Homeಮುಖಪುಟದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

ದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

"ಮಾರ್ಗರೇಟ್ ರಾಮಾಚಾರಿ ಸುಖವಾಗಿ ಬಾಳಲು ಆಗಿಲ್ಲ - ಇನ್ನು ಮುಂದು ಪ್ರೀತಿಗೆ ಯಾರು ಅಡ್ಡ ಬರಬಾರದು, ಸರ್ಕಾರ ಕೂಡ!" ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

- Advertisement -
- Advertisement -

“ಮಾರ್ಗರೇಟ್ ರಾಮಾಚಾರಿ ಸುಖವಾಗಿ ಬಾಳಲು ಆಗಿಲ್ಲ – ಇನ್ನು ಮುಂದು ಪ್ರೀತಿಗೆ ಯಾರು ಅಡ್ಡ ಬರಬಾರದು, ಸರ್ಕಾರ ಕೂಡ! ಸರ್ವ ಜನಾಂಗದ ಶಾಂತಿಯ ತೋಟವನ್ನು ಉಳಿಸಿಕೊಳ್ಳೋಣ ಬನ್ನಿ. ದ್ವೇಷ ಸಾಕು, ಪ್ರೀತಿ ಬೇಕು. ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ”.. ಇವಿಷ್ಟು ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮತೀಯ ಗೂಂಡಾಗಿರಿ ಮತ್ತು ಅದನ್ನು ಸಮರ್ಥಿಸಿಕೊಳ್ಳುವ ಮುಖ್ಯಮಂತ್ರಿಗಳ ಹೇಳಿಕೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕಂಡುಬಂದ ಮತ್ತು ಕೇಳಿಬಂದ ಘೋಷಣೆಗಳು.

ಕ್ರಿಯೆಗೆ ಪ್ರತಿಕ್ರಿಯೆ ಕೊಡುವುದು ವಿನಾಶಕ್ಕೆ ಕರೆದೊಯ್ಯುತ್ತದೆ. ಬಸವಣ್ಣನನ್ನೆ ಮರೆತ ಬೊಮ್ಮಾಯಿ, ಸಾಂವಿಧಾನಿಕ ಮೌಲ್ಯಗಳನ್ನು ಮರೆತ ಮುಖ್ಯಮಂತ್ರಿ. ಜಾತಿ ಧರ್ಮದ ಹೆಸರಿನಲ್ಲಿ ಕಗ್ಗೊಲೆ ಸಾಕು ಎಂಬ ಘೋಷಣೆಗಳ ಮೂಲಕ ನೂರಾರು ಪ್ರತಿಭಟನಾಕಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲರಾದ ವಿನಯ್ ಶ್ರೀನಿವಾಸ್, “ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಸಂವಿಧಾನದ ಮೇಲೆ ಪ್ರಮಾಣ ಮಾಡಿದರು. ನನ್ನ ಬದ್ಧತೆ ಸಂವಿಧಾನಕ್ಕೆ, ಈ ನಾಡಿನಲ್ಲಿ ಯಾವುದೇ ಒಂದು ವರ್ಗಕ್ಕೆ ಒಲವು ತೋರಿಸದೆ ಎಲ್ಲ ವರ್ಗಕ್ಕೂ ನ್ಯಾಯ ಸಿಗುವಂತೆ ಆಡಳಿತ ನಡೆಸುತ್ತೇನೆ, ಸಂವಿಧಾನದ ಮೌಲ್ಯಗಳಿಗೆ ತಕ್ಕಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಆದರೆ ಅವು ಇಂದು ಮಾಡುತ್ತಿರುವುದು ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಯುವಕ-ಯುವತಿಯರು ಒಂದು ಐಸ್ ಕ್ರೀಂ ತಿನ್ನಲು ಸಹ ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ಜಾತಿ-ಧರ್ಮ ನೋಡಲಾಗುತ್ತಿದೆ. ಬಜರಂಗದಳ, ವಿಎಚ್‌ಪಿ ಗೂಂಡಾಗಳ ಕಿರುಕುಳದಿಂದ ಯುವಕ ಯುವತಿಯರು ತಮ್ಮಿಷ್ಟ ಬಂದವರ ಜೊತೆ ಸ್ನೇಹ ಮಾಡುವಂತಿಲ್ಲ, ಅವರಿಗೆ ತಮಗಿಷ್ಟ ಬಂದವರನ್ನು ಪ್ರೀತಿ ಮಾಡುವ ಹಕ್ಕಿಲ್ಲದಂತಹ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಮತೀಯ ಗೂಂಡಾಗಿರಿ ಸಮರ್ಥನೆ ಹೇಳಿಕೆ ಹಿಂಪಡೆಯಿರಿ: ಸಿಎಂ ಬೊಮ್ಮಾಯಿಗೆ ನೋಟೀಸ್


ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹ ಅಗತ್ಯ ಎಂದಿದ್ದರು. ಆದರೆ ಇಂದು ಅಂತರ್ಜಾತಿ ಮದುವೆಗೆ ಕಲ್ಲು ಹಾಕುತ್ತಿದ್ದಾರೆ. ಜನರ ನಡುವೆ ಜಾತಿ ಧರ್ಮದ ಗೋಡೆ ಕಟ್ಟುತ್ತಿದ್ದಾರೆ. ಮಹಿಳೆಯರ ಮೇಲೆ ದಾಳಿ ಅವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಿಳೆಯರು ಯಾರೊಂದಿಗೆ ಸ್ನೇಹ ಮಾಡಬೇಕು, ಯಾರೊಂದಿಗೆ ಮದುವೆಯಾಗಬೇಕು ಎಂಬುದನ್ನು ನಿಯಂತ್ರಿಸುತ್ತಿದ್ದಾರೆ. ಏಕೆ ಮಹಿಳೆಯರಿಗೆ ಜ್ಞಾನವಿಲ್ಲವೇ? ಸ್ವಾತಂತ್ರ್ಯವಿಲ್ಲವೇ? ಮಹಿಳೆಯರು ಏನು ಮಾಡಬೇಕೆಂದು ತೀರ್ಮಾನಿಸಲು ಇವರ್ಯಾರು ಎಂದು ಕಿಡಿಕಾರಿದರು.

ನಿಮ್ ತಲೇಲಿ ಬೂಸಾ ತುಂಬಿಕೊಂಡಿದೆ. ನೀವು ಬೇರೆಯವರಿಗೆ ಪಾಠ ಮಾಡಬೇಡಿ. ಕರ್ನಾಟಕದಲ್ಲಿ ದ್ವೇಷ ತುಂಬಿಸುತ್ತಿದ್ದಾರೆ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಅಪೌಷ್ಠಿಕತೆ ತುಂಬಿಕೊಂಡಿದೆ. ಇದರ ಬಗ್ಗೆ ಸಮೀಕ್ಷೆ ಮಾಡಲು ಯಾರು ಮುಂದೆ ಬಂದಿಲ್ಲ, ಆದರೆ ಚರ್ಚ್‌ಗಳ ಸಮೀಕ್ಷೆ ಮಾಡುತ್ತೇವೆ, ಅಲ್ಲಿ ಮತಾಂತರ ತಡೆಯುತ್ತೇವೆ ಎಂದು ಗೂಂಡಾಗಿರಿ ಮಾಡುತ್ತಿದ್ದಾರೆ. ಇವರು ಅಶ್ಪೃಶ್ಯತೆ ನಿಲ್ಲಿಸಲು, ದಲಿತರ ಮೇಲೆ ದೌರ್ಜನ್ಯ ತಡೆಗಟ್ಟಲು ಏನು ಮಾಡಿದ್ದಾರೆ? ಬೆಂಗಳೂರಿನಲ್ಲಿ ಸ್ಲಂ ಜನರಿಗೆ ಏನು ಸಹಾಯ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಲು ತಾವು ಹೇಳಿದ ಹೇಳಿಕೆಗಳನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಬೇಕು. ರಾಜ್ಯ ಸರ್ಕಾರವು ಸಂವಿಧಾನವನ್ನು ಎತ್ತಿಹಿಡಿಲಾಗುತ್ತೆಂದು ಹಾಗೂ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಮತ್ತು ಅಂತಹ ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಶಿಕ್ಷಿಸಲು ಕ್ರಮ ಕೈಗೊಳ್ಳಲಾಗುವುದೆಂದು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ವೋಚ್ಛ ನ್ಯಾಯಾಲಯವು ಅಂತರ್ಜಾತಿ ಮತ್ತು ಅಂತರ್‌ ಧರ್ಮೀಐ ವಿವಾಹಗಳನ್ನು ರಕ್ಷಿಸಲು ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ಅಂತಹ ವಿವಾಹಿತ ವ್ಯಕ್ತಿಗಳ ವಿರುದ್ಧ ನಡೆಯುವ ಹಿಂಸೆ, ಮರ್ಯಾದಾ ಹತ್ಯೆಗಳು ಮತ್ತು “ನೈತಿಕ ಪೊಲೀಸ್‌ಗಿರಿ” ವಿರುದ್ಧ ತೆಗೆದುಕೊಳ್ಳುವ ಕಾನೂನು ಕ್ರಮಗಳನ್ನು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಭಾಗವಹಿಸಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...