ಕೊಪ್ಪ| ಬಾಲಕಿ ಅನುಮಾನಾಸ್ಪದ ಸಾವು: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

ಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬಾಲಕಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಕುರಿತು ಸೂಕ್ತ ತನಿಖೆ ನಡೆಸಬೇಕು ಮತ್ತು ಶಾಲಾ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಇಂದು (ಜು.7) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳ ನೇತೃತ್ವ ಮತ್ತು ಇತರ ಪ್ರಗತಿಪರ ಸಂಘಟನೆಗಳ ಬೆಂಬಲದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೊಪ್ಪ ಟೌನ್‌ಹಾಲ್‌ನಿಂದ ಬಸ್‌ ನಿಲ್ದಾಣದವರೆಗೆ ಪ್ರತಿಭಟನಾ ರ್‍ಯಾಲಿ ನಡೆಯಲಿದೆ. ಪ್ರತಿಭಟನೆಯಲ್ಲಿ ಹೋರಾಟಗಾರ, ಎದ್ದೇಳು ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ … Continue reading ಕೊಪ್ಪ| ಬಾಲಕಿ ಅನುಮಾನಾಸ್ಪದ ಸಾವು: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ