Homeಚಳವಳಿಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮುವಿನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ್‌‌’ ಯೋಜನೆ ವಿರೋಧಿಸಿ ಮತ್ತು ಸೇನಾ ನೇಮಕಾತಿ ಮಾಡುವಂತೆ ಆಗ್ರಹಿಸಿ ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮುವಿನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಹಾರದಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದೆ.

ಇದೇ ವೇಳೆ ಬಿಹಾರದ ನಾವಡದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದ್ದು, ಕಚೇರಿಯನ್ನು ಧ್ವಂಸ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಹಾರದಲ್ಲಿ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದ್ದು ರಾಜ್ಯದ ಹಲವು ಜಿಲ್ಲೆಗಳಿಗೆ ಹರಡಿದೆ. ಉದ್ರಿಕ್ತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ರೈಲು, ರಸ್ತೆ ತಡೆಯನ್ನು ನಡೆಸಿದ್ದಾರೆ. ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್‌ ಮಾಡಿದ್ದು, ಆಶ್ರುವಾಯು ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

“ಪಾಪದ ರೈತರು ಇಡೀ ವರ್ಷ ನಿಮ್ಮ ದೌರ್ಜನ್ಯವನ್ನು ಸಹಿಸಿಕೊಂಡರು. ಇವರು ಬಿಸಿ ರಕ್ತದ ಯುವಕರು, ಬಿಜೆಪಿಯವರನ್ನು 6 ತಿಂಗಳಲ್ಲಿ ಬೆತ್ತಲೆ ಮಾಡುತ್ತಾರೆ” ಎಂದು ದೆಹಲಿ ಶಾಸಕ ಗುಲಾಬ್ ಸಿಂಗ್‌‌ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಯುವಕರು ರೈಲ್ವೇ ಹಳಿಯ ಮೇಲೆ ನಿಂತು ಬಸ್ಕಿ ಹೊಡೆಯುತ್ತಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್‌ ಮಾಡಿದ್ದಾರೆ.

ಉತ್ತರ ಭಾರತದ ಭಾಗಲ್ಪುರ್, ಅರ್ವಾಲ್, ಬಕ್ಸರ್, ಗಯಾ, ಮುಂಗೇರ್, ನವಾಡ, ಸಹರ್ಸಾ, ಸಿವಾನ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ಅಗ್ನಿಪಥ್‌‌ ಯೋಜನೆ ವಿರೋಧಿಸಿ ಮತ್ತು ಸೇನಾ ನೇಮಕಾತಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ.

ಉತ್ತರ ಪ್ರದೇಶದ ಆಗ್ರಾದಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟಿಸಿದ ಯುವಕರನ್ನು ಲಾಠಿ ಚಾರ್ಜ್‌ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಅಲ್ಪಾವದಿ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಯುವಕರೊಂದಿಗೆ ಪೊಲೀಸರು ವಾಗ್ವಾದ ನಡೆಸಿದರು.

ಮೋದಿ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್‌ ಯೋಜನೆ ವಿರೋಧಿಸಿ ಬಿಹಾರದಾದ್ಯಂತ ಪ್ರತಿಭಟನೆ ನಡೆಯುತ್ತಿರುವ ವೇಳೆ, ರಾಜ್ಯ ನಾವಡದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಬಿಹಾರದ ಭಬುವಾ ನಗರದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನೆಯ ವೇಳೆ ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ.

ಪ್ರತಿಭಟನೆಯ ವೇಳೆ ಯುವಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.

ಪ್ರತಿಭಟನಾಕಾರರು ಬಿಹಾರದ ಬಕ್ಸರ್‌ನಲ್ಲಿ ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಬಿಜೆಪಿಯ ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಪೊಲೀಸರು ಹರಿಯಾಣದ ರೇವಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸೇನಾ ಉದ್ಯೋಗಾಕಾಂಕ್ಷಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.

ಬಿಹಾರದ ಜೆಹಾನಾಬಾದ್‌ನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ರಾಷ್ಟ್ರೀಯ ಹೆದ್ದಾರಿ-83 ರಲ್ಲಿ ಪ್ರತಿಭಟನೆ ನಡೆಸಿ, ಪಾಟ್ನಾ-ಗಯಾ ಪ್ಯಾಸೆಂಜರ್ ರೈಲನ್ನು ತಡೆದಿದ್ದಾರೆ.

ಬಿಹಾರದ ಛಾಪ್ರಾದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಬಸ್‌ನ ಗಾಜುಗಳನ್ನು ಒಡೆದು, ರಟ್ಟಿನ ಪೆಟ್ಟಿಗೆಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರಪ್ರದೇಶದ ಉನ್ನಾವೋದಲ್ಲಿ ಅಗ್ನಿಪಥ್‌ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ ಯುವಜನರು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ವಿರುದ್ಧ ದಿಕ್ಕಾರ ಕೂಗಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಪೊಲೀಸರು ಅಟ್ಟಾಡಿಸಿ ಲಾಠಿಚಾರ್ಜ್ ಮಾಡಿದ್ದಾರೆ.

ಅಗ್ನಿಪಥ್‌ ಯೋಜನೆಗೆ ಹರಿಯಾಣದಲ್ಲೂ ವಿರೋಧ ವ್ಯಕ್ತವಾಗಿದ್ದು, ಸೇನಾ ಉದ್ಯೋಗಾಂಕ್ಷಿಗಳು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಹಿಂಸೆ ಭುಗಿಲೆದ್ದಿದೆ. ಉದ್ರಿಕ್ತ ಯುವಕರ ಗುಂಪು ಹಲವಾರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ, ಡಿಸಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದೆ. ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಹರಿಯಾಣದ ರೋಹ್ಟಕ್‌ನಲ್ಲಿ 4 ವರ್ಷಗಳಿಂದ ಸೇನಾ ನೇಮಕಾತಿಗೆ ತಯಾರಿ ನಡೆಸಿದ್ದ ‘ಸಚಿನ್‌’ ಎಂಬ ಯುವಕ ನೇಣು ಬಿಗಿದು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅವರು ತಮ್ಮ ಪಿಜಿಯಲ್ಲಿ ನೇಣುಬಿಗಿದಿದ್ದಾಗಿ ವರದಿಗಳು ಉಲ್ಲೇಖಿಸಿವೆ. ರಾಜ್ಯದ ಪಲ್ವಾಲ್‌ನಲ್ಲಿ ಹಿಂಸೆ ಭುಗಿಲೆದ್ದಿದ್ದು ಸರ್ಕಾರಿ ವಾಹನಗಳನ್ನು ಧ್ವಂಸಗೊಳಿಸಲಾಗಿದೆ.

ಉತ್ತರ ಪ್ರದೇಶದ ಅಲಿಗಢ್‌‌‌ನಲ್ಲಿ ಉದ್ರಿಕ್ತ ಯುವಕರ ಗುಂಪು ಗಭಾನಾ ಬಳಿ ಬಸ್‌ನ ಗಾಜು ಒಡೆದು ಹಾಕಿ, ಟೈರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ.

ಉದ್ರಿಕ್ತ ಪ್ರತಿಭಟನಾಕಾರರು ರಾಜ್ಯದ ಸರ್ಕಾರಿ ಬಸ್‌‌ಗಳ ಗಾಜುಗಳನ್ನು ಒಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಬಿಹಾರದ ಮೋತಿಹಾರಿಯಲ್ಲಿ ರೈಲಿಗೆ ಕಲ್ಲು ತೂರಾಟ ನಡೆಸಲಾಗಿದೆ.

ಮೋದಿ ಸರ್ಕಾರ ಜಾರಿಗೆ ತರುತ್ತಿರುವ ಅಗ್ನಿಪಥ್ ಯೋಜನೆ ವಿರುದ್ಧದ ಪ್ರತಿಭಟನೆಗಳು ಜಮ್ಮುವಿನಲ್ಲೂ ಪ್ರತಿಧ್ವನಿಸಿದ್ದು, ಸೇನಾ ಉದ್ಯೋಗಾಕಾಂಕ್ಷಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಸೇನಾ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಚದುರಿಸಲು ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...