Homeಕರ್ನಾಟಕಮೈಸೂರು | ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

ಮೈಸೂರು | ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಕರ್ನಾಟಕ ರಾಜ್ಯ ಲೋಡಿಂಗ್ & ಅನ್‌ಲೋಡಿಂಗ್ ಕಾರ್ಮಿಕ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಹಮಾಲಿ ಕಾರ್ಮಿಕರು, ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

ಪಡಿತರ ಯೋಜನೆಗೆ ಅನ್ನಭಾಗ್ಯ ಎಂದು ಹೆಸರಿಟ್ಟು ಇಂದಿಗೆ 12 ವರ್ಷದ ಪೂರ್ಣಗೊಂಡಿದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ. ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆಯಡಿ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ & ಅನ್‌ಲೋಡಿಂಗ್ ಕೆಲಸ ಮಾಡುವವರಿಗೆ ಕಾರ್ಮಿಕ ಕಾನೂನುಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಆದರೆ, ಸಾಗಾಣಿಕೆ ಗುತ್ತಿಗೆದಾರರಿಂದ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು- ಸಾಗಾಣಿಕೆ ಗುತ್ತಿಗೆದಾರರ ಜೊತೆ , ಇಎಸ್‌ಐ ಮತ್ತು ಪಿಎಫ್‌ ಕುರಿತು ಸಭೆ ನಡೆಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು.

ಅಪರ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಬಂದು ಕಾರ್ಮಿಕರ ಮನವಿ ಸ್ವೀಕರಿಸಿದರು. ಆದಷ್ಟು ಬೇಗ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದರು.

ಕಾರ್ಮಿಕ ಕಾನೂನು ಕನಿಷ್ಠ ವೇತನ ಕಾಯ್ದೆ ಪ್ರಕಾರ ಪ್ರತಿವರ್ಷ ಬೆಲೆ ಏರಿಕೆ, ತುಟ್ಟುಭತ್ಯೆಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿ ಮಾಡಿ ಏಪ್ರಿಲ್ 1ರಿಂದ ಜಾರಿ ಮಾಡುವುದು ಕಾನೂನು. ಆದರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಯಾವುದೇ ಮಾನದಂಡವಿಲ್ಲದೆ ತನ್ನಿಚ್ಚೆ ಬಂದಾಗ ಕೂಲಿ ಹೆಚ್ಚಳ ಮಾಡುತ್ತಿದ್ದು, ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಕೂಲಿ ಹೆಚ್ಚಳಕ್ಕೆ ಹಾಗೂ ಕಾರ್ಮಿಕ ಕಾನೂನುಗಳ ಜಾರಿಗೆ ಒಂದು ಸಮಪರ್ಕಕ ನಿಯಮ ಬೇಕಾಗಿದೆ. ಅದನ್ನು ಜಾರಿ ಮಾಡಬೇಕು ಎಂದು ಕಾರ್ಮಿಕರು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಹೇಳಿದ್ದಾರೆ.

ಉದಾಹರಣೆಗೆ ಗೋದಾಮುಗಳಿಂದ ಪಡಿತರ ನ್ಯಾಯಬೆಲೆ ಅಂಗಡಿಗೆ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ & ಅನ್‌ಲೋಡಿಂಗ್ ಕೆಲಸ ಚಿಲ್ಲರೆ ಸಾಗಾಣಿಕೆ ಕೂಲಿದರ ಹೆಚ್ಚಳ 2018 ನವೆಂಬರ್‌ನಲ್ಲಿ ಕ್ವಿಂಟಾಲ್‌ಗೆ 16 ರೂ. 2023ರ ಜೂನ್‌ನಲ್ಲಿ ಕ್ವಿಂಟಾಲ್‌ಗೆ 19 ರೂ. 2025ರ ಫೆಬ್ರವರಿಯಲ್ಲಿ ಟೆಂಡರ್ ಆಗಿರುವ ತಾಲೂಕುಗಳಿಗೆ ಮಾತ್ರ 23.62 ರೂ. ನಿಗದಿ ಮಾಡಲಾಗಿದೆ. 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ತಾಂತ್ರಿಕ ಕಾರಣಗಳಿಂದ ಟೆಂಡರ್ ಆಗದೆ ಉಳಿದಿದ್ದು, ಅಲ್ಲಿ ಹಳೆಯ ದರವೇ 19 ರೂ. ಇದೆ. ಕಾರ್ಮಿಕರಿಗೆ ಕ್ವಿಂಟ್ವಾಲ್‌ಗೆ 4.62 ರೂ. ಹಾಗೆಯೇ ಸಗಟು ಸಾಗಾಣಿಕೆ ಟೆಂಡರ್‌ ಆಗದೇ ಉಳಿದಿರುವ ತಾಲೂಕುಗಳಲ್ಲಿ 10ರೂ. ಇದೆ. ಟೆಂಡರ್ ಆಗಿರುವ ತಾಲೂಕುಗಳಿಗೆ 10.92 ರೂ. ಇದೆ. ಇದರಿಂದ ಪ್ರತಿ ಕ್ವಿಂಟ್ವಾಲ್‌ಗೆ ಕಾರ್ಮಿಕರಿಗೆ 5.54 ರೂ. ನಷ್ಟ ಉಂಟಾಗುತ್ತಿದೆ. ಕಾರ್ಮಿಕರು ಪ್ರತಿತಿಂಗಳು ಲಕ್ಷಾಂತರ ರೂ. ನಷ್ಟವಾಗುತ್ತಿದೆ ಎಂದಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ, ಕೆ.ಆರ್‌ ನಗರ ಕೆಎಫ್‌ಸಿಎಸ್‌ಸಿ, ಸರಗೂರು, ಹೆಚ್‌.ಡಿ ಕೋಟೆ, ಹುಣಸೂರು, ನಂಜನಗೂಡು ತಾಲೂಕುಗಳಿಗೆ ಟೆಂಡರ್ ಆಗದೇ ಉಳಿದಿದ್ದು, ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್‌ಗೆ 23.62 ರೂ. ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂ. ನಿಗದಿ ಮಾಡಿ ಆದೇಶ ಮಾಡಬೇಕು. ತಿಂಗಳಿಗೆ ಲಕ್ಷಾಂತರ ರೂ. ಕಾರ್ಮಿಕರಿಗೆ ನಷ್ಟ ಉಂಟಾಗುತ್ತಿದ್ದು, ಫೆಬ್ರವರಿ 2025ರಿಂದಲೇ ಜಾರಿಗೆ ಬರುವಂತೆ ಈ ಕೂಡಲೇ ಕೂಲಿ ಹೆಚ್ಚಳ ಮಾಡಿ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಂಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ &ಅನ್‌ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡರ್ ನಿಯಮಾವಳಿಯಲ್ಲಿ ಇಎಸ್‌ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಆದರೆ, ಇದು ಮೈಸೂರು ಜಿಲ್ಲೆಯಲ್ಲಿ ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ ಎಂದು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಆಗಸ್ಟ್ 30ರಂದು ನಡೆದ ದ್ವಿಪಕ್ಷೀಯ ಕರಾರಿನಲ್ಲಿ ಮೂರು ತಿಂಗಳು ಕಾಲವಕಾಶ ಕೋರಿ, ನಂತರ ಅದರ ಉಲ್ಲಂಘನೆ ಮಾಡಿ 2023ರ ಜುಲೈನಿಂದ ಚಿಲ್ಲರೆ ಸಾಗಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90ರೂ. ಕಡಿಮೆ ಪಾವತಿ ಮಾಡಿಲಾಗಿದೆ. ಇದರ ಬಗ್ಗೆ 2024ರ ಸೆಪ್ಟಂಬರ್ 20ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹಾಗಾಗಿ, ಮೈಸೂರು ಜಿಲ್ಲೆಯ ಕೆಲವು ತಾಲೂಕುಗಳಿಗೆ ಸಾಗಾಣಿಕೆ ಗುತ್ತಿಗೆದಾರರು ಬದಲಾಗಿದ್ದಾರೆ. ಈ ಗುತ್ತಿಗೆದಾರರ ಇಎಂಡಿ ಹಣ ಮತ್ತು ಸಾಗಾಣಿಕೆ ಬಿಲ್ ಹಣ ಪಾವತಿ ಮಾಡದೆ ಕಡ್ಡಾಯವಾಗಿ ತಡೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ತಮ್ಮ ಸಮಸ್ಯೆ ಇತ್ಯರ್ಥಪಡಿಸದಿದ್ದರೆ ಆಗಸ್ಟ್ 15ರಂದು ಕರಾಳ ಸ್ವಾತಂತ್ರ್ಯ ದಿನ ಆಚರಿಸುವುದಾಗಿ ಕಾರ್ಮಿಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯ ಕ್ಷ ಕರಿನಾಯಕ, ಕಾರ್ಯದರ್ಶಿ ಮಹದೇವ ಹಾಗೂ ಮಂಡ್ಯ ಜಿಲ್ಲಾ ಮುಖಂಡರಾದ ಕೃಷ್ಣಪ್ಪ, ಪುಟ್ಟಸ್ವಾಮಿ ಸೇರಿದತೆ ಪ್ರಮುಖರು ಇದ್ದರು.

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...