Homeಕರ್ನಾಟಕಬಿಲ್ಕೀಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ವಿರೋಧಿಸಿ ಬೆಂಗಳೂರಿನಲ್ಲಿ ಶನಿವಾರ ಪ್ರತಿಭಟನೆ

ಬಿಲ್ಕೀಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ವಿರೋಧಿಸಿ ಬೆಂಗಳೂರಿನಲ್ಲಿ ಶನಿವಾರ ಪ್ರತಿಭಟನೆ

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿರುವುದನ್ನು ವಿರೋಧಿಸಿ ‘ಬಿಲ್ಕಿಸ್‌ಗೆ ನ್ಯಾಯ ದೊರಕಿಸಿಕೊಡುವಂತೆ ಕರ್ನಾಟಕ ಆಗ್ರಹಿಸುತ್ತದೆ’ ಎಂಬ ಘೋಷವಾಕ್ಯದೊಂದಿಗೆ ಆಗಸ್ಟ್‌ 27 ರ ಶನಿವಾರದಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರಭಟನೆಯು ಶನಿವಾರ ಬೆಳಿಗ್ಗೆ 10:30 ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿದೆ.

ಬಿಲ್ಕಿಸ್ ಬಾನೋ ಅವರನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಮತ್ತು ಅವರ ಕುಟುಂಬಿಕರ ಹತ್ಯೆ ನಡೆಸಿದ್ದ ಅಪರಾಧಿಗಳನ್ನು ಗುಜರಾತ್ ಸರ್ಕಾರವು ಸನ್ನಡತೆಯ ಆಧಾರದಲ್ಲಿ ಕ್ಷಮಾದಾನ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸರ್ಕಾರದ ಈ ನಡೆಯನ್ನು ಸ್ವತಃ ಪಕ್ಷದಿಂದಲೇ ಆಕ್ಷೇಪ ವ್ಯಕ್ತವಾಗಿದ್ದು, ದೇಶದಾದ್ಯಂತ ಹಲವಾರು ಮಹಿಳಾ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಹಾಗೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋಳ ಮುಗಿಯದ ವನವಾಸ ಮತ್ತು ಸಂಸ್ಕಾರವಂತ ಅತ್ಯಾಚಾರಿಗಳು

ಬಿಲ್ಕಿಸ್ ಬಾನೋ ಅವರ 20 ವರ್ಷದ ಹೋರಾಟಕ್ಕೆ ಬೆಂಬಲ ನೀಡಿರುವ ಹೋರಾಟ ಸಮಿತಿ, “ಅವರ ಜೊತೆ ಕೊನೆಯವರೆಗೂ ಇರುತ್ತೇವೆ. 11 ಜನ ಸಾಮೂಹಿಕ ಕೊಲೆಗಾರರು ಮತ್ತು ಅತ್ಯಾಚಾರಿಗಳನ್ನು ಮತ್ತೆ ಜೈಲಿಗೆ ಹಾಕುವಂತೆ ಒತ್ತಾಯಿಸುತ್ತೇವೆ” ಎಂದು ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...