Homeಮುಖಪುಟಆನಂದ್‌ ತೇಲ್ತುಂಬ್ಡೆ ಬಿಡುಗಡೆಗೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ

ಆನಂದ್‌ ತೇಲ್ತುಂಬ್ಡೆ ಬಿಡುಗಡೆಗೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ

ಕೋವಿಡ್-19ರ ಸೋಂಕು ತಗಲುವ ಸಾಧ್ಯತೆಯಿರುವುದರಿಂದ ಜೈಲಲ್ಲಿರುವ ಅಪರಾಧಿಗಳನ್ನೇ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ 69 ವರ್ಷದ ಸೂಕ್ಷ್ಮ ಆರೋಗ್ಯ ಪರಿಸ್ಥಿತಿಯ ತೇಲ್ತುಂಬ್ಡೆಯವರನ್ನು ಜೈಲಿಗೆ ಕಳುಹಿಸಿದ್ದು ಕ್ರೌರ್ಯದ ಪರಮಾವಧಿ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಪ್ರೊ. ಆನಂದ್‌ ತೇಲ್ತುಂಬ್ಡೆ ಮತ್ತು ಇತರ ಮಾನವ ಹಕ್ಕು ಹೋರಾಟಗಾರರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮೈಸೂರಿನ ವಿವಿಧ ಸಂಘಟನೆಗಳ ಕಾರ್ಯಕರ್ತರು ಪುರಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಏಪ್ರಿಲ್‌ 14ರಿಂದ ಬಂಧನದಲ್ಲಿರುವ ಆನಂದ್‌ ತೇಲ್ತುಂಬ್ಡೆ ಮತ್ತು ಇತರ ಹೋರಾಟಗಾರರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಕೋವಿಡ್‌91 ಕಾರಣಕ್ಕಾಗಿ ಪುರಭವನದ ಒಳಗೆ ಹೋಗದೆ ಹೊರಗೆ ಇರುವ ಅಂಬೇಡ್ಕರ್‌ ಪ್ರತಿಮೆಯ ಬಳಿ ಜಮಾಯಿಸಿದ ಹತ್ತಾರು ಕಾರ್ಯಕರ್ತರು ಮುಖಕ್ಕೆ ಮಾಸ್ಕ್‌ ಧರಿಸಿ, ಕೈಯಲ್ಲಿ ತೇಲ್ತುಂಬ್ಡೆಯವರು ಚಿತ್ರಗಳನ್ನು ಹಿಡಿದು ಮೌನ ಪ್ರತಿಭಟನೆ ದಾಖಲಿಸಿದ್ದಾರೆ.

ಕೋವಿಡ್-19ರ ಸೋಂಕು ತಗಲುವ ಸಾಧ್ಯತೆಯಿರುವುದರಿಂದ ಜೈಲಲ್ಲಿರುವ ಅಪರಾಧಿಗಳನ್ನೇ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ 69 ವರ್ಷದ ಸೂಕ್ಷ್ಮ ಆರೋಗ್ಯ ಪರಿಸ್ಥಿತಿಯ ತೇಲ್ತುಂಬ್ಡೆಯವರನ್ನು ಜೈಲಿಗೆ ಕಳುಹಿಸಿದ್ದು ಕ್ರೌರ್ಯದ ಪರಮಾವಧಿ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ.

ಡಾ. ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿ ಒಂದು ತಿಂಗಳಾಗುತ್ತದೆ. ತೇಲ್ತುಂಬ್ಡೆ ಭಾರತದ ಒಬ್ಬ ಪ್ರಮುಖ ವಿದ್ವಾಂಸ, ಲೋಕಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕ. ಅವರೊಂದಿಗೆ ಹಾಗು ಭೀಮಾಕೋರೆಗಾವ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿಂತಕರೊಂದಿಗೆ ನಾವಿದ್ದೀವಿ ಎನ್ನುವುದನ್ನು ವ್ಯಕ್ತಪಡಿಸಲು ಮೇ 16 ರಂದು ನಾವೆಲ್ಲರೂ ನ್ಯಾಯದ ದಿನವನ್ನಾಗಿ ಆಚರಿಸೋಣ ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಪಿಯುಸಿಎಲ್‌ ಸಂಘಟೆನಯ ಪ್ರೊ.ಕುಮಾರಸ್ವಾಮಿ, ಪ.ಮಲ್ಲೇಶ್, ಕಾ. ಜಗನ್ನಾಥ್, ಜಿ.ಪಿ. ಬಸವರಾಜು, ಪ್ರೊ. ಷಬೀರ್ ಮುಸ್ತಫಾ, ಪಂಡಿತಾರಾಧ್ಯ, ಚಂದ್ರಶೇಖರ್ ಮೇಟಿ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೇ 16 ನ್ಯಾಯದ ದಿನ : ಡಾ. ಆನಂದ್ ತೇಲ್ತುಂಬ್ಡೆ ಪರ ದನಿಯೆತ್ತಿದ ಚಿಂತಕರು 

Also Read: Ambedkar Jayanti, Anand Teltumbde arrest and the casteist face of power

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...