ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ ಮತ್ತು ನಾರನಹಳ್ಳಿ ಗ್ರಾಮಗಳ 2100 ಎಕರೆ ರೈತರ ಫಲವತ್ತಾದ ಕೃಷಿ ಭೂಮಿಯ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ ಎಂದು ತಿಳಿದು ಬಂದಿದೆ. ಇದರ ವಿರುದ್ದ ಹೋರಾಟದ ರಣಕಹಳೆ ಮೊಳಗಿಸಿರುವ ಗ್ರಾಮಸ್ಥರು ಮಂಗಳವಾರ (ಮಾ.31) ಬೃಹತ್ ಪ್ರತಿಭಟನೆ ನಡೆಸಿದ್ದಾರೆ. … Continue reading ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ