Homeಚಳವಳಿಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸರಣಿ ರೂಪದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಬರ್ಬರ ಅತ್ಯಾಚಾರ, ಕೊಲೆ ಮತ್ತು ಅದಕ್ಕೆ ಪ್ರತಿಯಾಗಿ ನಡೆಯುತ್ತಿರುವ ‘ಮರಣದಂಡನೆ’ಯ ಪ್ರಯೋಗಗಳನ್ನು, ಮಹಿಳಾ ಮತ್ತು ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ನಾವೆಲ್ಲರೂ ಖಂಡಿಸುತ್ತಿದ್ದೇವೆ ಎಂದು ಹಲವು ಮಹಿಳಾ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಜೆ 4.30ರಿಂದ 7.00ರವರೆಗೆ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈದರಾಬಾದಿನ ಪಶುವೈದ್ಯೆ ಮೇಲೆ ನಡೆದ ಭೀಭತ್ಸವಾದ ಅತ್ಯಾಚಾರ ಮತ್ತು ಕೊಲೆ, ಇದೇ ವಾರದಲ್ಲಿ ನಡೆದ, ಛತ್ತೀಸಗಢದ ಅತ್ಯಾಚಾರದ ಘಟನೆ, ಮಹಾರಾಷ್ಟ್ರದ ಅತ್ಯಾಚಾರ ಮತ್ತು ಕೊಲೆ, ಕರ್ನಾಟಕದ ಚಾಮರಾಜನಗರ ಮತ್ತು ಕಲಬುರ್ಗಿಗಳಲ್ಲಿ ನಡೆದ ಬಾಲಕಿಯರ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಗಳು, ನಿಜಕ್ಕೂ ಭಾರತದಲ್ಲಿ ಹೆಣ್ಣುಜೀವ ಅಪಾಯದಲ್ಲಿದೆ ಎಂಬುದರ ಸ್ಪಷ್ಟವಾದ ಸೂಚನೆ ನೀಡಿವೆ. ಇವೆಲ್ಲವನ್ನೂ ಮೀರಿ, ಉತ್ತರಪ್ರದೇಶದ ಉನ್ನಾಂವ್‌ನ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಕೋರ್ಟಿಗೆ ಬರುವ ಹಾದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಅದೇ ಆರೋಪಿಗಳಿಂದ ಬೆಂಕಿಯಿಟ್ಟಿದ್ದಾರೆ. ಹಾಗಾಗಿ ಅತ್ಯಾಚಾರಗಳ ವಿರುದ್ಧ ದಿಟ್ಟ ದನಿಯೆತ್ತಬೇಕಾದ ಅಗತ್ಯವಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರಗಳು ಕೇವಲ ಲೈಂಗಿಕ ವಾಂಛೆಯಿಂದ ನಡೆಯುವುದಿಲ್ಲ. ಹಿಂಸೆಯನ್ನು ಸಣ್ಣ ವಯಸ್ಸಿನಿಂದ ನೋಡಿ ಬೆಳೆದ ಅಥವಾ ಅನುಭವಿಸಿದ ಮಕ್ಕಳು ದೊಡ್ಡವರಾದಾಗ ಹಿಂಸೆಯ ಪ್ರವರ್ತಕರಾಗುವುದು ಶೇ. 70ರಷ್ಟು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಂಡಿರುವ ಸಂಗತಿ. ಮಹಿಳೆಯನ್ನು ದಮನಿಸಬಹುದು, ಅವಮಾನಿಸಬಹುದು, ಹಿಂಸಿಸಬಹುದು ಮತ್ತು ಕೊಲ್ಲಬಹುದು ಎಂಬ ಪರವಾನಿಗೆಯನ್ನು ಗಂಡಸರಿಗೆ ಧಾರಾಳವಾಗಿ ನೀಡುವ ಸಾಂಸ್ಕೃತಿಕ ಮೌಲ್ಯ ಇರುವ ತನಕ ಹಿಂಸೆಗಳು ನಡೆಯುತ್ತವೆ. ಇದನ್ನು ಬದಲಾಯಿಸಲು, ಹಿರಿಯರು ನಡೆಸುವ ಹಿಂಸೆಗಳನ್ನು ನಿಲ್ಲಿಸುವ ಮತ್ತು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಸಮಾನತೆಯ ಪಾಠವನ್ನು ಆಳವಾಗಿ ಕಲಿಸಬೇಕಾದ ಅಗತ್ಯವಿದೆ ಎಂದು ಮಹಿಳಾ ಮುನ್ನಡೆಯ ಮಲ್ಲಿಗೆಯವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ತಾರತಮ್ಯಗಳನ್ನು ನಿರಾಕರಿಸುವ, ಸಮಾನತೆಯ ಮನಸ್ಥಿತಿಯನ್ನು ಬೆಳೆಸುವಂತಹ ಪಠ್ಯಕ್ರಮವನ್ನು ಸರ್ಕಾರಗಳು ಶಾಲಾ ಶಿಕ್ಷಣದಲ್ಲಿಯೇ ಒಳಗೊಳ್ಳಬೇಕು.

ನಮ್ಮ ಸಮಾಜದಲ್ಲಿ ಪ್ರಚಲಿತವಾಗಿರುವ ‘ಪುರುಷ ಮೇಲಾಧಿಪತ್ಯ’ದ ಪರಿಕಲ್ಪನೆಯ ಪ್ರಕಾರ, ಹೆಣ್ಣನ್ನು ಬಲವಂತದಿಂದ ಮಣಿಸುವುದು ಗಂಡಿನ ಗೌರವವನ್ನು ಹೆಚ್ಚುಮಾಡುತ್ತದೆ; ಮಹಿಳೆಯನ್ನು ಅತ್ಯಾಚಾರ ಮಾಡುವ ಮೂಲಕ ಗಂಡಸು ತನ್ನ ‘ಪೌರುಷ’ವನ್ನು ಸಾಬೀತು ಮಾಡಬಹುದು! ಈ ಪೊಳ್ಳು ‘ಪೌರುಷ’ದ ಕಲ್ಪನೆಯು ತಪ್ಪೆಂಬುದನ್ನೂ, ಪರಸ್ಪರರನ್ನು ಗೌರವಿಸುವ ಮೂಲಕ ಮಾತ್ರವೇ ಗಂಡು-ಹೆಣ್ಣುಗಳಿಬ್ಬರೂ ಆರೋಗ್ಯಕರ ಜೀವನ ನಡೆಸಬಲ್ಲರೆಂಬುದನ್ನೂ ಸಮಾಜದಲ್ಲಿ ಸ್ಥಾಪಿಸಬೇಕು.

ಅತ್ಯಾಚಾರದ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ ನಿಭಾಯಿಸುವುದನ್ನು ಬಿಟ್ಟು ಅಸಂಬದ್ಧವಾದ, ಉನ್ಮಾದವನ್ನು ತುಂಬುದ, ಯಾವುದೋ ಒಂದು ಸಮುದಾಯವನ್ನು ಗುರಿಮಾಡುವಂತಹ ಹೇಳಿಕೆಗಳನ್ನು ನೀಡುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮೇಲೆ ಕ್ರಿಮಿನಲ್ ಕ್ರಮ ಜರುಗಿಸಬೇಕು.

ಹೆಣ್ಣುಮಕ್ಕಳ ಉಡುಪು, ಅವರ ಸ್ವತಂತ್ರವಾದ ಆಯ್ಕೆಗಳು ಮತ್ತು ಚಲನ-ವಲನಗಳಿಂದ ಅತ್ಯಾಚಾರಗಳಾಗುತ್ತವೆಂಬಂತಹ ತಪ್ಪುತಪ್ಪಾದ ಕಟ್ಟು ಕಥೆಗಳನ್ನು ಹರಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೀಗೆ, ಮಹಿಳೆಯರನ್ನೇ ಅತ್ಯಾಚಾರಗಳಿಗೆ ಹೊಣೆ ಮಾಡುವ ವಾದಗಳನ್ನು ಮುಂದಿಡುತ್ತಾ ಬಂದಿದ್ದರಿಂದಲೇ ಅತ್ಯಾಚಾರಿಗಳಿಗೆ ತಮ್ಮ ಕೃತ್ಯದ ಬಗ್ಗೆ ಪಶ್ಚಾತ್ತಾಪದ ಬದಲು ಹೆಮ್ಮೆ ಮೂಡುವಂತಾಗಿದೆ. ಹೀಗೆ ಪರೋಕ್ಷವಾಗಿ ಅತ್ಯಾಚಾರಗಳನ್ನು ಬೆಂಬಲಿಸುವುದನ್ನೂ ಕೂಡಾ ನಿಯಂತ್ರಿಸಬೇಕು.

ವಿಕೃತ ಲೈಂಗಿಕತೆಯನ್ನು ಬಿಂಬಿಸುತ್ತಾ ಹದಿವಯಸ್ಸಿನ ಗೊಂದಲದಲ್ಲಿರುವ ಮಕ್ಕಳನ್ನು ತಪ್ಪುದಾರಿಗೆಳೆಯುವ ಜಾಲತಾಣಗಳನ್ನೂ, ಸಿನೆಮಾಗಳನ್ನೂ, ಜಾಹೀರಾತುಗಳನ್ನೂ ನಿರ್ಬಂಧಿಸಬೇಕು.

ಅತ್ಯಾಚಾರ ಮತ್ತು ಲೈಂಗಿಕ ಹಿಂಸಾಚಾರದ ಪ್ರಕರಣಗಳ ತನಿಖೆ, ಸಾಕ್ಷಿ ಸಂಗ್ರಹ ಮತ್ತು ವಿಚಾರಣೆಯ ಪ್ರತಿ ಹಂತವನ್ನೂ ಅತ್ಯಂತ ಗಂಭೀರತೆಯಿಂದ, ಸಂತ್ರಸ್ತ ಮಹಿಳೆಯ ಪರವಾದ ಸಹಾನುಭೂತಿಯಿಂದ ನಡೆಸಿದರೆ, ಆರೋಪಿಗಳು ಬಿಡುಗಡೆಯಾಗಿ ಮತ್ತೆ ಹೋಗಿ ಸಂತ್ರಸ್ತೆಯನ್ನು ಕೊಲ್ಲುವ ಪ್ರಯತ್ನ ಮಾಡಲು ಸಾಧ್ಯವಾಗುವುದಿಲ್ಲ. ನ್ಯಾಯದಾನ ಪ್ರಕ್ರಿಯೆಯನ್ನು ಬಿಗಿಗೊಳಿಸುವುದರಿಂದ ಅತ್ಯಾಚಾರದ ಮನಸ್ಥಿತಿ ಇರುವವರಲ್ಲಿ ಭಯ ಹುಟ್ಟಿಸಬಹುದೇ ಹೊರತು, ಕೆಲವರನ್ನು ಕೊಲ್ಲುವುದರಿಂದಲ್ಲ. ಅತ್ಯಾಚಾರಕ್ಕೆ ಮರಣದಂಡನೆ ಪರಿಹಾರವಲ್ಲ!

ಸಂತ್ರಸ್ತರಿಗೆ ಎಲ್ಲ ಬಗೆಯ ನೆರವನ್ನೂ ಒಂದೇ ಛಾವಣಿಯಡಿ ಒದಗಿಸುವ ‘ಏಕಗವಾಕ್ಷಿ’ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲೂ ಆರಂಭಿಸಬೇಕು.

ಲೈಂಗಿಕ ಹಿಂಸೆ ವಿರೋಧಿ ಜನಚಳವಳಿ, ಮಹಿಳಾ ಮುನ್ನಡೆ, ಗಮನ ಮಹಿಳಾ ಸಮೂಹ, ಅಲ್ ಇಂಡಿಯಾ ಪ್ರೊಗ್ರೆಸ್ಸಿವ್‌ ವುಮೆನ್ಸ್‌ ಅಸೋಸಿಯೇಶನ್, ಕರುಣ ಜೀವ ಕಲ್ಯಾಣ ಟ್ರಸ್ಟ್‌, ಜಿಐಎಚ್‌ ಮಲ್ಯಾಳಿ ವುಮೆನ್ಸ್ ವಿಂಗ್, ಕರ್ನಾಟಕ ಗಾರ್ಮೆಂಟ್ಸ್ ಅಲೈಡ್ ವರ್ಕರ್ ಯೂನಿಯನ್ ರಾಮನಗರ, ಇನ್ಸ್ಟಿಟೂಟ್‌ ಫಾರ್ ಅಲ್ಟರ್‌ನೇಟಿವ್ ರೀಸರ್ಚ್‌ ಅಂಡ್ ಡೆವೆಲಪ್‌ಮೆಂಟ್‌, ಗ್ರಾಮ ಸೇವಾ ಸಂಘಟನೆ, ಹ್ಯುಮನ್‌ ರೈಟ್ಸ್ ಎಂಪವರ್‌ಮೆಂಟ್ ಕೌನ್ಸಿಲ್ ಆಫ್‌ ಇಂಡಿಯಾ ಮುಂತಾದ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...