Homeಕರ್ನಾಟಕವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಅನುಮತಿಸುವುದಿಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವಾಗ್ದಾನ; ವರದಿ

ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಅನುಮತಿಸುವುದಿಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವಾಗ್ದಾನ; ವರದಿ

- Advertisement -
- Advertisement -

ವಿವಾದಿತ ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟಿಸಲು ಇನ್ನು ಮುಂದೆ ಅನುಮತಿಸುವುದಿಲ್ಲ ಎಂದು ಮಂಗಳವಾರ (ಏ.30) ರಾಜ್ಯ ಸರ್ಕಾರ ಹೈಕೋರ್ಟ್‌ಗೆ ವಾಗ್ದಾನ ನೀಡಿದೆ ಎಂದು barandbench.com ವರದಿ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆ ನಿವಾಸಿ ಎ. ರಾಜೇಶ್‌ ಎಂಬವರು ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 72ರಲ್ಲಿ ಬರುವ ಪಡೀಲ್‌ನಿಂದ ಬಿಸಿ ರೋಡ್‌ ರಸ್ತೆಯನ್ನು ಏಪ್ರಿಲ್‌ 18ರಂದು ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ನಿರ್ಬಂಧಿಸಿ ಪೊಲೀಸ್‌ ಆಯುಕ್ತರು ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು “ನ್ಯಾಯಾಲಯದ ಆದೇಶವನ್ನು ಪೊಲೀಸರು ಪಾಲಿಸಿಲ್ಲ. ರಾಷ್ಟ್ರೀಯ ಹೆದ್ದಾರಿ 72 ಅನ್ನು ನಿರ್ಬಂಧಿಸಿರಲಿಲ್ಲ. ಇದಕ್ಕೆ ಪೂರಕವಾಗಿ ವಿಡಿಯೋ, ಫೋಟೊಗ್ರಾಫ್‌ ಇದೆ” ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಪ್ರತಿಭಟನೆ ನಡೆದಿರುವುದರಿಂದ ಅರ್ಜಿ ಅನೂರ್ಜಿತವಾಗಿದೆ” ಎಂದಿದೆ ಎಂದು barandbench.com ವರದಿ ವಿವರಿಸಿದೆ.

ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿ “ಪೊಲೀಸರು ಸ್ಥಳದಲ್ಲಿ ಇದ್ದರು, ಎಲ್ಲವೂ ಸುಗಮವಾಗಿ ನಡೆದಿದೆ. ನಾವು ಮುಂದೆ ಯಾವುದೇ ಅನುಮತಿ ನೀಡುವುದಿಲ್ಲ” ಎಂದಿದ್ದಾರೆ. ಈ ಹೇಳಿಕೆಯನ್ನು ಆದೇಶದಲ್ಲಿ ದಾಖಲಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ದ ಕುಪಿತಗೊಂಡ ಪೀಠವು “ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಪರಿಗಣನೆಯಲ್ಲಿರುವಾಗ ನೀವು ಅನುಮತಿ ನೀಡುವುದನ್ನು ನಿಲ್ಲಿಸಬೇಕು. ಎಷ್ಟು ಹೇಳಿದರೂ ನೀವು ಕೇಳುವುದಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಪರಿಗಣಿಸಲ್ಪಟ್ಟಿಲ್ಲವೇ? ನೀವೇಕೆ ಅನುಮತಿ ನೀಡಿದಿರಿ?” ಎಂದು ಏರುಧ್ವನಿಯಲ್ಲಿ ಸರ್ಕಾರದ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.

ಅಲ್ಲದೆ, ಪ್ರಕರಣವು ಸುಪ್ರೀಂ ಕೋರ್ಟ್‌ ಪರಿಗಣನೆಯಲ್ಲಿರುವುದರಿಂದ ಯಾವುದೇ ಪ್ರತಿಭಟನೆಗೆ ಮುಂದೆ ಅನುಮತಿ ನೀಡುವುದಿಲ್ಲ ಎಂದು ಸರ್ಕಾರ ತಿಳಿಸಿದೆ ಎಂದು ಆದೇಶದಲ್ಲಿ ನ್ಯಾಯಾಲಯ ದಾಖಲಿಸಿದೆ. “ಪ್ರತಿಭಟನೆಗೆ ಅವಕಾಶ ನೀಡಬಾರದು” ಎಂದು ನ್ಯಾಯಾಲಯ ಮೌಖಿಕವಾಗಿ ಹೇಳಿದೆ ಎಂದು ವರದಿ ತಿಳಿಸಿದೆ.

ಸೌಜನ್ಯ : barandbench.com

ಪಾಕಿಸ್ತಾನ ಪರ ಘೋಷಣೆ ಕೂಗುವುದು ‘ದೇಶದ್ರೋಹ’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...