Homeಮುಖಪುಟರಾಹುಲ್‌ ವಿಚಾರಣೆ ವಿರೋಧಿಸಿ ಪ್ರತಿಭಟನೆ: ಯು.ಟಿ ಖಾದರ್‌ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ರಾಹುಲ್‌ ವಿಚಾರಣೆ ವಿರೋಧಿಸಿ ಪ್ರತಿಭಟನೆ: ಯು.ಟಿ ಖಾದರ್‌ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆಂದು ಆರೋಪಿಸಲಾದ ಪ್ರಕರಣದಲ್ಲಿ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ್ದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಸಂಬಂಧ ವಿಧಾನಸಭಾ ಸ್ಪೀಕರ್‌ ಯು.ಟಿ ಖಾದರ್‌ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ದಾಖಲಿಸಿದ್ದ ಖಾಸಗಿ ದೂರು ಮತ್ತು ಆ ಕುರಿತ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಯು.ಟಿ ಖಾದರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಇದೇ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರ ವಿರುದ್ಧ ಶಿವಾಜಿ ನಗರ ಠಾಣಾ ಪೊಲೀಸರು ದಾಖಲಿಸಿದ್ದ ದೂರು ರದ್ದುಪಡಿಸಿ ಈ ಹಿಂದೆ, 2023ರ ಜುಲೈ 7ರಂದು ಹೈಕೋರ್ಟ್‌ ಆದೇಶಿಸಿತ್ತು. ಆ ಆದೇಶವನ್ನು ಆಧರಿಸಿ ಯು.ಟಿ ಖಾದರ್‌ ವಿರುದ್ಧದ ಪ್ರಕರಣವನ್ನೂ ರದ್ದುಪಡಿಸಿದೆ.

ಜಾರಿ ನಿರ್ದೇಶನಾಲಯ ವಿಚಾರಣೆ ನೆಪದಲ್ಲಿ ರಾಹುಲ್ ಗಾಂಧಿಯವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ 2022ರ ಜೂನ್‌ 16ರಂದು ಕಾಂಗ್ರೆಸ್‌ನಿಂದ ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಯು.ಟಿ ಖಾದರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು. ಈ ಸಂಬಂಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಖಾಸಗಿ ದೂರು ದಾಖಲಿಸಿದ್ದರು.

ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆ ನಡೆಸುವುದನ್ನು ಕಡ್ಡಾಯಗೊಳಿಸಿ ನಗರ ಪೊಲೀಸ್‌ ಆಯುಕ್ತರು ಈ ಹಿಂದೆ ಆದೇಶ ಹೊರಡಿಸಿದ್ದರು. ಅದನ್ನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಪ್ರತಿಭಟನೆ ನಡೆಸಿದ್ದಾರೆ. ಈ ಮೂಲಕ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ. ಅಲ್ಲದೆ, ಪ್ರತಿಭಟನೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ ಎಂದು ಆರೋಪಿಸಲಾಗಿತ್ತು.

ಈ ಸಂಬಂಧ 2022ರ ಜೂನ್‌ 16ರಂದು ತನ್ನ ವಿರುದ್ದ ದಾಖಲಾದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಯು.ಟಿ ಖಾದರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಚಿವ ಪೊನ್ಮುಡಿ ದಂಪತಿಗೆ 3 ವರ್ಷ ಜೈಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...