Homeಮುಖಪುಟಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ: ಸಿದ್ದರಾಮಯ್ಯ, ಡಿ.ಕೆ.ಶಿ, ಸುರ್ಜೇವಾಲರನ್ನು ವಶಕ್ಕೆ ಪಡೆದ ಪೊಲೀಸರು

ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ: ಸಿದ್ದರಾಮಯ್ಯ, ಡಿ.ಕೆ.ಶಿ, ಸುರ್ಜೇವಾಲರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ ಕೆ.ಎಸ್ ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ರಾಜ್ಯ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದಾರೆ.

ಪ್ರತಿಭಟನೆಯನ್ನು ಉದ್ದೇಶಿಸಿ ಸಿದ್ದರಾಮಯ್ಯನವರು ಮಾತನಾಡಿ, “ಇಂದು ದೇಶಾದ್ಯಂತ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತಿದೆ. ಆದರೆ ಬಿಜೆಪಿ ಸರ್ಕಾರ ಅಂಬೇಡ್ಕರ್ ರಚಿಸಿದ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ” ಎಂದು ಆರೋಪಿಸಿದರು.

ಡಿ.ಕೆ ಶಿವಕುಮಾರ್‌ರವರು ಮಾತನಾಡಿ, “40% ಭ್ರಷ್ಟಾಚಾರದಲ್ಲಿ ಭಾಗಿಯಾಗಿ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ ಈಶ್ವರಪ್ಪನವರನ್ನು ಬಂಧಿಸಿ ತನಿಖೆ ನಡೆಸಬೇಕು. ಅವರಿಂದ ರಾಜೀನಾಮೆ ಪಡೆಯಬೇಕು” ಎಂದು ಒತ್ತಾಯಿಸಿದರು.

‘ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ನಾನು, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಾಗೂ ಬೆಂಗಳೂರಿನ ಶಾಸಕರು ವಿಧಾನಸೌಧ ಮತ್ತು ಹೈಕೋರ್ಟ್ ಮುಂಭಾಗದಲ್ಲಿ 24 ತಾಸುಗಳ ಕಾಲ ಅಹೋರಾತ್ರಿ ಧರಣಿ ಮಾಡುತ್ತೇವೆ. ಹೀಗಾಗಿ ನಾಳೆಯಿಂದ ಆರಂಭವಾಗಬೇಕಿದ್ದ ಜಿಲ್ಲಾವಾರು ಪ್ರತಿಭಟನೆ ಒಂದು ದಿನ ಮುಂದೂಡಲಾಗಿದ್ದು, ಏಪ್ರಿಲ್ 16, ಶನಿವಾರದಿಂದ ಆರಂಭವಾಗಲಿದೆ. ಮುಂದಿನ ಹೋರಾಟದ ಬಗ್ಗೆ ನಂತರ ಮಾಹಿತಿ ನೀಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಆ ನಂತರ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, “40% ಕಮಿಷನ್ ಕಿರುಕುಳ ನೀಡಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವ ಬದಲು ರಾಜ್ಯ ಬಿಜೆಪಿ ಸರ್ಕಾರ ನ್ಯಾಯ ಕೇಳಿದ ನಮ್ಮನ್ನೇ ಬಂಧಿಸಿದೆ. ಬಲಪ್ರಯೋಗದ ಮೂಲಕ ನಮ್ಮನ್ನು ಸುಮ್ಮನಾಗಿಸಬಹುದು ಎಂದು ಅಂದುಕೊಂಡಿದ್ದರೆ ಅದು ಸರ್ಕಾರದ ಭ್ರಮೆ. ಸಂತೋಷ್ ಪಾಟೀಲ್ ಸಾವಿಗೆ ನ್ಯಾಯ ಸಿಗುವವರೆಗೆ ನಾವು ಹೋರಾಟ ಕೈಬಿಡುವುದಿಲ್ಲ. ನಮ್ಮನ್ನು ಬಂಧಿಸುವ ಮೂಲಕ ಭ್ರಷ್ಟಾಚಾರಿಗಳಿಗೆ ಬೆಂಬಲವಾಗಿ ನಿಂತಿರುವ ಬಿಜೆಪಿ ಸರ್ಕಾರ ಇಂದು ಮತ್ತೊಮ್ಮೆ ರಾಜ್ಯದ ಜನರೆದುರು ಬೆತ್ತಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಂತೋಷ್‌ ಸಾವು: ಸಚಿವ ಈಶ್ವರಪ್ಪರನ್ನು ಬಂಧಿಸುವಂತೆ ಬೆಂಗಳೂರಿನಲ್ಲಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...