Homeಮುಖಪುಟಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ...

ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ‘ಮತಗಳ್ಳತನ’ ನಡೆದಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿರೋಧ ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಸೋಮವಾರ (ಆ.11) ವಶಕ್ಕೆ ಪಡೆದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್, ಟಿಎಂಸಿ ಸಂಸದೆ ಸಾಗರಿಕ ಘೋಷ್ ಸೇರಿದಂತೆ ಪ್ರಮುಖರನ್ನು ಪೊಲೀಸರು ಅರ್ಧ ದಾರಿಯಲ್ಲಿ ವಶಕ್ಕೆ ಪಡೆದರು ಎಂದು ವರದಿಯಾಗಿದೆ.

ಈ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಹತ್ತಿ ಮುಂದುವರಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಆಡಳಿತ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರು ಬಳಸುತ್ತಿದೆ” ಎಂದು ಕಿಡಿಕಾರಿದರು.

“ವಿರೋಧ ಪಕ್ಷಗಳು ಸಂವಿಧಾನವನ್ನು ರಕ್ಷಿಸಲು ಹೋರಾಡುತ್ತಿವೆ. ನಮಗೆ ಶುದ್ಧ ಮತದಾರರ ಪಟ್ಟಿ ಬೇಕು” ಎಂದು ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿದರು.

“ಅವರು ಹೆದರಿದ್ದಾರೆ. ಇದೊಂದು ಹೇಡಿ ಸರ್ಕಾರ” ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಸಂಸತ್ ಭವನದ ಮಕರ ದ್ವಾರದಲ್ಲಿ ರಾಷ್ಟ್ರಗೀತೆಯೊಂದಿಗೆ ಮೆರವಣಿಗೆ ಪ್ರಾರಂಭಿಸಿದ್ದ ಪ್ರತಿಪಕ್ಷ ನಾಯಕರು, ‘ಎಸ್‌ಐಆರ್’ ಮತ್ತು ‘ವೋಟ್ ಚೋರಿ’ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಚುನಾವಣಾ ಆಯೋಗದ ಕೇಂದ್ರ ಕಚೇರಿಯತ್ತ ಸಾಗುತ್ತಿದ್ದರು. ಸಾರಿಗೆ ಭವನದ ಬಳಿ ಮೆರವಣಿಗೆಗೆ ತಡೆಯೊಡ್ಡಿದ ಪೊಲೀಸರು, ನಾಯಕರನ್ನು ವಶಕ್ಕೆ ಪಡೆದರು.

ಸಾರಿಗೆ ಭವನದ ಬಳಿ ಪೊಲೀಸರು ದೊಡ್ಡ ಮಟ್ಟದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಮೆರವಣಿಗೆಗೆ ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ದೆಹಲಿಯ ಬೀದಿಗಳಲ್ಲಿ ನಡೆಯಲು ಸಂಸದರಿಗೆ ಅನುಮತಿಯ ಅಗತ್ಯವಿಲ್ಲ” ಎಂದು ಸಮಾಜವಾದಿ ಪಕ್ಷದ ಸಂಸದ ರಾಮಗೋಪಾಲ್ ಯಾದವ್ ಹೇಳಿದರು. ಪೊಲೀಸ್ ನಿರ್ಬಂಧದ ಅಗತ್ಯವನ್ನು ಅವರು ಪ್ರಶ್ನಿಸಿದರು.

ಆರ್‌ಜೆಡಿಯ ಮನೋಜ್ ಝಾ ಎಸ್‌ಐಆರ್ ಒಂದು ‘ವಂಚನೆ’ ಎಂದು ಕರೆದಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಚುನಾವಣಾ ಆಯೋಗ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಅವರು ಉತ್ತರ ಪ್ರದೇಶದ ಉಪಚುನಾವಣೆಯಲ್ಲೂ ಮತಗಟ್ಟೆ ವಶಪಡಿಸಿಕೊಳ್ಳುವಿಕೆ ಮತ್ತು ಮತ ಕಳ್ಳತನ ನಡೆದಿದೆ ಆರೋಪಿಸಿದರು. ಈ ಬಗ್ಗೆ ಏಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿಯವರ ಆರೋಪಗಳನ್ನು ಬೆಂಬಲಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್, “ಚುನಾವಣಾ ಆಯೋಗವು ರಾಷ್ಟ್ರದ ಬಗ್ಗೆ ಮಾತ್ರವಲ್ಲ, ಸ್ವಯಂ ಒಂದು ಜವಾಬ್ದಾರಿಯನ್ನು ಹೊಂದಿದೆ. ನಮ್ಮ ಪ್ರಜಾಪ್ರಭುತ್ವವು ನಕಲಿ ಮತದಾನ ಮಾಡಲಾಗುತ್ತಿದೆಯೇ ಎಂಬ ಅನುಮಾನಗಳಿಂದ ಅಪಾಯಕ್ಕೆ ಸಿಲುಕಬಾರದು. ಏಕೆಂದರೆ ಅದು ತುಂಬಾ ಅಮೂಲ್ಯವಾಗಿದೆ. ಹಾಗಾಗಿ, ಚುನಾವಣಾ ಆಯೋಗ ವಿಶ್ವಾಸಾರ್ಹ ಉತ್ತರ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌, ಸಮಾಜವಾದಿ, ಎನ್‌ಸಿಪಿ (ಎಸ್‌ಪಿ), ಶಿವಸೇನೆ (ಯುಬಿಟಿ), ಟಿಎಂಸಿ, ಆರ್‌ಜೆಡಿ, ಡಿಎಂಕೆ ಸೇರಿದಂತೆ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷದ ಸಂಸದರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...