Homeಮುಖಪುಟಧಾರಾವಿ ಪುನರಾಭಿವೃದ್ಧಿ ಯೋಜನೆ ಅದಾನಿ ತೆಕ್ಕೆಗೆ: ಭುಗಿಲೆದ್ದ ಪ್ರತಿಭಟನೆ

ಧಾರಾವಿ ಪುನರಾಭಿವೃದ್ಧಿ ಯೋಜನೆ ಅದಾನಿ ತೆಕ್ಕೆಗೆ: ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಧಾರಾವಿ ಕೊಳೆಗೇರಿ ಪ್ರದೇಶ ಪುನರಾಭಿವೃದ್ಧಿ ಯೋಜನೆಯನ್ನು ಅದಾನಿ ಗ್ರೂಪ್‌ಗೆ ನೀಡಿರುವುದನ್ನು ವಿರೋಧಿಸಿ ಮಹರಾಷ್ಟ್ರದಲ್ಲಿ ಭಾರೀ ಪ್ರತಿಭಟನೆ ಭುಗಿಲೆದ್ದಿದ್ದು,ಸಾವಿರಾರು ಪ್ರತಿಭಟನಾಕಾರರು ಗೌತಮ್ ಅದಾನಿ ಅವರ ಕಚೇರಿಗೆ ಸ್ಲಮ್‌ನಿಂದ ಮೆರವಣಿಗೆ ನಡೆಸಿದ್ದಾರೆ.

ಪ್ರತಿಭಟನಾಕಾರರು ‘ಅದಾನಿಯನ್ನು ತೆಗೆದುಹಾಕಿ, ಧಾರವಿಯನ್ನು ಉಳಿಸಿ’ ಎಂದು ಬರೆದಿರುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ದು,  ಧಾರವಿ ನಿವಾಸಿಗಳಿಗೆ 500 ಚದರ ಅಡಿಯ ಮನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪಾದಯಾತ್ರೆಯ ನೇತೃತ್ವ ವಹಿಸಿದ್ದ ಶಿವಸೇನೆ (ಯುಬಿಟಿ ಬಣ) ಮುಖ್ಯಸ್ಥ ಉದ್ಧವ್ ಠಾಕ್ರೆ ಮಾತನಾಡಿ, ಮಹಾ ವಿಕಾಸ್ ಅಘಾಡಿ ಸರ್ಕಾರವು ಧಾರವಿ ಪುನರಾಭಿವೃದ್ಧಿ ಯೋಜನೆಗೆ (ಡಿಆರ್‌ಪಿ) ಟೆಂಡರ್ ನೀಡಿದೆ ಎಂದು ಭಾರತೀಯ ಜನತಾ ಪಕ್ಷವು ಸುಳ್ಳು ಹೇಳಿಕೆ ನೀಡುತ್ತಿದೆ. ಧಾರಾವಿ ನಿವಾಸಿಗಳು ಮಾತ್ರವಲ್ಲದೆ ಪೊಲೀಸರು, ನೈರ್ಮಲ್ಯ ಕಾರ್ಮಿಕರು ಮತ್ತು ಗಿರಣಿ ಕಾರ್ಮಿಕರಿಗೂ ಧಾರಾವಿಯಲ್ಲಿ ಮನೆ ಸಿಗಬೇಕು. ನಾನು ಅಭಿವೃದ್ಧಿಯ ವಿರೋಧಿಯಲ್ಲ. ಆದರೆ ಇದು ಅತಿ ದೊಡ್ಡ ಹಗರಣವಾಗಿದೆ. ಅದಾನಿ ಕೋಟ್ಯಂತರ ರೂ.ಗಳ ಟಿಡಿಆರ್ ಪಡೆಯುತ್ತಿದ್ದಾರೆ ಎಂದರೆ ಅವರ ಮುಂದಿನ ಪೀಳಿಗೆಗಳು ಸಹ ಕೆಲಸ ಮಾಡದೆ ನೆಮ್ಮದಿಯಿಂದ ಬದುಕಬಹುದು. ಅಷ್ಟರಮಟ್ಟಿಗೆ ಟಿಡಿಆರ್ ಅವರಿಗೆ ಸರ್ಕಾರ ಉಡುಗೊರೆಯಾಗಿ ನೀಡುತ್ತಿದೆ. ಆದರೆ ನಾವು ಅದಕ್ಕೆ ಬಿಡುವುದಿಲ್ಲ ಎಂದು ಠಾಕ್ರೆ ಹೇಳಿದ್ದಾರೆ.

ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿದ್ದಾಗ 2018ರಲ್ಲಿ ಧಾರಾವಿಯನ್ನು ಮರು ಅಭಿವೃದ್ಧಿ ಪಡಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಬಿಜೆಪಿಯ ಫಡ್ನವೀಸ್ ಪ್ರಸ್ತುತ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದಾರೆ. ನನ್ನ ಸರ್ಕಾರವನ್ನು ಪತನಗೊಳಿಸಲು ಯಾರು ಹಣಕಾಸು ಒದಗಿಸಿದ್ದಾರೆಂದು ಈಗ ಯಾರಾದರೂ ಅರ್ಥಮಾಡಿಕೊಳ್ಳಬಹುದು. ನಮ್ಮ ಸರಕಾರವಿದ್ದಾಗ ಬಿಜೆಪಿಗೆ ತನ್ನ ಸ್ನೇಹಿತರಿಗೆ ಸಹಾಯ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ ನನ್ನ ಪಕ್ಷವನ್ನು ಒಡೆಯಲಾಯಿತು ಮತ್ತು ಪಕ್ಷದ ಚಿಹ್ನೆಯನ್ನು ಕಳ್ಳತನ ಮಾಡಲಾಯಿತು ಎಂದು ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರದ ಉದ್ದವ್‌ ಸರಕಾರ ಅದಾನಿ ಗ್ರೂಪ್ ಜೊತೆ ಈ ಕುರಿತು ಒಪ್ಪಂದ ಮಾಡಿಕೊಂಡಿದೆ ಎಂದು ಬಿಜೆಪಿ ಮತ್ತು ಅದಾನಿ ಗ್ರೂಪ್ ಹೇಳಿಕೊಂಡಿವೆ. ಧಾರವಿ ಯೋಜನೆಯನ್ನು ನ್ಯಾಯಯುತ, ಮುಕ್ತ ಹರಾಜು ಪ್ರಕ್ರಿಯೆಯ ಮೂಲಕ ಅದಾನಿ ಗ್ರೂಪ್‌ಗೆ ನೀಡಲಾಗಿದೆ. ಎಂವಿಎ ಸರ್ಕಾರದ ಅವಧಿಯಲ್ಲಿ ಟೆಂಡರ್ ಷರತ್ತುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...