Homeಕರ್ನಾಟಕಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

ಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ನೆಪವೊಡ್ಡಿ ಕೇಸು ಹಾಕಲಾಗಿದೆ ಅಷ್ಟೇ. ಆದರೆ ಬಂಧನದ ಹಿಂದೆ ಇರುವುದು ಬ್ಯಾನರ್ ವಿಚಾರ ಅಲ್ಲ. ಬದಲಿಗೆ ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ನಡೆಸುತ್ತಿರುವ ದಿಟ್ಟ ಹೋರಾಟವೇ ಕಾರಣ. ಕನ್ನಡ ಹೋರಾಟಗಾರರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಕುತಂತ್ರವಿದೆ ಎಂದು ನಮ್ಮ ಧ್ವನಿ ಬಳಗದ ಮಹೇಂದ್ರ ಕುಮಾರ್ ಆರೋಪಿಸಿದ್ದಾರೆ.

ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿ ಧರ್ಮದ ವಿಚಾರ ಮುನ್ನಲೆಗೆ ತರುವುದು ಸರಿಯಲ್ಲ. ಕರ್ನಾಟಕದಲ್ಲಿ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿರುವವರು ಕನ್ನಡ ಕಲಿತು ವ್ಯವಹರಿಸಬೇಕು ಮತ್ತು ಕನ್ನಡಿಗರಿಗೆ ಸ್ಥಳೀಯ ಉದ್ಯೋಗ ಸಿಗಬೇಕು ಇವೇ ನಮ್ಮ ಪ್ರಮುಖ ಹಕ್ಕೊತ್ತಾಯಗಳಾಗಿವೆ ಎಂದರು.

ಕೇವಲ ಒಂದು ಬ್ಯಾನರ್ ಹರಿದ ವಿಚಾರವಾಗಿದ್ದರೆ ಬಿ.ಹರೀಶ್ ಕುಮಾರ್ ರವರ ಮನೆ ಮುಂದೆ 2 ಪೊಲೀಸ್ ಬಸ್ ಗಳನ್ನು ತಂದು ನಿಲ್ಲಿಸುವ ಅಗತ್ಯವಿರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅಮಿತ್ ಶಾರವರ ಆದೇಶದ ಮೇರೆಗೆ ಈ ಬಂಧನ ನಡೆಸಿರುವುದು ಅಕ್ಷಮ್ಯ ಎಂದು ತಿಳಿಸಿದರು.

ಕನ್ನಡ ಚಳವಳಿಯ ಅಧ್ಯಕ್ಷ ನಾಗೇಶ್ ಮಾತನಾಡಿ “ನಾವು ಜಾತಿ ಧರ್ಮದ ಭೇದ ಮಾಡುವುದಿಲ್ಲ. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ. ಕನ್ನಡ ಉಳಿಸಿ ಬೆಳೆಸಲು ಕನ್ನಡ ಸಂಘಟನೆಗಳು ಮಾತ್ರವಲ್ಲದೇ ನಾಡಿನ ಎಲ್ಲಾ ಜನರು ಸ್ಪಂದಿಸುತ್ತಿರುವುದು ಸಂತೋಷಕರ ವಿಷಯವಾಗಿದೆ. ನಾವು ಜೈಲುಗಳಿಗೆ ಹೆದರುವ ಪ್ರಮೇಯವೇ ಇಲ್ಲ ಬದಲಿಗೆ ಕನ್ನಡ ಚಳವಳಿ ಇನ್ನೂ ಜೋರಾಗಲಿದೆ ಎಂದರು.

ಪತ್ರಕರ್ತ ಲಕ್ಷ್ಮಣ್ ಹೂಗಾರ್ ಮಾತನಾಡಿ ಕನ್ನಡಪರ ಸಂಘಟನೆಗಳು ತಮ್ಮ ಮನೆಗಳಿಗಾಗಿ ಹೋರಾಟ ಮಾಡಿದವರಲ್ಲ. ಅವರು ಕನ್ನಡಕ್ಕಾಗಿ ಹೋರಾಟ ನಡೆಸಿದವರು. ಅಂತಹವರನ್ನು ಜೈಲಿಗೆ ಹಾಕಿರುವುದು ದುರಂತ. ಪ್ರತಿಯೊಬ್ಬ ಕನ್ನಡಿಗನೂ ಇದನ್ನು ಖಂಡಿಸಬೇಕು ಎಂದರು.

ಕರ್ನಾಟಕದಲ್ಲಿ ಕನ್ನಡಿಗರು ಮಲತಾಯಿ ಮಕ್ಕಳಾಗುವ ಪರಿಸ್ಥಿತಿ ಉಂಟಾಗಿದೆ. ಕನ್ನಡಿಗರು ನಾವು ಭಾಷಾಂಧರಲ್ಲ. ನಾವು ಎಲ್ಲಾ ಜನರನ್ನು ಸಹೋದರರ ರೀತಿ ಪ್ರೀತಿಸುತ್ತಿದ್ದೇವೆ. ಆದರೆ ಅವರು ಇಲ್ಲಿಯ ನೆಲ, ಜಲ, ಸಂಪನ್ಮೂಲಗಳನ್ನು ಬಳಸಿದ ಮೇಲೆ ಹಲವು ವರ್ಷಗಳಲ್ಲಿ ಕನ್ನಡ ಕಲಿಯಿರಿ ಎಂದು ಹೇಳುವುದು ತಪ್ಪೇ? ನಿಮ್ಮ ಮನೆಯಲ್ಲಿ ಖಾಸಗಿಯಾಗಿ ಯಾವ ಭಾಷೆ ಬೇಕಾದರೂ ಮಾತಾಡಿ ಆದರೆ ಸಾರ್ವಜನಿಕ ಸ್ಥಳದಲ್ಲಿ ಕನ್ನಡ ಬಳಸಿ ಎಂಬುದಷ್ಟೇ ನಮ್ಮ ಹಕ್ಕೊತ್ತಾಯ ಎಂದರು.

ನಾವು ಯಾವುದೇ ಧರ್ಮದ ವಿರುದ್ಧ ಹೋರಾಡುವುದಿಲ್ಲ. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ ಸಿಗಬೇಕು, ರೈತರಿಗೆ ಒಳ್ಳೆಯ ನೀರಾವರಿ ಯೋಜನೆ ಮತ್ತು ಬೆಲೆ ಸಿಗಬೇಕು ಎಂದು ಕೇಳುವುದು ತಪ್ಪೇ? ಇಲ್ಲ ನಾವು ಹೋರಾಟವನ್ನು ಮುಂದುವರೆಸೋಣ ಎಂದು ಒತ್ತಾಯಿಸಿದರು.

ಡಿ.ವೈ.ಎಫ್.ಐ ಮುಖಂಡ ಮುನೀರ್ ಕಾಟಿಪಳ್ಳ, ಬಸವರಾಜ್ ಪೂಜಾರ್, ಕರ್ನಾಟಕ ರಣಧೀರ ಪಡೆಯ ರಮಾನಂದ್ ಅಂಕೋಲಾ, ಸುವರ್ಣ ಕರ್ನಾಟಕ ಜನಪರ ವೇದಿಕೆಯ ರಮೇಶ್ ಗೌಡ, ಎಸ್.ಎಫ್.ಐ ನ ಗುರುರಾಜ ದೇಸಾಯಿ, ಕನ್ನಡ ಮನಸ್ಸುಗಳ ಪ್ರತಿಷ್ಥಾನ, ನಿಕೇತ್ ರಾಜ್ ಮೌರ್ಯ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...