Homeದಲಿತ್ ಫೈಲ್ಸ್‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಇತ್ತೀಚೆಗೆ ಅದೇ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು.

- Advertisement -
- Advertisement -

ಉತ್ತರಾಖಂಡದ ದಲಿತ ವಿದ್ಯಾರ್ಥಿಗಳ ಗುಂಪೊಂದು ಮೇಲ್ಜಾತಿ ಹಿಂದೂ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ತಿನ್ನಲು ನಿರಾಕರಿಸಿದ್ದಾರೆ. ಈ ಹಿಂದೆ ಅದೇ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು. ಉತ್ತರಾಖಂಡ್‌ ರಾಜ್ಯದ ಚಂಪಾವತ್ ಜಿಲ್ಲೆಯ ಸುಖಿಧಾಂಗ್‌ನ ಸರ್ಕಾರಿ ಇಂಟರ್ ಕಾಲೇಜ್‌ನಲ್ಲಿ ಈ ಘಟನೆ ನಡೆದಿದೆ.

ಕಳೆದ ವಾರ, ದಲಿತ ಸಮುದಾಯಕ್ಕೆ ಸೇರಿದ ಸುನೀತಾ ದೇವಿ ಅವರು ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು. ಆದರೆ ಗಾಯಕ್ಕೆ ಉಪ್ಪು ಸವರಿದ್ದ ರಾಜ್ಯ ಸರ್ಕಾರ ಸುನೀತಾ ದೇವಿ ಅವರನ್ನು ಕೆಲಸದಿಂದ ವಜಾಗೊಳಿಸಿತ್ತು.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ಆದರೆ, ದಲಿತ ಸಮುದಾಯಕ್ಕೆ ಸೇರಿದ 23 ವಿದ್ಯಾರ್ಥಿಗಳು ಸುನಿತಾ ದೇವಿಯ ಬದಲಿಯಾಗಿ ನೇಮಕಗೊಂಡ ಮೇಲ್ಜಾತಿ ಹಿಂದೂ ಮಹಿಳೆ ವಿಮಿಲೇಶ್ ಉಪ್ರೇತಿ ಅವರು ತಯಾರಿಸಿದ ಊಟವನ್ನು ತಿನ್ನಲು ನಿರಾಕರಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಶುಕ್ರವಾರದಂದು ಮಧ್ಯಾಹ್ನದ ಊಟವನ್ನು ಬಡಿಸುತ್ತಿರುವಾಗ, 23 ದಲಿತ ವಿದ್ಯಾರ್ಥಿಗಳು ಆಹಾರವನ್ನು ತಿನ್ನಲು ನಿರಾಕರಿಸಿದ್ದಾರೆ. “ದಲಿತ ಮಹಿಳೆ ತಯಾರಿಸಿದ ಆಹಾರವನ್ನು ಮೇಲ್ವರ್ಗದ ವಿದ್ಯಾರ್ಥಿಗಳು ಬಹಿಷ್ಕರಿಸಿದರೆ, ಮೇಲ್ಜಾತಿಯ ಮಹಿಳೆ ತಯಾರಿಸಿದ ಊಟವನ್ನು ನಾವು ಬಹಿಷ್ಕರಿಸುವುದಾಗಿ ಅವರು ಹೇಳಿದರು” ಎಂದು ಇಂಟರ್ ಕಾಲೇಜಿನ ಪ್ರಾಂಶುಪಾಲ ಪ್ರೇಮ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ, ಉತ್ತರಾಖಂಡ ಚುನಾವಣೆಗೆ 150 ಕ್ಕೂ ಹೆಚ್ಚು ಹಿರಿಯ ಬಿಜೆಪಿ ನಾಯಕರ ನಿಯೋಜನೆ

ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿರುವುದರ ಬಗ್ಗೆ ಉತ್ತರಾಖಂಡ ಸರ್ಕಾರದ ವಿರುದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ನಂತರ ಇದು ದೇಶದಾದ್ಯಂತ ಸುದ್ದಿಯಾಗಿತ್ತು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಚಂದ್ರಶೇಖರ್‌‌, “ಉತ್ತರಾಖಂಡ್‌ನ ಚಂಪಾವತ್ ಜಿಲ್ಲೆಯಲ್ಲಿ ಎಸ್‌ಸಿ ಸಮುದಾಯದ ಅಡುಗೆಯ ಮಹಿಳೆಯನ್ನು ವಜಾ ಮಾಡುವ ಮೂಲಕ ಸರ್ಕಾರ ದಲಿತ ಸಮುದಾಯದ ಸ್ವಾಭಿಮಾನಕ್ಕೆ ಅವಮಾನ ಮಾಡಿದೆ. ನಮ್ಮ ಪಕ್ಷ ಮತ್ತು ಭೀಮ್ ಆರ್ಮಿ ತಮ್ಮ ತಾಯಂದಿರ ಮತ್ತು ಸಹೋದರಿಯರ ಸ್ವಾಭಿಮಾನದೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಆಕೆಯನ್ನು ಮತ್ತೇ ಹುದ್ದೆಗೆ ಸೇರಿಸಿಕೊಳ್ಳದಿದ್ದರೆ ಮುಖ್ಯಮಂತ್ರಿ ಪುಷ್ಕರ್ ಧಾಮಿ ವಿರುದ್ದ ಘೋರ ಹೋರಾಟ ಮಾಡುತ್ತೇವೆ. ಸ್ನೇಹಿತರೇ, ಪ್ರತಿಭಟನೆಗೆ ತಯಾರಿ ಆರಂಭಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ:ಕೆಲವೇ ತಿಂಗಳಲ್ಲಿ ಉತ್ತರಾಖಂಡ ಚುನಾವಣೆ: ಶಂಕರಾಚಾರ್ಯ ಪ್ರತಿಮೆ ಉದ್ಘಾಟಿಸಿ ರಾಮಮಂದಿರದ ಬಗ್ಗೆ ಉಲ್ಲೇಖಿಸಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲಾಯಕ್ ಮುಖ್ಯಮ್ಂತ್ರಿ ಅವನು. ಮಕ್ಕಳು ಮೇಲ್ಜಾತಿಯವರಿಗೆ ಸರಿಯಾಗಿ ಬುದ್ದಿ ಕಲಿಸ್ತಿದ್ದಾರೆ. ಜೈ ಭೀಮ್‌ಆರ್ಮಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...