Homeಮುಖಪುಟಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದ ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರತಿಭಟನೆ

ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದ ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರತಿಭಟನೆ

- Advertisement -
- Advertisement -

ಪೌರತ್ವ ಕಾಯ್ದೆ ಪರ ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ರೇಣುಕಾಚಾರ್ಯ ವಿರುದ್ಧ ಇಂದು ದಾವಣಗೆರೆಯಲ್ಲಿ ಪ್ರತಿಭಟನೆ ನಡೆದಿದೆ.

ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿರುವ ರೇಣುಕಾಚಾರ್ಯ ಕ್ಷಮೆ ಕೇಳಬೇಕು. ಕೂಡಲೇ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ನಿನ್ನೆ ಪೌರತ್ವ ಕಾಯ್ದೆ ಪರ ಪ್ರತಿಭಟನೆಯಲ್ಲಿ ಮಾತನಾಡಿದ್ದ ರೇಣುಕಾಚಾರ್ಯ, ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡುತ್ತಾರೆ. ನಿಮ್ಮನ್ನು ಎಲ್ಲಿ ಇಡಬೇಕೋ ಅಲ್ಲೇ ಇಡುತ್ತೇವೆ, ಮುಸ್ಲಿಂ ಕೇರಿಗೆ ಬಂದ ಅನುದಾನವನ್ನು ಹಿಂದೂಗಳ ಕೇರಿಗೆ ಹಾಕಿ ಅವರನ್ನು ಅಭಿವೃದ್ಧಿ ಮಾಡುತ್ತೇನೆ. ಇನ್ಮುಂದೆ ರಾಜಕಾರಣ ಏನು ಎನ್ನುವುದನ್ನು ಮಾಡಿ ತೋರಿಸುತ್ತೇನೆ ಎಂದು ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಪ್ರಚೋನಕಾರಿ ಭಾಷಣ ಮಾಡಿದ್ದರು.

ಇದಕ್ಕೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಪೌರತ್ವ ಕಾಯ್ದೆ ಸಮರ್ಥಿಸಲು ಅವರ ಬಳಿ ಯಾವುದೇ ವಾದಗಳಿಲ್ಲದಿದ್ದಾಗ ಅವರು ಈ ರೀತಿ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಮಾತನಾಡುತ್ತಾರೆ ಎಂದು ಪ್ರಗತಿಪರರು ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...