Homeಕರ್ನಾಟಕಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

- Advertisement -
- Advertisement -

ಪ್ರತಾಪ್ ಗೌಡ ಪಾಟೀಲನ ಪ್ರಲಾಪ: ಮಸ್ಕಿಯ ಬಿಜೆಪಿ ಪರಾಜಿತ ಅಭ್ಯರ್ಥಿಯಿಂದ ತನಗೆ ಟಿಕೆಟ್ ನೀಡಬೇಕೆಂದು ಆಗ್ರಹ

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ಅತೃಪ್ತರ ಬಣ ಸೇರಿ ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದು ಸರಿಯಷ್ಟೇ. ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದ ಅವರು ಈಗ ಜನರ ಅಭಿಪ್ರಾಯ ಪಡೆದೇ ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ. ಇದರಿಂದ ಮಸ್ಕಿ ಮತ್ತು ಸಿಂಧನೂರಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು ಪರ-ವಿರೋಧದ ಅಲೆಯೆದ್ದಿದೆ.

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ನಾನು ಕ್ಷೇತ್ರದ ಜನರೊಡನೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಪಡೆದೇ ರಾಜೀನಾಮೆ ನೀಡಿದ್ದೇನೆ ಎಂದು ಹೊಸ ವರಸೆ ಶುರು ಮಾಡಿದ್ದಾರೆ. ಇದಕ್ಕೆ ಒಹೋ ಮುಂಬೈ ಹೋಟೆಲ್‍ನಿಂದಲೇ ಜನಾಭಿಪ್ರಾಯ ಪಡೆದಿದ್ದೀರಿ ಎಂದು ಅವರು ಎದುರು ಕೇವಲ 213 ಮತಗಳಿಂದ ಸೋತ ಬಿಜೆಪಿಯ ಆರ್ ಬಸವನಗೌಡ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿಯ ಆರ್ ಬಸವನಗೌಡ

ಅಷ್ಟೇ ಅಲ್ಲದೇ ಕಳೆದ ಬಾರಿ ಅತ್ಯಲ್ಪ ಮತಗಳಿಂದ ಸೋತ ಪ್ರತಾಪ್ ಗೌಡರು ಈಗ ಸೋಲಿನ ಭಯದಿಂದ, ಹಣದಾಸೆಯಿಂದ ರಾಜಿನಾಮೇ ನೀಡಿ ಬಿಜೆಪಿಯಿಂದ ಸ್ಪರ್ಧಿಸಲು ನೋಡುತ್ತಿದ್ದಾರೆ. ಮುಂದೆ ಅವರು ಗೆಲ್ಲುವದಿಲ್ಲ ಎಂದು ಅವರೇ ಹೇಳಿದ್ದಾರೆ, ಹಾಗಾಗಿ ತರಾತುರಿಯಲ್ಲಿ ಸಚಿವರಾಗಿ ದಿಢೀರ್ ದುಡ್ಡು ಮಾಡುವುದಕ್ಕೆ ಹೀಗೆಲ್ಲಾ ಆಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಅವರಿಗಾಗಲೀ, ಅವರ ಮಕ್ಕಳಿಗಾಗಲೀ ಟಿಕೆಟ್ ನೀಡಬಾರದು. ಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೇಟ್ ನೀಡಬೇಕು, ನಾನು ಬಿಜೆಪಿಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೇನೆ. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಎಚ್ಚರಿಸಿದ್ದಾರೆ.

ಶಾಸಕರ ವಿರುದ್ಧ ಸಿಂಧನೂರಿನಲ್ಲಿ ಪ್ರತಿಭಟನೆ

ಇನ್ನೊಂದು ಕಡೆ ಜನಾಭಿಪ್ರಾಯ ಸಂಗ್ರಹಿಸಿದ್ದೇನೆ ಎಂದು ಸುಳ್ಳು ಹೇಳಿರುವ ಶಾಸಕ ಕ್ಷೇತ್ರಕ್ಕೆ ಬಂದು ಎಲ್ಲಿ, ಯಾರಿಂದ ಜನಾಭಿಪ್ರಾಯ ಸಂಗ್ರಹಿಸಿದ್ದೀರಿ ಎಂಬ ಮಾಹಿತಿ ನೀಡಬೇಕು. ಜನ ಮಸ್ಕಿಯಲ್ಲಿ ಬರದಿಂದ, ಕುಡಿಯುವ ನೀರಿಲ್ಲದೇ ಸಾಯುತ್ತಿದ್ದರೆ ಈ ಶಾಸಕರಿಗೆ ಹಣದ ಮದವೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಯುವಜನರು ಆರ್.ವೈ.ಎಫ್ ಮತ್ತು ಕೆ.ಆರ್.ಎಸ್ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಸಿಂಧನೂರಿನಲ್ಲಿ ಪ್ರತಾಪ್ ಗೌಡರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸತತ 3 ಬಾರಿ ಶಾಸಕರಾಗಿ 11 ವರ್ಷ ಆಳ್ವಿಕೆ ನಡೆಸಿದ್ದರೂ ಮಸ್ಕಿ ಕ್ಷೇತ್ರ ತೀರಾ ಹಿಂದುಳಿದಿದೆ, 50 ಕೋಟಿಯ ಕುಡಿಯುವ ನೀರಿನ ಯೋಜನೆಗಳು ಹಳ್ಳ ಹಿಡಿದಿವೆ, ಇದಕ್ಕೆಲ್ಲಾ ಶಾಸಕರೇ ಕಾರಣ ಎಂದು ಆರ್‍ವೈಎಫ್‍ನ ನಾಗರಾಜ್ ಪೂಜಾರ್ ಆರೋಪಿಸಿದ್ದಾರೆ.

ಮಂಗಳವಾರ ಪ್ರತಾಪ್ ಗೌಡ ಪಾಟೀಲರು ಮಾಧ್ಯಮದ ಎದುರು “ನಾನು ರಾಜೀನಾಮೆ ಕೊಡಬೇಕೆಂದು ಜನರೇ ಅಭಿಪ್ರಾಯ ನೀಡಿದ್ದಾರೆ, ನಾನು ಜನರ ತೀರ್ಪಿಗೆ ತಲೆಬಾಗಿದ್ದೇನೆ ಅಷ್ಟೇ, ನನ್ನ ವಿರುದ್ಧ ಮಾತಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಆವೇಶಭರಿತವಾಗಿ ಮಾತನಾಡಿದ್ದರು”. ಅಷ್ಟೇ ಅಲ್ಲದೇ ಮುಂಬೈನಲ್ಲಿ ಕೆಲ ಶಾಸಕರು ಇಲ್ಲ ನಾವು ಕಾನೂನುಕ್ರಮಕ್ಕೆ ಒಳಗಾಗುವುದಕ್ಕಿಂತ ವಾಪಸ್ ಹೋಗಿಬಿಡೋಣ ಎಂದರೆ ಇಲ್ಲ ನಾವು ಇನ್ನು ಸ್ವಲ್ಪ ಕಾದುನೋಡೋಣ ಎಂದು ಪ್ರತಾಪ್ ಗೌಡರೇ ಉಳಿದ ಅತೃಪ್ತರನ್ನು ಸಮಾಧಾನಿಸಿದ್ದಾರಂತೆ.

ನಾಗರಾಜ್ ಪೂಜಾರ್

ಇದರಿಂದ ಸಿಟ್ಟಿಗೆದ್ದಿರುವ ಕ್ಷೇತ್ರದ ಜನತೆ ಒಂದು ತಿಂಗಳಿಂದ ಈ ಶಾಸಕರು ಕ್ಷೇತ್ರದ ಕಡೆ ಮುಖ ಹಾಕಿಲ್ಲ. ತಮ್ಮ ನಾಲ್ಕೈದು ಚೇಲಾಗಳ ಅಭಿಪ್ರಾಯ ಪಡೆದು ಅದನ್ನೇ ಇಡೀ ಕ್ಷೇತ್ರದ ಜನಾಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಾ ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಪ್ರತಾಪ್ ಗೌಡರಿಗೆ ಸರಿಯಾಗಿ ಬುದ್ದಿ ಕಲಿಸುತ್ತೇವೆ, ಈ ಕುರಿತು ಸ್ಪೀಕರ್ ರವರಿಗೂ ದೂರು ಸಲ್ಲಿಸುತ್ತೇವೆ ಎಂದು ನಾಗರಾಜ್ ಪೂಜಾರ್ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...