Homeಮುಖಪುಟಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

ಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಕುರಿತು ಕ್ಷಿಪ್ರ ತನಿಖೆ ನಡೆಸುವುದಾಗಿ ಕ್ರೀಡಾ ಸಚಿವರು ಭರವಸೆ ನೀಡಿದ ನಂತರ ಭಾರತದ ಅಗ್ರ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಸಧ್ಯಕ್ಕೆ ಸ್ಥಗಿತಗೊಳಿಸಿದ್ದಾರೆ.

ಆರೋಪಿತ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ ನಿಂದ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಅವರ ಪ್ರತಿಭಟನೆಗೆ ರೈತ ಸಂಘಟನೆಗಳು ಹಾಗೂ ಹಲವು ರಾಜಕೀಯ ನಾಯಕರು ಬೆಂಬಲ ಸೂಚಿಸಿದ್ದಾರೆ.

ಬುಧವಾರ, ಪ್ರತಿಭಟನಾ ನಿರತ ಕುಸ್ತಿಪಟುಗಳು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿ ಸುಮಾರು ಆರು ಗಂಟೆಗಳ ಕಾಲ ಮಾತುಕತೆ ನಡೆಸಿದರು. ಜೂನ್ 15ರೊಳಗೆ ಸಿಂಗ್ ವಿರುದ್ಧ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸುತ್ತಾರೆ ಎಂದು ಠಾಕೂರ್ ಹೇಳಿದರು.

”ಅಲ್ಲಿಯವರೆಗೆ ಯಾವುದೇ ಪ್ರದರ್ಶನಗಳನ್ನು ನಡೆಸುವುದಿಲ್ಲ ಎಂದು ಕುಸ್ತಿಪಟುಗಳು ಭರವಸೆ ನೀಡಿದ್ದಾರೆ” ಎಂದು ಅನುರಾಗ್ ಠಾಕೂರ್ ಹೇಳಿದರು.

”ಜೂನ್ 30ರೊಳಗೆ ಡಬ್ಲ್ಯುಎಫ್‌ಐ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿದೆ ಮತ್ತು ಹೊಸ ಪ್ಯಾನೆಲ್‌ನಲ್ಲಿ ಸಿಂಗ್ ಅಥವಾ ಅವರ ಯಾವುದೇ ನಿಕಟ ಸಹವರ್ತಿಗಳು ಪಾತ್ರವನ್ನು ಹೊಂದಿರುವುದಿಲ್ಲ” ಎಂದು ಹೇಳಿದರು.

ಕುಸ್ತಿಪಟುಗಳು ಮೊದಲು ಜನವರಿಯಲ್ಲಿ ಪ್ರತಿಭಟನೆಯನ್ನು ಪ್ರಾರಂಭಿಸಿದರು. ಆಗ ಬ್ರಿಜ್‌ಭೂಷಣ್ ಸಿಂಗ್‌ ಅವರನ್ನು ಆಡಳಿತಾತ್ಮಕ ಅಧಿಕಾರದಿಂದ ಕೆಲವು ವಾರಗಳವರೆಗೆ ಭಾರತದ ಕ್ರೀಡಾ ಸಚಿವಾಲಯವು ದೂರ ಇಟ್ಟಿತು. ಸರ್ಕಾರವು ಅವರ ದೂರುಗಳನ್ನು ತನಿಖೆ ಮಾಡುವುದಾಗಿ ಭರವಸೆ ನೀಡಿದ ನಂತರ ಅದೇ ತಿಂಗಳು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಜೂ. 15ರೊಳಗೆ ತನಿಖೆ ಪೂರ್ಣಗೊಳಿಸುವ ಭರವಸೆ ನೀಡಿದ ಕೇಂದ್ರ; ಪ್ರತಿಭಟನೆ ಇನ್ನೂ ಮುಗಿದಿಲ್ಲ ಎಂದ ಸಾಕ್ಷಿ ಮಲಿಕ್

ಸರ್ಕಾರದ ಭರವಸೆ ನಂಬಿ ಕುಸ್ತಿಪಟುಗಳು ಪ್ರತಿಭಟನೆಯಿಂದ ಹಿಂದೆ ಸರಿದರು. ಆದರೆ, ಸರ್ಕಾರ ಬ್ರಿಜ್‌ಭೂಷಣ್ ವಿರುದ್ಧ ಯಾವುದೇ ಕ್ರಮ ತಗೆದುಕೊಳ್ಳಲಿಲ್ಲ. ಹಾಗಾಗಿ ಕುಸ್ತಿಪಟುಗಳು ಏಪ್ರಿಲ್‌ನಲ್ಲಿ ಬ್ರಿಜ್‌ಭೂಷಣ್ ಬಂಧನಕ್ಕೆ ಆಗ್ರಹಿಸಿ ಪುನಃ ಪ್ರತಿಭಟನೆಯನ್ನು ಆರಂಭಿಸಿದರು.

ಆಡಳಿತಾರೂಢ ಬಿಜೆಪಿಯ ಪ್ರಭಾವಿ ಸಂಸದರಾಗಿರುವ ಸಿಂಗ್ ಅವರು ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಕುಸ್ತಿಪಟುಗಳ ಪ್ರತಿಭಟನೆಯು “ರಾಜಕೀಯ ಪ್ರೇರಿತ” ಎಂದು ಆರೋಪಿಸಿದ್ದಾರೆ.

ಕಳೆದ ತಿಂಗಳು, ಕುಸ್ತಿಪಟುಗಳು ಸೇರಿದಂತೆ ಅವರನ್ನು ಬೆಂಬಲಿಸುವವರು ಹೊಸ ಸಂಸತ್ ಕಟ್ಟಡದತ್ತ ಮೆರವಣಿಗೆ ಮಾಡಲು ಪ್ರಯತ್ನಿಸಿದಾಗ ಅವರನ್ನು ಬಂಧಿಸಲಾಯಿತು. ಅವರ ವಿರುದ್ಧ ಪೊಲೀಸರು ಗಲಭೆ ಸೇರಿದಂತೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಷ್ಟೇ ಅಲ್ಲದೇ ಅವರ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದ್ದಾರೆ.

ದೇಶಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳನ್ನು ರಸ್ತಯೆ ಮಧ್ಯೆ ಎಳೆದಾಡಿದ್ದು, ಬಸ್‌ಗಳಲ್ಲಿ ಎಳೆದುಕೊಂಡು ಹೋಗುವ ದೃಶ್ಯಗಳು ಸಾಕಷ್ಟು ವೈರಲ್ ಆಗಿದ್ದವು. ಅನೇಕ ಕ್ರೀಡಾಪಟುಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸರ್ಕಾರವನ್ನು ಟೀಕಿಸಿದ್ದರು.

ಮೇ 30 ರಂದು, ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯುವುದಾಗಿ ಎಚ್ಚರಿಕೆ ನೀಡಿದರು. ಆಬಂಳಿಕ ರೈತ ಮುಖಂಡರು ಕುಸ್ತರಿಪಟುಗಳನ್ನು ತಡೆದು ಸರ್ಕಾರಕ್ಕೆ ಐದು ದಿನಗಳ ಗಡುವು ನೀಡಿದರು.  ಪ್ರತಿಭಟನಾಕಾರರ ನಿಯೋಗವು ಕಳೆದ ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು.

ಕಿರುಕುಳದ ಬಗ್ಗೆ ಮೋದಿಗೆ ಹೇಳಿದ್ದೆ ಎಂದು ಭಾರತೀಯ ಕುಸ್ತಿಪಟು ಹೇಳುತ್ತಾರೆ. ‘#MeToo’ ಪ್ರತಿಭಟನೆಗಾಗಿ ಭಾರತದ ಕುಸ್ತಿಪಟುಗಳು ಒಲಿಂಪಿಕ್ ಕನಸನ್ನು ಪಣಕ್ಕಿಟ್ಟಿದ್ದಾರೆ.

ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮತ್ತು ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (ಯುಡಬ್ಲ್ಯೂಡಬ್ಲ್ಯು) – ಕ್ರೀಡೆಯ ಅಂತರರಾಷ್ಟ್ರೀಯ ಆಡಳಿತ ಮಂಡಳಿ – ಕುಸ್ತಿಪಟುಗಳನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿ ಹೇಳಿಕೆಗಳನ್ನು ನೀಡಿತು. ಅವರು ಸಿಂಗ್ ವಿರುದ್ಧದ ತನಿಖೆ ನಡೆಸದಿರುವುದಕ್ಕೆ ಟೀಕಿಸಿದರು.

ಇಲ್ಲಿಯವರೆಗೆ, ಪೊಲೀಸರು ಸಿಂಗ್ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ, ಇದರಲ್ಲಿ ಒಂದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಅಡಿಯಲ್ಲಿ ದಾಖಲಾಗಿದೆ. ಪೊಲೀಸರು ಬ್ರಿಜ್‌ಭೂಷಣ್ ಸಿಂಗ್‌ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ ಆದರೆ ಇನ್ನೂ ಬಂಧಿಸಿಲ್ಲ.

ಬುಧವಾರ, ಠಾಕೂರ್ ಅವರನ್ನು ಭೇಟಿ ಮಾಡಿದ ನಿಯೋಗದ ಭಾಗವಾಗಿದ್ದ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ, ಮುಂದಿನ ವಾರದೊಳಗೆ ಸಿಂಗ್ ವಿರುದ್ಧ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸುವುದಾಗಿ ಸರ್ಕಾರ ಅವರಿಗೆ ಭರವಸೆ ನೀಡಿದೆ ಎಂದು ಹೇಳಿದರು.

“ಆದರೆ ಜೂನ್ 15 ರೊಳಗೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಬಜರಂಗ್ ಪೂನಿಯಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...