Homeಕರ್ನಾಟಕದೆಹಲಿ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ; ಲೈವ್ ನೋಡಿ

ದೆಹಲಿ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ; ಲೈವ್ ನೋಡಿ

- Advertisement -
- Advertisement -

ದೆಹಲಿಯ ಹಳೆಯ ನಂಗಲ್ ಸ್ಮಶಾನದಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಮತ್ತು ಪೋಷಕರ ಒಪ್ಪಿಗೆಯಿಲ್ಲದೆ ಅಂತ್ಯಸಂಸ್ಕಾರ ಮಾಡಿದ ಪ್ರಕರಣ ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಶನಿವಾರ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿತು.

ನೀರಿಗಾಗಿ ಮನೆಯ ಮುಂದಿದ್ದ ಚಿತಾಗಾರಕ್ಕೆ ತೆರಳಿದ್ದ ದೆಹಲಿಯ ನಂಗಲ್ ಎಂಬ ಹಳ್ಳಿಯ 9 ವರ್ಷದ ದಲಿತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲ್ಲಲಾಗಿತ್ತು.

ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ 

ದೆಹಲಿಯ ಅತ್ಯಾಚಾರ, ಕೊಲೆ ಖಂಡಿಸಿ, ಸಂಘಟನೆಯ 50 ಜನ ಸದಸ್ಯರು ಸಾಂಕೇತಿಕವಾಗಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯಿರುವ ಮಹಾತ್ಮ ಗಾಂಧಿಯವರ ಪ್ರತಿಮೆ ಬಳಿ ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಾಂತಿಯುತ ಪ್ರತಿಭಟನಾ ಸಭೆ ನಡೆಸಲಾಗುತ್ತದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಒಕ್ಕೂಟ ಗುರುವಾರದಂದು ಪತ್ರಿಕಾ ಹೇಳಿಕೆ ನೀಡಿತ್ತು.

ಪ್ರತಿಭಟನೆ ನಿಗದಿಯಾದಂತೆ ಮೌರ್ಯ ಸರ್ಕಲ್‌ನಲ್ಲಿ ನಡೆದಿದ್ದು ಅದರ ರೆಕಾರ್ಡೆಡ್‌ ಲೈವ್ ಅನ್ನು ಇಲ್ಲಿ ನೋಡಬಹುದಾಗಿದೆ. ಇದನ್ನೂ ಓದಿ: ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ಇದನ್ನೂ ಓದಿ: ಆತ ಮಸಣದ ಅರ್ಚಕ! ಅತ್ಯಾಚಾರ ಮಾಡಿ ಹೆಣ ಸುಟ್ಟುಹಾಕಿದ- ಬಿ. ಪೀರ್ ಬಾಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...