ಧರ್ಮಸ್ಥಳ ವ್ಯಾಪ್ತಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು: ನಾಳೆ (ಸೆ.25) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನ್ಯಾಯ ಸಮಾವೇಶ’

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೆಪ್ಟೆಂಬರ್ 25ರಂದು ‘ನ್ಯಾಯ ಸಮಾವೇಶ’ ಆಯೋಜಿಸಲಾಗಿದೆ. ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ನೂರಾರು ಅಸಹಜ ಸಾವು, ಅತ್ಯಾಚಾರ, ಕೊಲೆ ಮತ್ತು ನಾಪತ್ತೆ ಪ್ರಕರಣಗಳಿಗೆ ನ್ಯಾಯ ಒದಗಿಸಲು ಈ ಸಮಾವೇಶವು ಒತ್ತಾಯಿಸಲಿದೆ. ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ಯು ಕರ್ನಾಟಕದ ಪ್ರಗತಿಪರ ಸಂಘಟನೆಗಳಾದ ಎಡಪಕ್ಷಗಳು, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಹಾಗೂ ಸಾಂಸ್ಕೃತಿಕ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಮಾವೇಶವು ಅಂದು ಬೆಳಿಗ್ಗೆ 10:30ಕ್ಕೆ ಪ್ರಾರಂಭವಾಗಲಿದ್ದು, … Continue reading ಧರ್ಮಸ್ಥಳ ವ್ಯಾಪ್ತಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು: ನಾಳೆ (ಸೆ.25) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನ್ಯಾಯ ಸಮಾವೇಶ’