Homeಮುಖಪುಟಪ್ರತಿಭಟನೆಯನ್ನು ಇಚ್ಛೆಗೆ ತಕ್ಕಂತೆ ನಡೆಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ಪ್ರತಿಭಟನೆಯನ್ನು ಇಚ್ಛೆಗೆ ತಕ್ಕಂತೆ ನಡೆಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

“ಪ್ರತಿಭಟನೆಯ ಹಕ್ಕು ಕೆಲವು ಕರ್ತವ್ಯಗಳನ್ನು ಒಳಗೊಂಡಿರುತ್ತದೆ. ಹಾಗಾಗಿ ಪ್ರತಿಭಟನೆಯನ್ನು ಎಲ್ಲಿಬೇಕಾದರೂ-ಯಾವಾಗಬೇಕಾದರೂ ನಡೆಸಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಶಾಹೀನ್‌ಬಾಗ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಗಳು ಕಾನೂನುಬಾಹಿರ ಎಂದು ಸುಪ್ರೀಂಕೋರ್ಟ್‌ ಕಳೆದ ವರ್ಷ ಹೇಳಿತ್ತು. ಈ ತೀರ್ಪನ್ನು ಪ್ರಶ್ನಿಸಿ 12 ಕಾರ್ಯಕರ್ತರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

2019 ರಲ್ಲಿ ದೆಹಲಿಯ ಶಾಹೀನ್‌ಬಾಗ್‌ನಲ್ಲಿ ನಡೆದ ಪೌರತ್ವ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಪ್ರತಿಭಟನೆ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದನ್ನು ಮನಸೋ ಇಚ್ಛೆ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

“ಪ್ರತಿಭಟನೆಯನ್ನು ಎಲ್ಲಿಬೇಕಾದರೂ-ಯಾವಾಗಬೇಕಾದರೂ ನಡೆಸಲು ಸಾಧ್ಯವಿಲ್ಲ. ಅದು ಕೆಲವು ಸ್ವಯಂಪ್ರೇರಿತ ಪ್ರತಿಭಟನೆಗಳೂ ಕೂಡ ಆಗಿರಬಹುದು. ಆದರೆ ದೀರ್ಘಕಾಲದ ಪ್ರತಿಭಟನೆಯ ಸಂದರ್ಭದಲ್ಲಿ, ಇತರರ ಹಕ್ಕುಗಳ ಮೇಲೆ ಪರಿಣಾಮ ಬೀರುವ ಸಾರ್ವಜನಿಕ ಸ್ಥಳವನ್ನು ನಿರಂತರವಾಗಿ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಅನಿರುದ್ ಬೋಸ್ ಮತ್ತು ಕೃಷ್ಣ ಮುರಾರಿ ಇದ್ದ ಮೂವರ ನ್ಯಾಯಾಧೀಶರ ಪೀಠವು ಹೇಳಿದೆ.

“ಪ್ರತಿಭಟನೆಗಾಗಿ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಳ್ಳುವಂತಿಲ್ಲ ಮತ್ತು ಸಾರ್ವಜನಿಕ ಪ್ರತಿಭಟನೆಗಳು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ನಡೆಯಬೇಕು” ಎಂದು ನ್ಯಾಯಪೀಠವು ಪುನರುಚ್ಚರಿಸಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

“ಭಿನ್ನಾಭಿಪ್ರಾಯ ಮತ್ತು ಪ್ರಜಾಪ್ರಭುತ್ವವು ಯಾವಾಗಲೂ ಒಟ್ಟಿಗೆ ಇರುತ್ತದೆ” ಎಂದು ಸುಪ್ರೀಂ ಕೋರ್ಟ್ ಅಕ್ಟೋಬರ್ 2020 ರಲ್ಲಿ ಹೇಳಿತ್ತು. ಇದನ್ನು ಉಲ್ಲೇಖಿಸಿದ ನ್ಯಾಯಪೀಠವು, “ಈ ರೀತಿಯ ಪ್ರತಿಭಟನೆಗಳು ಸ್ವೀಕಾರಾರ್ಹವಲ್ಲ” ಎಂದು ಒತ್ತಿ ಹೇಳಿದೆ.

ದೆಹಲಿಯ ಶಾಹೀನ್‌ಬಾಗ್‌ 2019 ರಲ್ಲಿ ಸಿಎಎ ವಿರೋಧಿ ಪ್ರತಿಭಟನೆಯ ಕೇಂದ್ರಬಿಂದುವಾಗಿತ್ತು. ಸುಮಾರು 3 ತಿಂಗಳ ಕಾಲ ಮಹಿಳೆಯರು-ಮಕ್ಕಳು ಸೇರಿದಂತೆ ಸಾವಿರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿ: 10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...