Homeಕರ್ನಾಟಕಧರ್ಮಸ್ಥಳ ವ್ಯಾಪ್ತಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು: ನಾಳೆ (ಸೆ.25) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನ್ಯಾಯ...

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು: ನಾಳೆ (ಸೆ.25) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನ್ಯಾಯ ಸಮಾವೇಶ’

- Advertisement -
- Advertisement -

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೆಪ್ಟೆಂಬರ್ 25ರಂದು ‘ನ್ಯಾಯ ಸಮಾವೇಶ’ ಆಯೋಜಿಸಲಾಗಿದೆ. ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ನೂರಾರು ಅಸಹಜ ಸಾವು, ಅತ್ಯಾಚಾರ, ಕೊಲೆ ಮತ್ತು ನಾಪತ್ತೆ ಪ್ರಕರಣಗಳಿಗೆ ನ್ಯಾಯ ಒದಗಿಸಲು ಈ ಸಮಾವೇಶವು ಒತ್ತಾಯಿಸಲಿದೆ. ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ಯು ಕರ್ನಾಟಕದ ಪ್ರಗತಿಪರ ಸಂಘಟನೆಗಳಾದ ಎಡಪಕ್ಷಗಳು, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಹಾಗೂ ಸಾಂಸ್ಕೃತಿಕ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಮಾವೇಶವು ಅಂದು ಬೆಳಿಗ್ಗೆ 10:30ಕ್ಕೆ ಪ್ರಾರಂಭವಾಗಲಿದ್ದು, ರಾಷ್ಟ್ರ ಮತ್ತು ರಾಜ್ಯದ ಹಲವು ಚಿಂತಕರು, ಹೋರಾಟಗಾರರು, ಮತ್ತು ಸಾಹಿತಿಗಳು ಭಾಗವಹಿಸುವ ನಿರೀಕ್ಷೆ ಇದೆ.

ಸಮಾವೇಶದ ಪ್ರಮುಖ ಹಕ್ಕೊತ್ತಾಯಗಳು

ಸಮಾವೇಶದ ಮುಖ್ಯ ಉದ್ದೇಶವು ಕೇವಲ ಒಂದೆರಡು ಪ್ರಕರಣಗಳಿಗೆ ಸೀಮಿತವಾಗಿಲ್ಲ, ಬದಲಾಗಿ ವ್ಯವಸ್ಥಿತ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತುವುದಾಗಿದೆ. ಪ್ರಮುಖವಾಗಿ ಕೆಳಗಿನ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಡಲಾಗುವುದು:

1. ನಿರ್ದಿಷ್ಟ ಪ್ರಕರಣಗಳ ಮರು ತನಿಖೆ ಮತ್ತು ಎಸ್ಐಟಿ ರಚನೆ

  • ಪದ್ಮಲತಾ ಪ್ರಕರಣ (1986): ಧರ್ಮಸ್ಥಳ ಗ್ರಾಮದ ಸಿಪಿಐಎಂ ಕಾರ್ಯದರ್ಶಿ ಎಂ.ಕೆ. ದೇವಾನಂದರ ಪುತ್ರಿಯನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು. ಅವರ ತಂದೆ, ಇದು ಸ್ಥಳೀಯ ಫ್ಯೂಡಲ್ ಶಕ್ತಿಗಳ ವಿರುದ್ಧ ಹೋರಾಡಿದ ಕಾರಣ ನಡೆದ ಕೊಲೆ ಎಂದು ಕೊನೆಯವರೆಗೂ ಆರೋಪಿಸಿದ್ದರು. ಈ ಪ್ರಕರಣಕ್ಕೆ ಇದುವರೆಗೂ ನ್ಯಾಯ ಸಿಕ್ಕಿಲ್ಲ.
  • ವೇದವಲ್ಲಿ ಸಾವು (1979): ಎಸ್.ಡಿ.ಎಂ. ಹೈಸ್ಕೂಲ್‌ನಲ್ಲಿ ಶಿಕ್ಷಕಿಯಾಗಿದ್ದ ವೇದವಲ್ಲಿ ಅವರ ಅನುಮಾನಾಸ್ಪದ ಸಾವನ್ನು ಕೊಲೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಮುಖ್ಯೋಪಾಧ್ಯಾಯಿನಿ ಹುದ್ದೆಗೆ ಹಕ್ಕು ಮಂಡಿಸಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
  • ನಾರಾಯಣ ಮಾವುತ ಮತ್ತು ಸಹೋದರಿ ಕೊಲೆ (2012): ಧರ್ಮಸ್ಥಳದಲ್ಲಿ ಆನೆ ಮಾವುತನಾಗಿದ್ದ ನಾರಾಯಣ ಮತ್ತು ಅವರ ಸಹೋದರಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಪೊಲೀಸರು ‘ಪತ್ತೆಯಾಗದ ಪ್ರಕರಣ’ ಎಂದು ಮುಚ್ಚಿಹಾಕಿದ್ದು, ಪ್ರಭಾವಿ ವ್ಯಕ್ತಿಗಳು ಈಗ ನಾರಾಯಣ ವಾಸವಿದ್ದ ಜಮೀನಿನಲ್ಲಿ ಕಟ್ಟಡ ನಿರ್ಮಿಸಿದ್ದಾರೆ.
  • ಸೌಜನ್ಯ ಪ್ರಕರಣ (2012): ಅತ್ಯಾಚಾರ ಮತ್ತು ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದಲ್ಲಿ ಸಿಬಿಐ ಆರೋಪಿಸಿದ್ದ ಸಂತೋಷ್ ರಾವ್ ನಿರಪರಾಧಿ ಎಂದು ನ್ಯಾಯಾಲಯ ಬಿಡುಗಡೆಗೊಳಿಸಿದೆ. ಇದರಿಂದ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗದಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಒತ್ತಾಯಿಸಲಾಗುತ್ತಿದೆ.

ಈ ಎಲ್ಲಾ ಪ್ರಕರಣಗಳು ಸೇರಿದಂತೆ ಧರ್ಮಸ್ಥಳ ವ್ಯಾಪ್ತಿಯಲ್ಲಿ ದಾಖಲಾದ ಎಲ್ಲಾ ಅಸಹಜ ಸಾವು, ಅತ್ಯಾಚಾರ, ಮತ್ತು ಕೊಲೆ ಪ್ರಕರಣಗಳನ್ನು ಎಸ್ಐಟಿ (SIT) ತನಿಖೆಗೆ ಒಳಪಡಿಸಲು ಒತ್ತಾಯಿಸಲಾಗುವುದು. ಒಂದು ವೇಳೆ ಎಸ್ಐಟಿ ವ್ಯಾಪ್ತಿಗೆ ತರಲು ಸಾಧ್ಯವಾಗದಿದ್ದರೆ, ಈ ಎಲ್ಲಾ ಹಳೆಯ ಮತ್ತು ಗಂಭೀರ ಪ್ರಕರಣಗಳ ತನಿಖೆಗಾಗಿ ಪ್ರತ್ಯೇಕ ವಿಶೇಷ ತನಿಖಾ ತಂಡ ರಚಿಸಬೇಕೆಂದು ಆಗ್ರಹಿಸಲಾಗುವುದು.

2. ಭೂ ಅಕ್ರಮ ಮತ್ತು ಹಣಕಾಸು ದೌರ್ಜನ್ಯಗಳ ತನಿಖೆ

  • ಭೂ ಕಬಳಿಕೆ: ಧರ್ಮಸ್ಥಳದಲ್ಲಿ ದಶಕಗಳಿಂದ ವ್ಯಾಪಕವಾಗಿ ನಡೆಯುತ್ತಿರುವ ಸರ್ಕಾರಿ ಜಮೀನು, ದಲಿತರು ಮತ್ತು ಆದಿವಾಸಿಗಳ ಭೂ ಕಬಳಿಕೆ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಬಡ ಮತ್ತು ದುರ್ಬಲ ವರ್ಗದವರನ್ನು ಬಲವಂತವಾಗಿ ಒಕ್ಕಲೆಬ್ಬಿಸಿ, ಅವರ ಜಮೀನನ್ನು ಕಬಳಿಸಲಾಗಿದೆ ಎಂದು ಸಮಾವೇಶದ ಸಂಘಟಕರು ಆರೋಪಿಸಿದ್ದಾರೆ.
  • ಮೈಕ್ರೋ ಫೈನಾನ್ಸ್ ದೌರ್ಜನ್ಯಗಳು: ಗ್ರಾಮೀಣಾಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ನಡೆಯುತ್ತಿರುವ ಮೈಕ್ರೋ ಫೈನಾನ್ಸ್ ವ್ಯವಹಾರಗಳಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸಿ, ಸಾಲ ವಸೂಲಾತಿಯಲ್ಲಿ ದೌರ್ಜನ್ಯ, ಮಾನಸಿಕ ಹಿಂಸೆ ಮತ್ತು ಬಲವಂತದ ಆಸ್ತಿ ವಶಕ್ಕೆ ಪಡೆದಿರುವ ಪ್ರಕರಣಗಳ ತನಿಖೆಗೂ ಆಗ್ರಹಿಸಲಾಗುವುದು.

3. ದಲಿತ ಸಮುದಾಯಕ್ಕೆ ಮೂಲಭೂತ ಹಕ್ಕುಗಳು

  • ಹಕ್ಕುಪತ್ರ ಮತ್ತು ಜಮೀನು ವಿತರಣೆ: ಧರ್ಮಸ್ಥಳದಲ್ಲಿ ತಲೆಮಾರುಗಳಿಂದ ಸ್ವಚ್ಛತಾ ಕಾರ್ಮಿಕರಾಗಿ ದುಡಿಯುತ್ತಿರುವ ದಲಿತರ ಕುಟುಂಬಗಳು ವಾಸಿಸುವ ಅಶೋಕನಗರ (128 ಕುಟುಂಬಗಳು) ಮತ್ತು ಮುಂಡ್ರುಪಾಡಿ (42 ಕುಟುಂಬಗಳು) ದಲಿತ ಕಾಲೋನಿಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು.
  • ಸರ್ಕಾರಿ ಭೂಮಿ ವಿತರಣೆ: ಸರ್ಕಾರವು ಈ ಕುಟುಂಬಗಳಿಗೆ ತಲಾ ಒಂದು ಎಕರೆ ಸರ್ಕಾರಿ ಭೂಮಿಯನ್ನು ಒದಗಿಸಲು ಒತ್ತಾಯಿಸಲಾಗುವುದು.
  • ಕನಿಷ್ಠ ವೇತನ: ಸ್ವಚ್ಛತಾ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆಗಳ ಪ್ರಕಾರ ಕನಿಷ್ಠ ವೇತನ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಮಾವೇಶ ಒತ್ತಾಯಿಸಲಿದೆ.

ಈ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ, ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ ನ್ಯಾಯ ಸಮಾವೇಶದ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಮಹೇಶ್‌ ಶೆಟ್ಟಿ ತಿಮರೋಡಿ ಒಂದು ವರ್ಷ ದಕ್ಷಿಣ ಕನ್ನಡದಿಂದ ಗಡಿಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...