Homeಕರ್ನಾಟಕ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

ಕುವೆಂಪು ಅಂದ್ರೆ ಕನ್ನಡ, ಬಸವಣ್ಣ ಅಂದ್ರೆ ಕರ್ನಾಟಕ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಬಿಜೆಪಿ ಬೆಂಬಲಿತ ಟ್ರೋಲರ್‌‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ವಿರೋಧಿಸಿ, ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಸ್ಮಾರಕವಾದ ಕವಿಶೈಲದಲ್ಲಿ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನಾ ರ್‍ಯಾಲಿ ಬುಧವಾರ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಕವಿಶೈಲದಲ್ಲಿ ಕುವೆಂಪು ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಪ್ರಾರಂಭವಾದ ಪಾದಯಾತ್ರೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಆವರಣದಲ್ಲಿ ಸಾರ್ವಜನಿಕ ಸಭೆ ಜರಗಲಿದೆ.

ಪ್ರತಿಭಟನಾ ರ್‍ಯಾಲಿಯನ್ನು ಖ್ಯಾತ ಸಾಹಿತಿ, ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, “ನಾಡಿನ ಆದರ್ಶ ಪುರುಷರಾದ ಬಸವಣ್ಣ ಮತ್ತು ಕುವೆಂಪು ಅವರನ್ನು ಅವಮಾನಿಸುವುದನ್ನು ಕರ್ನಾಟಕದ ಜನರು ಸಹಿಸುವುದಿಲ್ಲ. ಈ ಪ್ರತಿಭಟನೆಯು ಕನ್ನಡ ಭಾಷೆ ಮತ್ತು ಧ್ವಜವನ್ನು ಅವಮಾನಿಸಿದವರಿಗೆ ಬಲವಾದ ಸಂದೇಶವನ್ನು ನೀಡುತ್ತದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೆ ಗೋಕಾಕ್ ಚಳುವಳಿ ನಡೆದಿತ್ತು. ಇದು ಕುಪ್ಪಳ್ಳಿ ಕಹಳೆ. ಕುವೆಂಪು ಅಂದರೆ ಕನ್ನಡ, ಬಸವಣ್ಣ ಅಂದರೆ ಕರ್ನಾಟಕ. ಈಗ ಅವರುಗಳಿಗೇ ಕುತ್ತು ಬಂದಿದೆ ಅಂದಮೇಲೆ ನಾವಿದ್ದು ಮಾಡುವುದೇನು. ಇದು ನಾಡಿನಾದ್ಯಂತ ಮೊಳಗಬೇಕಿದೆ. ನಮ್ಮ ನಾಡು, ನಾಡಗೀತೆ ಎರಡಕ್ಕೂ ಅವಮಾನವಾಗಿದೆ. ಹೀಗಾಗಿ ಇದರ ವಿರುದ್ಧ ನಿರಂತರ ಹೋರಾಟ ನಡೆಯಬೇಕಿದೆ” ಎಂದು ಹಂಸಲೇಖ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ಅಂಕಣಕಾರ ಬಿ.ಚಂದ್ರೇಗೌಡ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಚಕ್ರತೀರ್ಥ ನೇತೃತ್ವದ ಪರಿಷ್ಕರಣಾ ಸಮಿತಿ ಕುವೆಂಪು, ಬಸವಣ್ಣ ಸೇರಿದಂತೆ ನಾಡಿನ ಹಲವು ಮಹನೀಯರಿಗೆ ಅಪಮಾನ ಮಾಡಿದ್ದು, ಹೀಗಾಗಿ ಅವರು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಹಿಂಪಡೆದು ಈ ಹಿಂದಿನ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯಗಳನ್ನೇ ಮುಂದುವರಿಸಬೇಕೆಂದು ರ್‍ಯಾಲಿಯಲ್ಲಿ ಒತ್ತಾಯಿಸಲಾಯಿತು.

ಸಾಹಿತಿಗಳು, ಕನ್ನಡ ಪರ ಸಂಘಟನೆಗಳು, ನಾಗರೀಕರು ಮತ್ತು ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಪಕ್ಷಾತೀತವಾಗಿ ಹೋರಾಟವನ್ನು ರೂಪಿಸಲಾಗಿದ್ದು ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ವಿದ್ಯಾರ್ಥಿ- ಯುವಜನ- ಮಹಿಳಾ ಸಂಘಟನೆಗಳು ಸೇರಿದಂತೆ ಅನೇಕ ಜನಪರ ಸಂಘಟನೆಗಳು ಪಾದಯಾತ್ರೆಯಲ್ಲಿ ಭಾಗವಹಿಸಿವೆ.

ಇದನ್ನೂ ಓದಿ: ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

ಸಮಾರೋಪ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್  ಸೇರಿದಂತೆ ಇನ್ನೂ ಹಲವರು ಭಾಗವಹಿಸುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...