Homeಮುಖಪುಟಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

ಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾಗವಹಿಸಿದ ಕಾರ್ಯಕ್ರಮವೊಂದರಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಹರಿಯಾಣ ಪೊಲೀಸರು ರೈತರ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಹಲವಾರು ರೈತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರೈತ ವಿರೋಧಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 6 ತಿಂಗಳಿನಿಂದ, ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್‌ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನುಗಳನ್ನು ಬೆಂಬಲಿಸುತ್ತಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹಿಸ್ಸಾರ್‌ ಜಿಲ್ಲೆಗೆ ಭೇಟಿ ನೀಡುವುದರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಚ್‌ ಮಾಡಿದ್ದಾರೆ. ಇದರಲ್ಲಿ ಹಲವು ರೈತರು ಗಾಯಗೊಂಡಿದ್ದಾರೆ.

ಪೊಲೀಸರು ಪ್ಲಾಸ್ಟಿಕ್ ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ತೆಗೆದ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಬಳಸಿದ್ದಾರೆ.ಹಲವು ರೈತರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ಹರಿಯಾಣದ ಹಿಸಾರ್‌ನಲ್ಲಿ ಪೊಲೀಸರು ಮತ್ತು ರೈತರ ನಡುವೆ ನಡೆದ ಜಟಾಪಟಿ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಸಿಡಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆಯ ನಂತರ ಸುಮಾರು ಎರಡು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ 9 ಯನ್ನು ರೈತರು ತಡೆದಿದ್ದರು. ಹಿಸಾರ್‌ಗೆ ಆಗಮಿಸಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ, ಬಂಧಿಸಿರುವ ಎಲ್ಲ ರೈತರನ್ನು ಬಿಡುಗಡೆ ಮಾಡದಿದ್ದರೆ, ಪ್ರತಿಭಟನಾಕಾರರು ಹರಿಯಾಣದ ಎಲ್ಲಾ ಪೊಲೀಸ್ ಠಾಣೆಗಳನ್ನು ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲೂ ಕಾಣಿಸಲು ಶುರುವಾದ ’ಲಸಿಕೆ ಸಂಗ್ರಹವಿಲ್ಲ’ ಬೋರ್ಡ್‌ಗಳು!

ಹರಿಯಾಣದ ಹಿಸ್ಸಾರ್‌ನಲ್ಲಿ 500 ಬೆಡ್‌ಗಳ ಕೊರೊನಾ ಸೆಂಟರ್‌ ಉದ್ಘಾಟಿಸಲು ಮುಖ್ಯಮಂತ್ರಿ ಖಟ್ಟರ್‌ ಜಿಲ್ಲೆಗೆ  ಆಗಮಿಸಿದ್ದರು. ಕಳೆದ ಆರು ತಿಂಗಳಿನಿಂದ ನಡೆಯುತ್ತಿರುವ ರೈತ ಹೋರಾಟವನ್ನು ವಿರೋಧಿಸುತ್ತಲೇ ಬಂದಿರುವ ಖಟ್ಟರ್‌ ಅವರನ್ನು ಈವರೆಗೂ ಜಿಲ್ಲೆಗೆ ಬರಲು ರೈತರು ಅವಕಾಶ ನೀಡಿಲ್ಲ.

“ಅವರು ಉದ್ದೇಶಪೂರ್ವಕವಾಗಿ ಜಿಲ್ಲೆಗೆ ಬರುತ್ತಿ‌ದ್ದಾರೆ. ಅವರು ಕೊರೊನಾ ಹರಡುತ್ತಿದ್ದಾರೆ ಮತ್ತು ಅದಕ್ಕಾಗಿ ನಮ್ಮನ್ನು ದೂಷಿಸುತ್ತಿದ್ದಾರೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ ಹಿಸಾರ್‌ಗೆ ಬರುವ ಮೊದಲು ವಿಡಿಯೋ ಸಂದೇಶದಲ್ಲಿ ಹೇಳಿದ್ದರು.

ಹರಿಯಾಣದಲ್ಲಿ ಕಳೆದ ಎರಡು ವಾರಗಳಿಂದ ಲಾಕ್‌ಡೌನ್ ಜಾರಿಯಲ್ಲಿದೆ. ಜೊತೆಗೆ ಸಾಂಕ್ರಾಮಿಕ ರೋಗದಿಂದಾಗಿ ಮೇ 24 ರವರೆಗೆ ಅದನ್ನು ಇನ್ನೊಂದು ವಾರ ವಿಸ್ತರಿಸಿದೆ. ಇವುಗಳ ನಡುವೆ ಕೊರೊನಾ ಆರೈಕೆ ಕೇಂದ್ರವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಖಟ್ಟರ್ ಭಾನುವಾತ ಹಿಸಾರ್‌ಗೆ ಬಂದಿದ್ದರು.


ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸೊರೇನ್ ಜಾಮೀನು ಅರ್ಜಿಗೆ ಉತ್ತರಿಸಲು ಇಡಿಗೆ ಕಾಲಾವಕಾಶ ನೀಡಿದ ಕೋರ್ಟ್‌

0
ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಜಾಮೀನು ಅರ್ಜಿಗೆ ಉತ್ತರಿಸಲು ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಮಂಗಳವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಇನ್ನೂ ಒಂದು ವಾರ ಕಾಲಾವಕಾಶ ನೀಡಿದೆ. ನ್ಯಾಯಾಲಯವು ಪ್ರಕರಣದ ಮುಂದಿನ...