Homeಅಂತರಾಷ್ಟ್ರೀಯಶೇಖ್‌ ಹಸೀನಾ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ ಬಾಂಗ್ಲಾದೇಶ ಸರ್ಕಾರ

ಶೇಖ್‌ ಹಸೀನಾ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ ಬಾಂಗ್ಲಾದೇಶ ಸರ್ಕಾರ

- Advertisement -
- Advertisement -

ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ವಿರುದ್ಧ ಢಾಕಾದಲ್ಲಿ ಯೋಜಿಸಲಾಗಿದ್ದ ಪ್ರತಿಭಟನೆಗೆ ಮುನ್ನ ಬಾಂಗ್ಲಾದೇಶ ಸೇನೆಯು ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ನೂರಾರು ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಬಂಧಿಸಿದೆ. ಭಾನುವಾರ ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದ ಪ್ರತಿಭಟನೆಗೆ ಮುಂಚಿತವಾಗಿ ಢಾಕಾ ಕೋಟೆಯಾಗಿ ಮಾರ್ಪಟ್ಟಿದೆ ಎಂದು ವರದಿಗಳು ಹೇಳಿವೆ.

ಅವಾಮಿ ಲೀಗ್‌ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿದ್ದು, ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (ಬಿಜಿಬಿ)ದ 191 ಪ್ಲಟೂನ್‌ಗಳನ್ನು ನಗರ ಮತ್ತು ಇತರ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ಶೇಖ್‌ ಹಸೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವಾಮಿ ಲೀಗ್ ನಡೆಸಲು ಉದ್ದೇಶಿಸಿದ್ದ ಪ್ರಮುಖ ಶಕ್ತಿ ಪ್ರದರ್ಶನದಲ್ಲಿ, ಕಾರ್ಯಕರ್ತರು, ಬೆಂಬಲಿಗರು ಮತ್ತು ಭೂಗತ ನಾಯಕರು ಢಾಕಾದ ಗುಲಿಸ್ತಾನ್, ಝೀರೋ ಪಾಯಿಂಟ್ ಮತ್ತು ನೂರ್ ಹೊಸೈನ್ ಸ್ಕ್ವೇರ್ ಪ್ರದೇಶಗಳಲ್ಲಿ ಜಮಾಯಿಸುವ ನಿರೀಕ್ಷೆಯಿತ್ತು. ಈ ಪ್ರತಿಭಟನೆಯಲ್ಲಿ ತಮ್ಮ ನಾಯಕರ ವಿರುದ್ಧ ನಡೆಸುತ್ತಿರುವ ಸುಳ್ಳು ಪ್ರಚಾರದ ವಿರುದ್ಧ, ಪಕ್ಷದ ವಿದ್ಯಾರ್ಥಿ ವಿಭಾಗವಾದ ಛಾತ್ರ ಲೀಗ್ ಅನ್ನು ನಿಷೇಧಿಸುವುದರ ವಿರುದ್ಧ ಮತ್ತು ಅವಾಮಿ ಲೀಗ್ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಕಿರುಕುಳದ ವಿರುದ್ಧ ಪ್ರತಿಭಟಿಸುವ ಬಗ್ಗೆ ಪಕ್ಷವು ಯೋಜಿಸಿತ್ತು.

ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ), ಜಮಾತ್-ಎ-ಇಸ್ಲಾಮಿ ಮತ್ತು ಇತರ ಗುಂಪುಗಳ ಪ್ರತಿಭಟನೆಗಳ ನಂತರ ಈ ವರ್ಷದ ಆಗಸ್ಟ್ 5 ರಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದರು. ಇದರ ನಂತರ ದೇಶದ ನೇತೃತ್ವವನ್ನು ನೋಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ ಅವರು ವಹಿಸಿಕೊಂಡಿದ್ದಾರೆ. ಈ ವೇಳೆ ಶೇಖ್ ಹಸೀನಾ ಅವರ ಪಕ್ಷದ ಮೇಲೆ ಭಾರಿ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಅವಾಮಿ ಲೀಗ್‌ನ ಯಾವುದೇ ಸಭೆ ಅಥವಾ ಪ್ರತಿಭಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಬಿಎನ್‌ಪಿ ಮತ್ತು ಜಮಾತ್ ಘೋಷಿಸಿವೆ. ಅವಾಮಿ ಲೀಗ್‌ನ ಪ್ರಧಾನ ಕಛೇರಿಯಾದ ಗುಲಿಸ್ತಾನ್‌ನಂತಹ ಪ್ರದೇಶಗಳು ಮತ್ತು ಇತರ ಸಂಭಾವ್ಯ ಪ್ರತಿಭಟನಾ ಸ್ಥಳಗಳನ್ನು ಜಮಾತ್-ಎ-ಇಸ್ಲಾಮಿ ಮತ್ತು BNP ಕಾರ್ಯಕರ್ತರು ಅವಾಮಿ ಲೀಗ್ ಬೆಂಬಲಿಗರು ಸೇರುವುದನ್ನು ತಡೆಯಲು ಆಕ್ರಮಿಸಿಕೊಂಡಿದ್ದಾರೆ.

ಪ್ರತಿಭಟನೆಗೆ ಅನುಮತಿ ನಿರಾಕರಿಸಿರುವ ಮುಹಮ್ಮದ್ ಯೂನಸ್ ಆಡಳಿತವು ಅವಾಮಿ ಲೀಗ್ ಪಕ್ಷವನ್ನು “ಫ್ಯಾಸಿಸ್ಟ್ ಪಕ್ಷ” ಎಂದು ಉಲ್ಲೇಖಿಸಿದೆ. ಜೊತೆಗೆ ಯಾವುದೇ “ಹಿಂಸಾಚಾರವನ್ನು ಪ್ರಚೋದಿಸುವ ಪ್ರಯತ್ನಗಳನ್ನು” ಸಹಿಸುವುದಿಲ್ಲ ಎಂದು ಹೇಳಿದೆ.

“ಅವಾಮಿ ಲೀಗ್ ಪಕ್ಷವೂ ಪ್ರಸ್ತುತ ಫ್ಯಾಸಿಸ್ಟ್ ರೂಪದಲ್ಲಿ ಇರುವ ಪಕ್ಷವಾಗಿದೆ. ಈ ಫ್ಯಾಸಿಸ್ಟ್ ಪಕ್ಷಕ್ಕೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಮಧ್ಯಂತರ ಸರ್ಕಾರವು ದೇಶದಲ್ಲಿ ಹಿಂಸಾಚಾರ ಅಥವಾ ಕಾನೂನು ಸುವ್ಯವಸ್ಥೆಯನ್ನು ಒಡೆಯುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ” ಎಂದು ಯೂನಸ್ ಅವರ ಪತ್ರಿಕಾ ಕಾರ್ಯದರ್ಶಿ ಶಫೀಕುಲ್ ಆಲಂ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರ್ಯಾಲಿಗಳು, ಸಭೆಗಳು ಅಥವಾ ಮೆರವಣಿಗೆಗಳನ್ನು ನಡೆಸಲು ಪ್ರಯತ್ನಿಸುವ ಜನರು “ಕಾನೂನು ಜಾರಿಗೊಳಿಸುವ ಏಜೆನ್ಸಿಗಳ ಸಂಪೂರ್ಣವಾಗಿ ಎದುರಿಸುತ್ತಾರೆ” ಎಂದು ಆಲಂ ಹೇಳಿದ್ದಾರೆ. ಏತನ್ಮಧ್ಯೆ, ತಮ್ಮ ಪ್ರತಿಭಟನೆಯು ಬಾಂಗ್ಲಾದೇಶದ ಜನರ ಹಕ್ಕುಗಳಿಗಾಗಿ ಮತ್ತು ಮೂಲಭೂತವಾದಿ ಶಕ್ತಿಗಳ ಉದಯದ ವಿರುದ್ಧವಾಗಿದೆ ಎಂದು ಅವಾಮಿ ಲೀಗ್ ಹೇಳಿದೆ.

“ನಮ್ಮ ಪ್ರತಿಭಟನೆಯು ದೇಶದ ಜನರ ಹಕ್ಕುಗಳನ್ನು ಕಸಿದುಕೊಳ್ಳುವುದರ ವಿರುದ್ಧ; ಮೂಲಭೂತವಾದಿ ಶಕ್ತಿಗಳ ಉದಯದ ವಿರುದ್ಧ; ಸಾಮಾನ್ಯ ಜನರ ಜೀವನವನ್ನು ಅಡ್ಡಿಪಡಿಸುವ ಪಿತೂರಿಯ ವಿರುದ್ಧವಾಗಿದೆ. ಪ್ರಸ್ತುತ ಆಡಳಿತದ ದುರಾಡಳಿತದ ವಿರುದ್ಧದ ಪ್ರತಿಭಟನೆಯಲ್ಲಿ ಅವಾಮಿ ಲೀಗ್ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸೇರಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ” ಎಂದು ಪಕ್ಷವು ಹೇಳಿದೆ.

ಈ ನಡುವೆ ಹಲವಾರು ರಾಜಕೀಯ ಬಣಗಳು ಅವಾಮಿ ಲೀಗ್ ಅನ್ನು ನಿಷೇಧಿಸುವಂತೆ ಕರೆ ನೀಡಿವೆ. ಆದಾಗ್ಯೂ, ಈ ನಿರ್ಧಾರವು ರಾಜಕೀಯ ಪಕ್ಷಗಳ ಮೇಲೆ ಬಿಡಲಾಗಿದೆ ಎಂದು ಪ್ರಧಾನಿ ಯೂನಸ್ ಹೇಳಿದ್ದಾರೆ. ಮಧ್ಯಂತರ ಸರ್ಕಾರದ ಕೆಲವು ಮಂತ್ರಿಗಳು ಕೂಡಾ ಈ ನಿಷೇಧವನ್ನು ವಿರೋಧಿಸಿದ್ದು, ರಾಜಕೀಯ ಒಳಗೊಳ್ಳುವಿಕೆಯ ಮಹತ್ವವನ್ನು ಒತ್ತಿಹೇಳಿದ್ದಾರೆ. ದೇಶದ ಪ್ರಮುಖ ಪಕ್ಷವಾದ BNP ಕೂಡ ಯಾವುದೇ ರಾಜಕೀಯ ಪಕ್ಷದ ನಿಷೇಧವನ್ನು ವಿರೋಧಿಸಿದೆ.

ಇದನ್ನೂ ಓದಿ: ಮಹಾ ವಿಕಾಸ್ ಅಘಾಡಿ ಪ್ರಣಾಳಿಕೆ; ಮಹಿಳೆಯರಿಗೆ ₹3 ಸಾವಿರ, ಜಾತಿ ಗಣತಿ ಭರವಸೆ

ಮಹಾ ವಿಕಾಸ್ ಅಘಾಡಿ ಪ್ರಣಾಳಿಕೆ; ಮಹಿಳೆಯರಿಗೆ ₹3 ಸಾವಿರ, ಜಾತಿ ಗಣತಿ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...