Homeಮುಖಪುಟಬಿಹಾರ ಎಸ್‌ಐಆರ್, ಮತಗಳ್ಳತನದ ವಿರುದ್ಧ ಸಂಸತ್ ಮುಂದೆ ಪ್ರತಿಭಟನೆ: ವಿಶೇಷ ಟೀ-ಶರ್ಟ್ ಧರಿಸಿ ಗಮನಸೆಳೆದ ಪ್ರತಿಪಕ್ಷ...

ಬಿಹಾರ ಎಸ್‌ಐಆರ್, ಮತಗಳ್ಳತನದ ವಿರುದ್ಧ ಸಂಸತ್ ಮುಂದೆ ಪ್ರತಿಭಟನೆ: ವಿಶೇಷ ಟೀ-ಶರ್ಟ್ ಧರಿಸಿ ಗಮನಸೆಳೆದ ಪ್ರತಿಪಕ್ಷ ಸಂಸದರು

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷ ಸಂಸದರು ಮಂಗಳವಾರವೂ (ಆ.12) ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ವೇಳೆ ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ, ದಾವಣಗೆರೆ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಹಲವರು ‘ಮಿಂಟಾ ದೇವಿ’ ಎಂದು ಬರೆದ ಮಹಿಳೆಯೊಬ್ಬರ ಚಿತ್ರವಿರುವ ಟೀ- ಶರ್ಟ್ ಧರಿಸಿ ಗಮನ ಸೆಳೆದರು. ಟೀ-ಶರ್ಟ್ ಹಿಂಭಾಗದಲ್ಲಿ ‘124 ನಾಟ್‌ ಔಟ್’ ಎಂದು ಬರೆಯಲಾಗಿತ್ತು.

‘ಮಿಂಟಾ ದೇವಿ ಎಂಬ ಹೆಸರು ಬಿಹಾರದ ಮತದಾರರ ಪಟ್ಟಿಯಲ್ಲಿದ್ದು, 124 ವರ್ಷ ವಯಸ್ಸಿನ ಅವರು ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದಾರೆ’ಎಂದು ಉಲ್ಲೇಖಿಸಿರುವುದಾಗಿ ಪ್ರತಿಪಕ್ಷ ನಾಯಕರು ಆರೋಪಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್, ಡಿಎಂಕೆ ಸಂಸದ ಟಿಆರ್ ಬಾಲು, ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ, ಡಿಎಂಕೆ ಮತ್ತು ಎಡ ಪಕ್ಷಗಳ ಇತರ ಸಂಸದರು ಮಂಗಳವಾರ ಸಂಸತ್ತಿನ ಮಕರ ದ್ವಾರದ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾ ನಿರತರು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಬಿಡುವಂತೆ ಆಗ್ರಹಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು, ಘೋಷಣೆಗಳನ್ನು ಕೂಗಿದರು. ಅವರ ಮುಂದೆ ಇದ್ದ ಒಂದು ಬ್ಯಾನರ್‌ನಲ್ಲಿ “ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ” ಮತ್ತು ಇನ್ನೊಂದು ಬ್ಯಾನರ್‌ನಲ್ಲಿ “ಎಸ್‌ಐಆರ್‌-ಸೈಲೆಂಟ್ ಇನ್ವಿಸಿಬಲ್ ರಿಗ್ಗಿಂಗ್” ಎಂದು ಬರೆಯಲಾಗಿತ್ತು.

ಸಂಸತ್ ಮುಂದೆ ಕಳೆದ 15 ದಿನಗಳಿಂದ ಪ್ರತಿಪಕ್ಷ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜೀವ್ ಕುಮಾರ್ ಮತ್ತು ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗವು ಬಿಜೆಪಿಯ ಇಲಾಖೆಯಾಗಿದೆ ಎಂದು ಕಾಂಗ್ರೆಸ್‌ನ ಮಾಣಿಕ್ಕಂ ಟ್ಯಾಗೋರ್ ಆರೋಪಿಸಿದರು.

“ಮಿಂಟಾ ದೇವಿ ಮೊದಲ ಬಾರಿಗೆ ಮತ ಚಲಾಯಿಸಿದವರು ಮತ್ತು ಅವರಿಗೆ 124 ವರ್ಷ ವಯಸ್ಸಾಗಿದೆ. ಮತದಾರರ ಪಟ್ಟಿಯಲ್ಲಿ ಅವರ ಹೆಸರು ಮೊದಲ ಬಾರಿಗೆ ಮತ ಚಲಾಯಿಸಿದವರಂತೆ ಇದೆ. ಇಂತಹ ವಿಷಯಗಳ ಕುರಿತು ನಾವು ಚರ್ಚೆಯನ್ನು ಬಯಸುತ್ತಿದ್ದೇವೆ. ಚುನಾವಣಾ ಆಯೋಗವು ಬಿಜೆಪಿಗೆ ಹೇಗೆ ಒಂದು ಪಕ್ಷವಾಗಿದೆ. ಮತದಾರರ ಪಟ್ಟಿಯು ಅಂತಹ ವಂಚನೆಯಿಂದ ತುಂಬಿದೆ” ಎಂದು ಪ್ರತಿಭಟನೆಯ ವೇಳೆ ಟ್ಯಾಗೋರ್ ಕಿಡಿಕಾರಿದರು.

ಚುನಾವಣಾ ಆಯೋಗ ಮತ್ತು ಸರ್ಕಾರದ ನಡುವಿನ ಒಪ್ಪಂದವನ್ನು ಆರೋಪಿಸಿ ಸಂಸದ “ಸ್ಟಾಪ್ ಎಸ್‌ಐಆರ್” ಮತ್ತು “ವೋಟ್ ಚೋರಿ” ಎಂಬ ಭಿತ್ತಪತ್ರಗಳನ್ನು ಹಿಡಿದಿದ್ದರು.

ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಗುರಿಯೊಂದಿಗೆ ಚುನಾವಣಾ ಆಯೋಗದ ಮತದಾರರ ಪಟ್ಟಿಯ ಪರಿಷ್ಕರಣೆ ಕೈಗೊಂಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಸಂಸತ್ತಿನ ಎರಡೂ ಮನೆಗಳಲ್ಲಿ ವಿರೋಧ ಪಕ್ಷಗಳು ಎಸ್‌ಐಆರ್ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.

ಉಭಯ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.
ಈ ವಿಚಾರವಾಗಿ ಸಂಸತ್ತಿನ ಕಲಾಪದಲ್ಲಿ ಗದ್ದಲ ನಡೆಯುತ್ತಿದೆ.

ಜುಲೈ 21 ರಂದು ಮಳೆಗಾಲದ ಅಧಿವೇಶನ ಪ್ರಾರಂಭವಾದಾಗಿನಿಂದ, ಆಪರೇಷನ್ ಸಿಂಧೂರ್ ಕುರಿತು ಚರ್ಚೆಗಳು ನಡೆದಿರುವುದನ್ನು ಹೊರತುಪಡಿಸಿ, ಸಂಸತ್ತಿನಲ್ಲಿ ಯಾವುದೇ ವ್ಯವಹಾರಗಳು ನಡೆದಿಲ್ಲ. ಎಸ್‌ಐಆರ್ ವಿಚಾರವಾಗಿಯೇ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ನಡೆಯುತ್ತಿದೆ.

ಸೋಮವಾರ ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಅಸ್ಸಾಂ ತೆರವು ಕಾರ್ಯಾಚರಣೆ ವೇಳೆ ಮುಸ್ಲಿಂ ಯುವಕ ಗುಂಡಿನ ದಾಳಿಗೆ ಬಲಿ: ನ್ಯಾಯಾಂಗ ತನಿಖೆಗೆ ಆಗ್ರಹಿಸಿ ತಾಯಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...