Homeಕರ್ನಾಟಕನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ...

ನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ…

- Advertisement -
- Advertisement -

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರೆದಿದೆ. ಧರಣಿನಿರತರದ್ದು ಒಂದೇ ಪಟ್ಟು ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ. ನಮಗೆ ಭೂಮಿ ಇಲ್ಲ ಮನೆ ಇಲ್ಲ ಎಂದು ಪಟ್ಟುಹಿಡಿದ್ದಾರೆ.

ಇದರ ನಡುವೆಯೇ ನವೆಂಬರ್ 29ರಂದು ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಧರಣಿ ಕೈಬಿಡುವಂತೆ ಜಿಲ್ಲಾಧಿಕಾರಿ ಮಾಡಿದ ಮನವಿ ತಿರಸ್ಕರಿಸಿದರು. ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬಂದು ಲಿಖಿತ ಪತ್ರದ ಮೂಲಕ ಭರವಸೆ ನೀಡಿದರೆ ಮಾತ್ರ ಧರಣಿ ವಾಪಸ್ ಪಡೆಯುತ್ತೇವೆ ಎಂದು ಖಚಿತವಾಗಿ ಹೇಳಿದರು.

ಜಿಲ್ಲೆಯಲ್ಲಿ ಬಡವರು ಸಾಗುವಳಿ ಮಾಡುತ್ತಿರುವ ಭೂಮಿಯ ಕುರಿತು ಸಾಕಷ್ಟು ಗೊಂದಲಗಳು ಇವೆ. ಎರಡು ಎಕರೆಯಲ್ಲಿ ಉಳಿಮೆ ಮಾಡುತ್ತಿದ್ದರೆ, ಪಹಣಿಯಲ್ಲಿ ಮೂರು ಎಕರೆ ಎಂದು ನಮೂದಾಗಿದೆ. ಇದು ನಿಮ್ಮ ತಪ್ಪಲ್ಲ. ಕಂದಾಯ ಅಧಿಕಾರಿಗಳು ಮಾಡಿರುವ ತಪ್ಪು. ಇದನ್ನು ಸರಿಪಡಿಸಲು ಕಾಲಾವಕಾಶ ಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ; ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

ನೀವು ಮನವಿಗಳನ್ನು ಕೊಟ್ಟಿದ್ದೀರಿ. ಅವುಗಳನ್ನು ಪರಿಶೀಲಿಸಲು ಸಮಯಾವಕಾಶ ಬೇಕು. ಹಂತಹಂತವಾಗಿ ಪರಿಶೀಲಿಸುತ್ತೇವೆ. ನೀವು ಕೊಟ್ಟಿರುವ ಅರ್ಜಿಗಳನ್ನು ಪರಿಶೀಲಿಸಲು ವಿಭಾಗಾಧಿಕಾರಿಗಳು ಪ್ರತಿ ತಿಂಗಳ ನಮ್ಮ ಇಬ್ಬರು ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸುವಂತೆ ನಿರ್ದೇಶನ ನೀಡುತ್ತೇವೆ. ನಮಗೂ ಸಾಕಷ್ಟು ಕೆಲಸಗಳಿವೆ. ಪ್ರಧಾನ ಕಾರ್ಯದರ್ಶಿಗಳು ಬ್ಯುಸಿಯಾಗಿದ್ದಾರೆ. ಭೇಟಿ ಮಾಡಲು ಸಿಗುತ್ತಿಲ್ಲ. ಅವರೊಂದಿಗೆ ಮಾತುಕತೆ ನಡೆಸಬೇಕು. ಕಾಲವಕಾಶ ಕೊಡಿ, ಧರಣಿ ಸತ್ಯಾಗ್ರಹ ಕೈಬಿಡಿ ಎಂದು ಮನವಿ ಮಾಡಿದರು.

ಇದೇ ವೇಳೆ ಮಧ್ಯಪ್ರವೇಶಿಸಿ ಹೋರಾಟಗಾರ ನಾಗಭೂಷಣ್, ಮೂರು ವರ್ಷಗಳಿಂದಲು ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಹಲವು ಮನವಿಗಳನ್ನು ನೀಡಿದ್ದೇವೆ. ಕೇವಲ ಭರವಸೆ ಮಾತ್ರ ಸಿಕ್ಕಿದೆ. ಏನೂ ಕೆಲಸ ಆಗಿಲ್ಲ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಮೇಲೆ ನಮಗೆ ನಂಬಿಕೆ ಹೊರಟು ಹೋಗಿದ. ಹಾಗಾಗಿ ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬರಬೇಕು. ಲಿಖಿತ ಭರವಸೆ ನೀಡಬೇಕು. ಅಲ್ಲಿವರೆಗೂ ಶಾಂತಿಯುತವಾಗಿ ಧರಣಿ ನಡೆಸುತ್ತೇವೆ. ಆದರೆ ಜಿಲ್ಲಾಡಳಿತ ಧರಣಿಯನ್ನು ಹತ್ತಿಕ್ಕುವ ಕಲೆಸ ಮಾಡಬಾರದು ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ. ಈ ಸಮಿತಿ ರಚನೆಯಾಗದೆ ಭೂಮಿ ಕೊಡಲು ಬರುವುದಿಲ್ಲ. 1990ರಿಂದ ಸಲ್ಲಿಸಿರುವ ಅರ್ಜಿಗಳು ಬಾಕಿ ಇವೆ. ಹೀಗಾಗಿ ವಿಳಂಬವಾಗುತ್ತಿದೆ. ಬ್ಯಾಲ್ಯದಲ್ಲಿ ಇರುವ ಗುಂಡುತೋಪಿನಲ್ಲಿ ನಿವೇಶನ ನೀಡಲು ತೊಂದರೆಯಿದೆ. ಕೆಲವರಿಗೆ ನಿವೇಶನಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2500 ಎಕರೆ ಸರ್ಕಾರಿ ಭೂಮಿಯನ್ನುಗುರುತಿಸಲಾಗಿದೆ. ಫಾರಂ ನಂಬರ್ 50 ಮತ್ತು 53ರ ಅಡಿ ಅರ್ಜಿ ಸಲ್ಲಿಸಿರುವ ಜನರಿಗೆ ಭೂಮಿ ನೀಡಲು ಸಿದ್ದತೆಯಾಗಿದೆ. ಆದರೆ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ ಕುಂಟೆ, ಖರಾಬ್ ಭೂಮಿಯಲ್ಲಿ ನಿವೇಶನ ಮತ್ತು ಭೂಮಿ ಹಂಚಿಕೆ ಮಾಡಲು ಕೆಲವೊಂದು ಸಮಸ್ಯೆಗಳಿವೆ. ಮಧುಗಿರಿ ಶಾಸಕರ ಕೋರಿಕೆಯ ಮೇರೆಗೆ ಬ್ಯಾಲ್ಯದಲ್ಲಿ ಕಾಲೇಜು ನಿರ್ಮಾಣಕ್ಕೆ ಜಾಗ ನೀಡಲಾಗಿದೆ. ಇನ್ನು ಉಳಿದಂತೆ ಭೂಮಿ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ವಿವರಿಸಿದರು.

ಆದರೆ ಧರಣಿನಿರತರು ಪಟ್ಟು ಸಡಿಲಿಸಿಲ್ಲ. ಧರಣಿ ಮುಂದುವರಿಸಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣದ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...