾಯವಾಗಿ ಬಂಡವಾಳಿಗರ ಕೃಷಿ ಸಂಸ್ಕೃತಿ ಬೆಳೆಯುತ್ತದೆ ಮತ್ತು ಸಮಾಜದಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ ಎಂದು ಆರೋಪಿಸಿದರು.

ತಿದ್ದುಪಡಿಯಿಂದ ಆಹಾರ ಸಾರ್ವಭೌಮತ್ವಕ್ಕೆ ಪೆಟ್ಟು ಬಿದ್ದು ಆಹಾರ ಭದ್ರತೆಯ ಹಕ್ಕು ನಾಶವಾಗುತ್ತದೆ. ಆಹಾರಕ್ಕಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಗ್ರಾಹಕರ ಮೇಲೂ ಹೊಡೆತ ಬೀಳುತ್ತದೆ. ಬಂಡವಾಳಶಾಹಿಗಳು ಕುಲಾಂತರಿ ಬೀಜಗಳ ಬಳಕೆ, ರಾಸಾಯನಿಕ ಕೃಷಿ, ಮಾನೋಕಲ್ಚರ್‌ಗೆ ಒತ್ತು ನೀಡಿ ಇಡೀ ಪರಿಸರವೇ ನಾಶವಾಗುತ್ತದೆ. ಇದರಿಂದ ಆಹಾರ ಸಂಸ್ಕಂತಿಗೆ ಪೆಟ್ಟು ಬೀಳುತ್ತದೆ ಎಂದು ಆಪಾದಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಎಸ್ ಸಿಸಿ, ಎಐಕೆಎಸ್, ದಲಿತ ಸಂಘರ್ಷ ಸಮಿತಿಗಳು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ರೈತ ಮುಖಂಡ ಅಹವಾಲುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ದು ಹೇಳಿ ಬೇಸರದಿಂದಲೇ ಅಲ್ಲಿಂದ ತೆರಳಿದರು. ಇದೇ ವೇಳೆ ಸಂಸದ  ಅವರಿಗೂ ಮನವಿ ಸಲ್ಲಿಸಲಾಯಿತು. ಪಾರ್ಲಿಮೆಂಟ್ ನಲ್ಲಿ ಚರ್ಚಿಸುತ್ತೇನೆ. ಪ್ರಧಾನಿಗಳ ಗಮನ ಸೆಳೆಯುತ್ತೇನೆ ಎಂದು ಬಸವರಾಜು ರೈತ ಮುಖಂಡರಿಗೆ ಭರವಸೆ ನೀಡಿದರು.


ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...