Homeಮುಖಪುಟವಿಪಕ್ಷಗಳ 143 ಸಂಸದರ ಅಮಾನತು ಖಂಡಿಸಿ ‘ಇಂಡಿಯಾ’ ಒಕ್ಕೂಟದಿಂದ ನಾಳೆ ಧರಣಿ

ವಿಪಕ್ಷಗಳ 143 ಸಂಸದರ ಅಮಾನತು ಖಂಡಿಸಿ ‘ಇಂಡಿಯಾ’ ಒಕ್ಕೂಟದಿಂದ ನಾಳೆ ಧರಣಿ

- Advertisement -
- Advertisement -

ಸಂಸತ್ತಿನ ಚಳಿಗಾಲದ ಅಧಿವೇಶನದಿಂದ ವಿಪಕ್ಷಗಳ 143 ಸಂಸದರ ಅಮಾನತು ಹಾಗೂ ಲೋಕಸಭೆ ಭದ್ರತಾ ಲೋಪದ ಕುರಿತು ಹೇಳಿಕೆ ನೀಡಲು ಗೃಹ ಸಚಿವ ಅಮಿತ್ ಶಾ ಅವರ ನಿರಾಕರಣೆ ವಿರೋಧಿಸಿ ‘ಐಎನ್‌ಡಿಐಎ’ ಕೂಟದ ಪ್ರತಿಪಕ್ಷಗಳ ಸಂಸದರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧರಣಿ ನಡೆಸುವುದಾಗಿ ಬುಧವಾರ ಘೋಷಿಸಿದೆ.

ನಾಳೆ (ಡಿ.22) ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಪಕ್ಷಗಳ ಸಂಸದರು ಧರಣಿ ನಡೆಸಲಿದ್ದಾರೆ. ಬುಧವಾರ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ‘ಇಂಡಿಯಾ’ ಬಣದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜಂತರ್ ಮಂತರ್‌ನಲ್ಲಿ ಸಂಸದರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದು, ಅದೇ ಸಂದರ್ಭದಲ್ಲಿ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಲು ಇಂಡಿಯಾ ಒಕ್ಕೂಟದ ನಾಯಕರು ನಿರ್ಧರಿಸಿದ್ದಾರೆ. ಇದೇ ವರ್ಷದ ಮೇ ನಂತರ ಪ್ರತಿ ಪಕ್ಷಗಳು ಒಂದುಗೂಡಲು ನಿರ್ಧರಿಸಿದ ನಂತರ ಇದು ಮೊದಲ ಜಂಟಿ ಪ್ರತಿಭಟನಾ ಕಾರ್ಯಕ್ರಮವಾಗಿದೆ.

ಲೋಕಸಭೆ ಭದ್ರತಾ ಉಲ್ಲಂಘನೆಯ ಕುರಿತು ಶಾ ಅವರು ಹೇಳಿಕೆ ನೀಡುವುದಕ್ಕೆ ನಿರಾಕರಿಸಿದ್ದರಿಂದ ಉಭಯ ಸದನಗಳಲ್ಲಿ ಇಂಡಿಯಾ ಒಕ್ಕೂಟದ ಸಂಸದರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರದ ನಡೆ ಖಂಡಿಸಿ ಬುಧವಾರ ರಾಜ್ಯಸಭಾ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ಮಾಡಿ ಸದನಕ್ಕೆ ಮರಳಲಿಲ್ಲ.

ಅಮಿತ್ ಶಾ ಉತ್ತರ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಗುರುವಾರವೂ ಸದನದಲ್ಲಿ ತಮ್ಮ ಬೇಡಿಕೆ ಮುಂದುವರಿಸುವ ಸಾಧ್ಯತೆಯಿದೆ. ಮುಂಗಾರು ಅಧಿವೇಶನದಿಂದ ಅಮಾನತುಗೊಂಡಿರುವ ಎಎಪಿಯ ಸಂಜಯ್ ಸಿಂಗ್ ಸೇರಿದಂತೆ 237 ಐಎನ್‌ಡಿಐಎ ಸಂಸದರಲ್ಲಿ ಒಟ್ಟು 144 ಮಂದಿಯನ್ನು ಸದನದಿಂದ ಅಮಾನತುಗೊಳಿಸಲಾಗಿದೆ.

ಇಂಡಿಯಾ ಬ್ಲಾಕ್‌ನ ನಾಯಕರ ಸಭೆಯಲ್ಲಿ, ಡಿಎಂಕೆ ಸಂಸದ ಟಿ ಎಸ್ ಇಲಾಂಗೋ, ಐಪಿಸಿ ನಿಯಮ ಬದಲಿಸುವ ಮೂರು ಮಸೂದೆಗಳ ಬಗ್ಗೆ ನಾಯಕರಿಗೆ ವಿವರಿಸಿದರು. ಲೋಕಸಭೆಯು ಬುಧವಾರ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಎವಿಡೆನ್ಸ್ ಆಕ್ಟ್ ವಿಧೇಯಕಗಳನ್ನು ಅಂಗೀಕರಿಸುವುದರೊಂದಿಗೆ ಪ್ರತಿಪಕ್ಷಗಳು ಗುರುವಾರ ರಾಜ್ಯಸಭೆಗೆ ಬರುತ್ತವೆ ಎಂದು ಸರ್ಕಾರ ನಿರೀಕ್ಷಿಸುತ್ತಿದೆ. ಆದರೆ, ಅವರು ಅದರಲ್ಲಿ ಭಾಗವಹಿಸದೇ ಇರಬಹುದು.

ಇದನ್ನೂ ಓದಿ; ಹೊಸ ಕ್ರಿಮಿನಲ್ ಕಾನೂನುಗಳಡಿ ಗುಂಪು ಹತ್ಯೆಯ ಅಪರಾಧಕ್ಕೆ ಮರಣದಂಡನೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...