Homeಚಳವಳಿಪ್ರತಿಭಟನಾ ನಿರತ ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ - ಮಂಡಿಯೂರಿತೆ ಬಿಜೆಪಿ?

ಪ್ರತಿಭಟನಾ ನಿರತ ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ – ಮಂಡಿಯೂರಿತೆ ಬಿಜೆಪಿ?

- Advertisement -
- Advertisement -

ಕೇಂದ್ರ ಸರ್ಕಾರದ ತಂಡವೊಂದು ಶನಿವಾರ ತಮಗೆ ಪ್ರಸ್ತಾವನೆಯೊಂದನ್ನು ನೀಡಿದ್ದು, ಅದನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಖಾನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹೇಳಿದ್ದಾರೆ. ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿರುವ ಭಾರತೀಯ ಅರಣ್ಯ ಸೇವಾ ಅಧಿಕಾರಿ ಪ್ರಿಯ ರಂಜನ್ ನೇತೃತ್ವದ ಉನ್ನತ ಮಟ್ಟದ ಕೇಂದ್ರ ಸರ್ಕಾರದ ತಂಡವು ಖಾನೌರಿ ಗಡಿಗೆ ಭೇಟಿ ನೀಡಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಭೇಟಿ ಮಾಡಿದೆ ಎಂದು ತಿಳಿದು ಬಂದಿದೆ. ಪ್ರತಿಭಟನಾ ನಿರತ

ದಲ್ಲೆವಾಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಆಮರಣಾಂತ ಉಪವಾಸ 54 ನೇ ದಿನಕ್ಕೆ ಕಾಲಿಟ್ಟಿದೆ. ದಲ್ಲೆವಾಲ್ ಅವರ ಆರೋಗ್ಯದ ಬಗ್ಗೆ ತಮಗೆ ಕಾಳಜಿಯಿದ್ದು, ಅವರ ಸ್ಥಿತಿಯ ಬಗ್ಗೆ ವಿಚಾರಿಸಲು ಬಂದಿರುವುದಾಗಿ ರಂಜನ್ ಹೇಳಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಕೇಂದ್ರದ ಅಧಿಕಾರಿಗಳು ದಲ್ಲೆವಾಲ್ ಅವರನ್ನು ಭೇಟಿಯಾಗಿದ್ದು, ಅವರು ಎರಡೂ ರೈತ ಸಂಘಗಳಾದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ನಾಯಕರೊಂದಿಗೆ ಮಾತನಾಡಲು ಕೇಳಿಕೊಂಡಿದ್ದಾರೆ ಎಂದು ರೈತ ನಾಯಕ ಅಭಿಮನ್ಯು ಕೊಹರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರೈತರ ಬೇಡಿಕೆಗಳ ಕುರಿತು ಎರಡೂ ಸಂಘಗಳ ನಾಯಕರು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಎರಡು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ರೈತ ನಾಯಕ ಕಾಕಾ ಸಿಂಗ್ ಕೋಟಾಲ ಸಭೆಯಿಂದ ಹೊರಬಂದು ಅಧಿಕಾರಿಗಳು ತಮಗೆ ಪ್ರಸ್ತಾವನೆಯನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ. “ಎರಡೂ ಸಂಘಟನೆಗಳ ನಾಯಕರು ಇದರ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ” ಎಂದು ಅವರು ಹೇಳಿದ್ದಾರೆ. ಪ್ರತಿಭಟನಾ ನಿರತ

ಭಾನುವಾರ ಮುಂಜಾನೆ, 2020-21ರ ರೈತರ ಪ್ರತಿಭಟನೆಗೆ ನೇತೃತ್ವ ವಹಿಸಿದ್ದ ರೈತ ಸಂಘಗಳ ಒಕ್ಕೂಟವಾದ ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ನಾಯಕರ ನಡುವೆ ಮತ್ತೊಮ್ಮೆ ಒಗ್ಗಟ್ಟು ಮೂಡಿಸಲು ನಡೆದ ಎರಡನೇ ಸಭೆ ಕೂಡಾ ವಿಫಲವಾಗಿದೆ ಎಂದು ವರದಿಯಾಗಿದೆ. ಪತ್ರಾನ್‌ನಲ್ಲಿ ನಡೆದ ರೈತ ಸಂಘಗಳ ನಡುವಿನ ಈ ಸಭೆಯು ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ಅಂತಿಮಗೊಳಿಸುವ ಉದ್ದೇಶವನ್ನು ಹೊಂದಿತ್ತು.

ಮೂರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯ ನಂತರ, ಕಿಸಾನ್ ಮಜ್ದೂರ್ ಮೋರ್ಚಾದ ಸಂಯೋಜಕ ಸರ್ವಾನ್ ಸಿಂಗ್ ಪಂಧೇರ್, ಅವರು ಕನಿಷ್ಠ ಏಕತೆಯತ್ತ ಹೆಜ್ಜೆ ಇಟ್ಟಿದ್ದಾರೆ ಆದರೆ ನಮ್ಮ ಉದ್ದೇಶ ಗರಿಷ್ಠ ಏಕತೆ ಎಂದು ಹೇಳಿಕೊಂಡಿದ್ದಾರೆ. ರೈತ ನಾಯಕ ದಲ್ಲೆವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಪರಿಗಣಿಸಿ ಮುಂದಿನ ಸಭೆಯನ್ನು ಮುಂದೂಡುವಂತೆ ಅವರು ಎಸ್‌ಕೆಎಂ ಆರು ಸದಸ್ಯರ ಸಮಿತಿಯನ್ನು ಒತ್ತಾಯಿಸಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಆಮರಣಾಂತ ಉಪವಾಸ ನಡೆಸುತ್ತಿರುವ ರೈತ ನಾಯಕ ಸುಖಜಿತ್ ಸಿಂಗ್ ಹಾರ್ಡೋ ಝಾಂಡೆ ಅವರು ಅನಾರೋಗ್ಯದಿಂದ ಸಭೆಯಿಂದ ಹೊರನಡೆಯಬೇಕಾಯಿತು. ಇದಲ್ಲದೆ, ರೈತ ನಾಯಕ ದಲ್ಲೆವಾಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಸಭೆಯನ್ನು ಮೊಟಕುಗೊಳಿಸಲಾಯಿತು. ಜನವರಿ 24 ರಂದು ನಡೆಯಲಿರುವ ಎಸ್‌ಕೆಎಂ ಸಾಮಾನ್ಯ ಸಭೆಯ ನಂತರ ಮುಂದಿನ ಸಭೆಯ ದಿನಾಂಕವನ್ನು ಘೋಷಿಸಲಾಗುವುದು.

ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖ ರೈತ ನಾಯಕರಲ್ಲಿ ಜೋಗಿಂದರ್ ಸಿಂಗ್ ಉಗ್ರನ್, ಬಲ್ಬೀರ್ ಸಿಂಗ್ ರಾಜೇವಾಲ್, ದರ್ಶನ್ ಪಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಸೇರಿದ್ದಾರೆ. ಎಂಎಸ್‌ಪಿಗೆ ಕಾನೂನುಬದ್ಧ ಖಾತರಿ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಮತ್ತು ಸಾಲ ಮನ್ನಾ ಸೇರಿದಂತೆ ನಿರ್ಣಾಯಕ ಬೇಡಿಕೆಗಳ ಸುತ್ತ ಚರ್ಚೆಗಳು ನಡೆದಿದ್ದವು.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...