Homeಕರ್ನಾಟಕಯಡಿಯೂರಪ್ಪ ಸರ್ಕಾರ ವಜಾಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಯಡಿಯೂರಪ್ಪ ಸರ್ಕಾರ ವಜಾಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

- Advertisement -
- Advertisement -

ಕೇಂದ್ರ ಗೃಹ ಸಚಿವರ ಆಣತಿಯಂತೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಲು ಕಾರಣವಾಗಿರುವ ಹಿನ್ನೆಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವನ್ನು ರಾಷ್ಟ್ರಪತಿಗಳು ಕೂಡಲೇ ವಜಾಗೊಳಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದೆ. ಮೈತ್ರಿ ಸರ್ಕಾರ ಬೀಳಲು ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಬಿಡುಗಡೆಯಾಗಿರುವ ಆಡಿಯೋ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಆಡಿಯೋದಲ್ಲಿರುವ ಧ್ವನಿ ನನ್ನದೇ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ  ಒಪ್ಪಿಕೊಂಡಿದ್ದಾರೆ. ಆದ್ದರಿಂದ ಯಡಿಯೂರಪ್ಪ ಸರ್ಕಾರ ವಜಾಗೊಳಿಸಬೇಕೆಂದು ಧರಣಿನಿರತರು ಆಗ್ರಹಿಸಿದರು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಲು ಕೇಂದ್ರ ಸರ್ಕಾರದ ನೇರ ಕೈವಾಡವಿದೆ. ಕೇಂಧ್ರ ಸರ್ಕಾರ ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದೆ. ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಬಹುಮತ ಇರುವ ಸರ್ಕಾರಗಳನ್ನು ಉರುಳಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇವರಿಗೆ ಸಂವಿಧಾನದ ಆಶಯಗಳೇ ಗೊತ್ತಿಲ್ಲ ಎಂದು ದೂರಿದರು.

ಯಡಿಯೂರಪ್ಪ ಸರ್ಕಾರ ಮತ್ತು ಕೇಂದ್ರ ಸರ್ಕಾರ ಅನೈತಿಕತೆಯಿಂದ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಪುಸಲಾಯಿಸಿ ರಾಜಿನಾಮೆ ನೀಡುವಂತೆ ಮಾಡಿದರು. ಅವರು ಮುಂಬೈನಲ್ಲಿ ಹೋಟೆಲ್‌ನಲ್ಲಿಟ್ಟು ಹಣ ವೆಚ್ಚ ಮಾಡಿದರು. ತಾನು ಭಿನ್ನ ಎಂದು ಹೇಳಿಕೊಳ್ಳುವ ಬಿಜೆಪಿಯ ಬಣ್ಣ ಇದರಿಂದ ಬಯಲಾಗಿದೆ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಮಾಜಿ ಅಧ್ಯಕ್ಷ ಷಫಿ ಅಹಮದ್, ಮಾಜಿ ಶಾಸಕರಾದ ಆರ್. ನಾರಾಯಣ್ ರಫೀಕ್ ಅಹಮದ್, ತುಮಕೂರು ಮಹಾನಗರ ಪಾಲಿಕೆ ಉಪಮೇಯರ್, ಪಾಲಿಕೆ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

0
ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು...