ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಜನಸುರಾಜ್ ಪಕ್ಷದ ನೇತೃತ್ವದಲ್ಲಿ ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಿತು. ನೌಕರರು, ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನಲ್ಲಿ ನೆಲೆಸಿರುವ ಬಿಹಾರ ಮೂಲದ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬಿಹಾರದಲ್ಲಿ ಈಗ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆಯಿಂದ ತಾತ್ಕಾಲಿಕವಾಗಿ ರಾಜ್ಯದಿಂದ ಹೊರಗಿರುವ ಮತದಾರರ ವಿವರವು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇದರಿಂದ ಅನೇಕರು ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. ಹಾಗಾಗಿ, ಇದು ನಡೆಯಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. “ಬಿಹಾರದಿಂದ … Continue reading ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ