Homeಕರ್ನಾಟಕಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

- Advertisement -
- Advertisement -

ರಾಜ್ಯಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲು ಮುಂದಾಗಿದ್ದ ವಿವಾದಾತ್ಮಕ ಕೃಷಿ ಕಾನೂನುಗಳು ಇಂದು ವಿಧಾನಪರಿಷತ್ತಿನಲ್ಲಿ ಬಹುಮತಪಡೆದು ಅಂಗೀಕಾರವಾಗಿದೆ. ಇದನ್ನು ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದ ಜನಶಕ್ತಿ ಸಂಘಟನೆಯ ಹೋರಾಟಗಾರರು ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಹೋರಾಟಗಾರರ ಬಂಧನದ ಚಿತ್ರಗಳನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ, “ಭೂ ಸುಧಾರಣಾ (ಸ್ವಾಧೀನ) ಕಾಯಿದೆಗೆ ತಿದ್ದುಪಡಿ ಅಂಗಿಕಾರ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ನಮ್ಮೆಲ್ಲರ ಬಂಧನವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

ರಾಜ್ಯ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಈ ಮೊದಲು ವಿರೋಧಿಸಿದ್ದ ಜೆಡಿಎಸ್ ಪಕ್ಷ ಇಂದು ಅಚ್ಚರಿಯ ರೀತಿಯಲ್ಲಿ ಬಿಜೆಪಿ ಪರವಾಗಿ ವಿಧಾನ ಪರಿಷತ್‌ನಲ್ಲಿ ಮಸೂದೆ ಪರ ಮತ ಹಾಕಿದೆ. ಇದರಿಂದ ಮಸೂದೆಯು ಕಾಯ್ದೆಯಾಗಿ ಅಂಗೀಕಾರಗೊಂಡಿದೆ.

ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಆಗಸ್ಟ್ ಅಂತ್ಯದಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಬಹುಮತವಿದ್ದ ಬಿಜೆಪಿ ಅಂಗೀಕರಿಸಿತ್ತು. ಆದರೆ ಅದೇ ಸಮಯದಲ್ಲಿ ವಿಧಾನಪರಿಷತ್‌ನಲ್ಲಿ ಆ ಮಸೂದೆಗೆ ಅಂಗೀಕಾರ ಪಡೆಯಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ’ನನ್ನನ್ನು ಮತ್ತೊಮ್ಮೆ ಗೃಹಬಂಧನದಲ್ಲಿ ಇಡಲಾಗಿದೆ’: ಮೆಹಬೂಬಾ ಮುಫ್ತಿ

ಇಂದು ಕರ್ನಾಟಕ ಭೂ ಸುಧಾರಣೆ ಕಾಯ್ದೆ ಎರಡನೇ ತಿದ್ದುಪಡಿ ವಿಧೇಯಕವನ್ನು ಪರಿಷತ್ ನಲ್ಲಿ ಸಭಾಪತಿ ಮತಕ್ಕೆ ಹಾಕಿದರು. ಆಗ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಪರ ಜೆಡಿಎಸ್ ಸದಸ್ಯರು ಮತ ಚಲಾಯಿಸಿದ್ದಾರೆ. ಇದರಿಂದ ಹರ್ಷಗೊಂಡ ಬಿಜೆಪಿ ಸದಸ್ಯರು ಮೇಜು ಕಟ್ಟುವ ಮೂಲಕ ಸ್ವಾಗತಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ವಿಧೇಯಕದ ಪರವಾಗಿ 37 ಮತಗಳು ಹಾಗೂ ವಿಧೇಯಕದ ವಿರುದ್ದವಾಗಿ 21 ಮತಗಳು ಬಿದ್ದಿವೆ. ಹಾಗಾಗಿ ಕೊನೆಗೂ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಅಂಗೀಕಾರವಾಗಿದೆ.

ಇದನ್ನೂ ಓದಿ: ಬಿಜೆಪಿ ಮಂಡಿಸಿದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಪರ ಮತ ಹಾಕಿದ ಜೆಡಿಎಸ್: ಪರಿಷತ್‌ನಲ್ಲಿ…

ಈ ವಿಷಯ ತಿಳಿಯುತ್ತಿದ್ದಂತೆ ರೈತ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್‌ ಪಕ್ಷವು ತನ್ನನ್ನು ಬಿಜೆಪಿಗೆ ಮಾರಿಕೊಂಡಿದೆ ಎಂದು ರೈತರು ಕಿಡಿಕಾರಿದ್ದಾರೆ. ಏಕಾಏಕಿ ಮೌರ್ಯ ಸರ್ಕಲ್ ನಲ್ಲಿ ಹೋರಾಟಗಾರರು ರಸ್ತೆತಡೆ ಆರಂಭಿಸಿ ಬಿಜೆಪಿ ಮತ್ತು ಜೆಡಿಎಸ್‌ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಸ್ತೆ ತಡೆ ಪ್ರತಿಭಟನೆ ಮುಂದುವರೆಯುತ್ತಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಭೂ ಸುಧಾರಣಾ ಕಾಯಿದೆಗೆ ಹೊಸ ತಿದ್ದುಪಡಿ ಪ್ರಕಾರ ಈಗ ಒಬ್ಬರು 450 ಎಕರೆಗೂ ಹೆಚ್ಚು ಕೃಷಿ ಭೂಮಿ ಹೊಂದಬಹುದು. ಇಂತಹ ಕರಾಳ ತಿದ್ದುಪಡಿ ತರಲು ಕಾರ್ಪೋರೇಟ್ ಗಳ ಜೊತೆ ಮಾರಿಕೊಂಡು ಶಾಮೀಲಾಗಿರುವ ಜೆಡಿಎಸ್, ಬಿಜೆಪಿಗೆ ಧಿಕ್ಕಾರ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿ: ದೇಶಾದ್ಯಂತದ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...