Homeಮುಖಪುಟರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

- Advertisement -
- Advertisement -

ಭಾರತೀಯ ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆ ಕುರಿತು ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆ ಮುಂದುವರೆದಿದೆ. ರೈಲ್ವೇ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ಎನ್‌ಟಿಪಿಸಿ ಹಂತ 1 ಪರೀಕ್ಷೆಯ ಫಲಿತಾಂಶಗಳಲ್ಲಿನ ಅಕ್ರಮಗಳನ್ನು ಪ್ರತಿಭಟಿಸಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಯೂನಿಯನ್ (ಎಐಎಸ್‌ಎ) ಮತ್ತು ಇತರ ಯುವ ಸಂಘಟನೆಗಳು ಶುಕ್ರವಾರ ‘ಬಿಹಾರ ಬಂದ್’ಗೆ ಕರೆ ನೀಡಿವೆ. ವಿದ್ಯಾರ್ಥಿಗಳ ಕಳವಳಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿರುವ ರೈಲ್ವೆ ಸಚಿವಾಲಯದ ಕ್ರಮವನ್ನು ವಿದ್ಯಾರ್ಥಿ ಸಂಘಟನೆಗಳು “ವಂಚನೆ” ಎಂದು ಕರೆದಿವೆ.

ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಹೋರಾಡುತ್ತಿರುವವರ ಜೊತೆಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಹಿಂಸೆಯೇ ಪರಿಹಾರದ ಮಾರ್ಗವಲ್ಲ ಎಂದು ಸಹ ಒತ್ತಿ ಹೇಳಿದ್ದಾರೆ.

ನಿನ್ನೆ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಉದ್ಯೋಗ ಆಕಾಂಕ್ಷಿಗಳು ಬುಧವಾರ ಬೃಹತ್ ಪ್ರತಿಭಟನೆಗಳನ್ನು ನಡೆಸಿದ ನಂತರ ರೈಲ್ವೆ ಸಚಿವಾಲಯವು ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳು (ಎನ್‌ಟಿಪಿಸಿ) ಮತ್ತು ಹಂತ 1 ಪರೀಕ್ಷೆಗಳನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದು, ಬಿಹಾರದ ಗಯಾದಲ್ಲಿ ಪ್ರತಿಭಟನಾಕಾರರು ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹಚ್ಚಿದ್ದಾರೆ.

ಸಚಿವಾಲಯವು ರಚಿಸಿರುವ ಸಮಿತಿಯು ಉತ್ತರ ಪ್ರದೇಶದ ಚುನಾವಣೆಯವರೆಗೆ ವಿಷಯವನ್ನು ಮುಂದೂಡುವ “ಪಿತೂರಿ” ಎಂದು AISA ಮತ್ತು ಇತರ ಯುವ ಸಂಘಟನೆಗಳು ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿವೆ. “ಇದು ತೀವ್ರ ನಿರುದ್ಯೋಗವನ್ನು ಎದುರಿಸುತ್ತಿರುವ ವಿದ್ಯಾರ್ಥಿ ಯುವಜನರ ಬೃಹತ್ ಆಂದೋಲನವಾಗಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಅಭ್ಯರ್ಥಿಗಳು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರೈಲ್ವೆ ಸಚಿವಾಲಯವು ಉನ್ನತ ಸಮಿತಿಯನ್ನು ಸ್ಥಾಪಿಸಿದ್ದು, ಮಾರ್ಚ್ 4 ರೊಳಗೆ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಮುಂದಿನ ತಿಂಗಳು ನಿಗದಿಯಾಗಿದ್ದ NTPC ಪರೀಕ್ಷೆಗಳನ್ನು ಮುಂದೂಡಿದ ಕೇಂದ್ರವು ಉದ್ಯೋಗ ಆಕಾಂಕ್ಷಿಗಳಿಗೆ ತಮ್ಮ ಕಳವಳಗಳನ್ನು ಸಲ್ಲಿಸಲು ಮೂರು ವಾರಗಳ ಕಾಲ (ಫೆಬ್ರವರಿ 16 ರವರೆಗೆ) ಕಾಲಾವಕಾಶ ನೀಡಿದೆ.

ಬುಧವಾರದ ಪ್ರತಿಭಟನೆಯ ಸಂದರ್ಭದಲ್ಲಿ, ಉದ್ಯೋಗ ಆಕಾಂಕ್ಷಿಗಳು ನವದೆಹಲಿ-ಕೋಲ್ಕತ್ತಾ ಮುಖ್ಯ ರೈಲು ಹಳಿಗಳನ್ನು ತಡೆದಿದ್ದು, ಆಂದೋಲನದ ಬಿಸಿಯು ಪೂರ್ವ ಉತ್ತರ ಪ್ರದೇಶದ ಗಡಿ ಪ್ರದೇಶಗಳಿಗೂ ಹರಡಿದೆ. ಗಯಾ, ಜೆಹಾನಾಬಾದ್, ಭಾಗಲ್ಪುರ್, ಸಸಾರಾಮ್, ಸಮಸ್ತಿಪುರ್ ಮತ್ತು ಛಾಪ್ರಾ ಜಿಲ್ಲೆಗಳಲ್ಲಿ ರೈಲ್ವೆ ಆಸ್ತಿಗಳಿಗೆ ಹಾನಿಮಾಡಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ; ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...